ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ – ವರುಣಾದಿಂದ ಸಿದ್ದರಾಮಯ್ಯ.. ಯಾರಿಗೆ ಯಾವ ಕ್ಷೇತ್ರ..?
2023 ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 124 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿದೆ. ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷೇತ್ರ ಹುಡುಕಾಟ ಗೊಂದಲಕ್ಕೆ ತೆರೆ ಬಿದ್ದಿದ್ದು, ವರುಣಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹ
ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ 135 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಲಿದೆ ಎನ್ನಲಾಗಿತ್ತು. ಆದರೆ 124 ಕ್ಷೇತ್ರಗಳಿಗೆ ಮಾತ್ರ ಟಿಕೆಟ್ ಘೋಷಿಸಿರುವ ಕಾಂಗ್ರೆಸ್ 100 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ.
ಇನ್ನು ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಗೆ ಟಿಕೆಟ್ ನೀಡಲಾಗಿದೆ. ಕನಕಪುರ ಕ್ಷೇತ್ರದಿಂದ ಡಿಕೆಶಿ ಸ್ಪರ್ಧಿಸಲಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿ ಗ್ರಾಮೀಣ ಕ್ಷೇತ್ರ, ಶಾಮನೂರು ಶಿವಶಂಕರಪ್ಪನವರು ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಎಂ. ಬಿ ಪಾಟೀಲ್ ಗೆ ಬಬಲೇಶ್ವರದಲ್ಲಿ ಟಿಕೆಟ್ ನೀಡಲಾಗಿದೆ. ಆದರೆ ಮೊದಲು ಸಿದ್ದರಾಮಯ್ಯ ಸ್ಫರ್ಧಿಸಬೇಕಾಗಿದ್ದ ಕೋಲಾರ ಕ್ಷೇತ್ರದಿಂದ ಯಾರು ಸ್ಪರ್ಧಿಸುತ್ತಾರೆ ಅನ್ನೋದನ್ನು ರಿವೀಲ್ ಮಾಡಿಲ್ಲ.
Congress party announces the first list of 124 candidates for Karnataka Assembly Elections.
Names of former CM Siddaramaiah, and State party president DK Shivakumar are present in the first list. pic.twitter.com/TC9vXJfrX5
— ANI (@ANI) March 25, 2023