ತಪ್ಪೊಪ್ಪಿಕೊಂಡ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ – ಆರೋಪ ಸಾಬೀತಾದರೆ ಶಿಕ್ಷೆ ಪ್ರಮಾಣ ಎಷ್ಟು?

ತಪ್ಪೊಪ್ಪಿಕೊಂಡ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ – ಆರೋಪ ಸಾಬೀತಾದರೆ ಶಿಕ್ಷೆ ಪ್ರಮಾಣ ಎಷ್ಟು?

ಬಿಗ್ ಬಾಸ್ ಮನೆಯಿಂದ ಅರೆಸ್ಟ್ ಆಗಿರುವ ಸ್ಪರ್ಧಿ ವರ್ತೂರ್ ಸಂತೋಷ ಅವರನ್ನು ಅರಣ್ಯಾಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಹುಲಿ ಉಗುರು ಬಂದಿದ್ದು ಹೇಗೆ? ಯಾರು ಕೊಟ್ಟರು? ಎಲ್ಲಿಂದ ಖರೀದಿ ಮಾಡಿದ್ದೀರಿ ಎಂಬ ಪ್ರಶ್ನೆಗಳನ್ನು ಅರಣ್ಯಾಧಿಕಾರಿಗಳು ಸಂತೋಷ್ ಮುಂದೆ ಇಟ್ಟಿದ್ದಾರೆ. ಜೊತೆಗೆ ವರ್ತೂರು ಸಂತೋಷ್ ಆರೋಪ ಸಾಬೀತಾದರೆ ಶಿಕ್ಷೆ ಹೇಗೆ ಎಂಬ ವಿವರ ಇಲ್ಲಿದೆ.

ಇದನ್ನೂ ಓದಿ:  ಬಿಗ್‌ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಬಂಧನ – ಬಿಗ್‌ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯ ಬಂಧನ

ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ವಿರುದ್ಧ ಜಾಮೀನು ರಹಿತ ಸೆಕ್ಷನ್ ಗಳ ಅಡಿಯಲ್ಲಿ ಎಫ್ ಐ ಆರ್ ದಾಖಲು ಮಾಡಲಾಗಿದೆ. ಉಗುರಿನ ಮೂಲವನ್ನ ಅರಣ್ಯಾಧಿಕಾರಿಗಳು ಕೆದಕುತ್ತಿದ್ದಾರೆ. ಯಾರು ನಿಮಗೆ ಕೊಟ್ಟಿದ್ದು, ಎಲ್ಲಿ ಸಿಕ್ಕಿತು ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ. ಎಫ್.ಎಸ್.ಎಲ್ ಗೆ ಉಗುರನ್ನು ರವಾನೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಸಂತೋಷ್ ಬಂಧನ ಆಗಿದೆ. ಆರೋಪ ಸಾಬೀತಾದರೆ 3ರಿಂದ 7 ವರ್ಷಗಳವರೆಗೆ ಶಿಕ್ಷೆ ಆಗುತ್ತದೆ. 10,000ರಿಂದ 25,000ದವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ.

ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ‘ನಾನು ವ್ಯಕ್ತಿಯೊಬ್ಬನಿಂದ ಹುಲಿ ಉಗುರು ಖರೀದಿಸಿದ್ದೆ’ ಎಂದು ಅವರು ಅರಣ್ಯಾಧಿಕಾರಿಗಳ ಎದುರು ಹೇಳಿದ್ದಾರಂತೆ. ಈ ಮೂಲಕ ತಮಗೆ ಹುಲಿ ಉಗುರು ಸಿಕ್ಕಿದ್ದು ಹೇಗೆ ಎಂಬುದನ್ನು ಅವರು ವಿವರಿಸಿದ್ದಾರೆ. ಜೊತೆಗೆ ತನ್ನ ಬಳಿ ಇರುವುದು ಒರ್ಜಿನಲ್ ಹುಲಿ ಉಗುರು ಧರಿಸಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ.

ವರ್ತೂರು ಸಂತೋಷ್ ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಅನ್ನು ಅವರು ಹಾಕಿಕೊಂಡಿದ್ದರು ಎಂದು ಶರತ್ ಎಂಬುವವರು ದೂರು ನೀಡಿದ್ದರು. ಈ ಬಗ್ಗೆ ಶರತ್ ಕೆಲವೊಂದು ವಿಚಾರ ಹೇಳಿದ್ದಾರೆ. ‘ಎರಡು ದಿನದ ಹಿಂದೆ ನಾನು ದೂರು ಕೊಟ್ಟಿದ್ದೆ. ಹುಲಿಯುಗುರು ಇರುವ ಪದಕವನ್ನು ಅವರು ಧರಿಸಿದ್ದರು. ಇದು ವನ್ಯಜೀವಿ ಕಾಯ್ದೆಯ ಪ್ರಕಾರ  ತಪ್ಪು. ಸೆಲೆಬ್ರಿಟಿಗಳು ರೂಲ್ಸ್ ಪಾಲನೆ ಮಾಡಬೇಕು. ಈ ರೀತಿ ಹುಲಿಯುಗುರಿನ ಪದಕ ಧರಿಸೋದು ತಪ್ಪು. ಅದು ಒರಿಜಿನಲ್ಲೋ ಅಥವಾ ಡೂಪ್ಲಿಕೇಟ್ ಅನ್ನೋದು ಫಾರೆನ್ಸಿಕ್ ನವರು ಡಿಸೈಡ್ ಮಾಡಬೇಕು’ ಎಂದಿದ್ದಾರೆ.

 

Sulekha