ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ನಿಂದನೆ – ಆರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು

ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ನಿಂದನೆ – ಆರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರತಿಭಟನೆಯೊಂದರಲ್ಲಿ ಮಾತನಾಡುತ್ತ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಈಶ್ವರ್‌ ಖಂಡ್ರೆ ಅವರ ಕುರಿತಾಗಿ ಆಡಿದ ಮಾತುಗಳು ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ವಿವಾದವನ್ನು ಸೃಷ್ಟಿಸಿದೆ. ಈ ವಿಚಾರ ಬಿಜೆಪಿ, ಕಾಂಗ್ರೆಸ್‌ ನಾಯಕರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಆರಗ ಜ್ಞಾನೇಂದ್ರ ಹೇಳಿಕೆಗೆ ಕಾಂಗ್ರೆಸ್ ನಾಯಕರು ಕೆರಳಿ ನಿಂತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಮೈಬಣ್ಣ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಗ ಜ್ಞಾನೇಂದ್ರ ದೂರು ದಾಖಲಿಸಲಾಗಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ

ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಶಿವಮೊಗ್ಗದ ಜಿಲ್ಲೆ ತೀರ್ಥಹಳ್ಳಿಯಲ್ಲಿ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆದಿತ್ತು. ಈ ವೇಳೆ ಮಾತನಾಡಿದ ಆರಗ ಜ್ಞಾನೇಂದ್ರ, ಅರಣ್ಯವೇ ಇಲ್ಲದ ಪ್ರದೇಶದವರು ಅರಣ್ಯ ಸಚಿವರಾಗುತ್ತಾರೆ. ಇದು ನಮ್ಮ ರಾಜ್ಯದ ದುರಂತ ಎಂದಿದ್ದಾರೆ. ಬೀದರ್ ಜಿಲ್ಲೆಯ ಈಶ್ವರ್ ಖಂಡ್ರೆ ಅರಣ್ಯ ಸಚಿವರಾಗಿರುವುದಕ್ಕೆ ಈ ಹೇಳಿಕೆ ನೀಡಿದ ಮಾಜಿ ಗೃಹ ಸಚಿವರು ಅಷ್ಟಕ್ಕೇ ಸುಮ್ಮನಾಗಿಲ್ಲ. ಆ ಭಾಗದವರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ ಅವರನ್ನು ನೋಡಿದರೆ ಗೊತ್ತಾಗುತ್ತೆ ಎಂದು ನಾಲಗೆ ಹರಿಬಿಟ್ಟಿದ್ದರು. ಆರಗ ಜ್ಞಾನೇಂದ್ರ ಅವರ ಹೇಳಿಕೆ ವಿರುದ್ಧ ದಲಿತ ಮುಖಂಡ ಹರ್ಷೇಂದ್ರ ಕುಮಾರ್ ಎನ್ನುವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಜಾತಿ‌ ನಿಂದನೆ ದೂರು ನೀಡಿದ್ದಾರೆ.

ಆರಗ ಜ್ಞಾನೇಂದ್ರ ಅವರ ಈ ಹೇಳಿಕೆ ಕಾಂಗ್ರೆಸ್ ನಾಯಕರನ್ನು ಕೆರಳಿ ಕೆಂಡವಾಗುವಂತೆ ಮಾಡಿದೆ. ಖರ್ಗೆ ಅವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿ ಆರಗ ಜ್ಞಾನೇಂದ್ರ, ಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಸರಣಿ ಟ್ವೀಟ್ ಮೂಲಕ ಕಿಡಿ ಕಿಡಿಕಾರಿದೆ.

ಜ್ಞಾನೇಂದ್ರ ಅವರ ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಆರಗ ಜ್ಞಾನೇಂದ್ರ ಅವರು ಸ್ಪಷ್ಟನೆ ನೀಡಿದ್ದಾರೆ. ತಮ್ಮ ಮಾತಿನ ಭರದಲ್ಲಿ ಬಾಯಿತಪ್ಪಿ ಆಡಿದ ಮಾತು ಇದಾ​ಗಿದೆ. ಖರ್ಗೆ ಅವರ ಕುರಿತು ತಮಗೆ ಅಪಾರ ಗೌರವವಿದೆ ಎಂದು ಹೇಳಿದ್ದಾರೆ.

suddiyaana