ಕಾಂಗ್ರೆಸ್‌ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ -‌ ಸಿದ್ದರಾಮಯ್ಯಗೆ ತಪ್ಪಿದ ಕೋಲಾರ ಟಿಕೆಟ್

ಕಾಂಗ್ರೆಸ್‌ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ -‌ ಸಿದ್ದರಾಮಯ್ಯಗೆ ತಪ್ಪಿದ ಕೋಲಾರ ಟಿಕೆಟ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನ ದಿನಗಣನೆ ಪ್ರಾರಂಭವಾಗಿದೆ. ಇದೀಗ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. 3 ನೇ ಪಟ್ಟಿಯಲ್ಲಿ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಪ್ರಮುಖವಾಗಿ ಬಿಜೆಪಿ ಬಿಟ್ಟು ಇತ್ತೀಚೆಗೆ ಕಾಂಗ್ರೆಸ್‌ ಸೇರಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಅಥಣಿ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ.  ಭಾರೀ ಕುತೂಹಲ ಮೂಡಿಸಿದ್ದ ಕೋಲಾರ ಟಿಕೆಟ್ ಕೊತ್ತನೂರು ಮಂಜುನಾಥ್ ಗೆ ನೀಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.

suddiyaana