ಕೊನೇ ಕ್ಷಣದಲ್ಲಿ ಮುಳಬಾಗಿಲು ಕ್ಷೇತ್ರದ ‘ಕೈ’ ಅಭ್ಯರ್ಥಿ ಬದಲು – ಕೊತ್ತನೂರು ಮಂಜುನಾಥ್ ಹಠಕ್ಕೆ ಮಣಿದ್ರಾ ನಾಯಕರು?

ಕೊನೇ ಕ್ಷಣದಲ್ಲಿ ಮುಳಬಾಗಿಲು ಕ್ಷೇತ್ರದ ‘ಕೈ’ ಅಭ್ಯರ್ಥಿ ಬದಲು – ಕೊತ್ತನೂರು ಮಂಜುನಾಥ್ ಹಠಕ್ಕೆ ಮಣಿದ್ರಾ ನಾಯಕರು?

ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇವತ್ತು ಕೊನೆಯ ದಿನವಾಗಿದೆ. ಈಗಾಗಲೇ ಎಲ್ಲಾ ಪಕ್ಷಗಳ ಬಹುತೇಕ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕೆಲ ಅಭ್ಯರ್ಥಿಗಳು ಇವತ್ತು ನಾಮಿನೇಷನ್ ಫೈಲ್ ಮಾಡ್ತಿದ್ದಾರೆ. ಆದರೆ ಅಚ್ಚರಿಯ ಬೆಳವಣಿಗೆ ಎಂಬಂತೆ ಕೊನೇ ಕ್ಷಣದಲ್ಲೂ ಕೂಡ ಅಭ್ಯರ್ಥಿಗಳನ್ನ ಬದಲಾವಣೆ ಮಾಡಲಾಗುತ್ತಿದೆ. ಇದೀಗ ಕಾಂಗ್ರೆಸ್ ಕೋಲಾರದ ಮುಳಬಾಗಿಲು ಕ್ಷೇತ್ರದ ಅಭ್ಯರ್ಥಿಯನ್ನ ಬದಲಾಯಿಸಿದೆ.

​ ಕೋರ ಜಿಲ್ಲೆಯ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್(Congress)​ ಅಭ್ಯರ್ಥಿಯನ್ನು ಬದಲಿಸಲಾಗಿದೆ.  ಡಾ.ಬಿಸಿ ಮುದ್ದು ಗಂಗಾಧರ್ ಬದಲಿಗೆ ಆದಿನಾರಾಯಣ ಎನ್ನುವವರಿಗೆ ಟಿಕೆಟ್​ ನೀಡಿದೆ. ತೀವ್ರ ಕಗ್ಗಂಟಾಗಿ ಉಳಿದಿದ್ದ ಮುಳಬಾಗಿಲು ಕ್ಷೇತ್ರಕ್ಕೆ ಅಳೆದು ತೂಗಿ ನಿನ್ನೆ ರಾತ್ರಿ 5ನೇ ಪಟ್ಟಿಯಲ್ಲಿ ಅಭ್ಯರ್ಥಿಯನ್ನು ಘೋಷಣೆ ಮಾಡಿತ್ತು. ಈ ಪಟ್ಟಿಯಲ್ಲಿ ಮುಳಬಾಗಿಲು ವಿಧಾನಸಭೆ ಕ್ಷೇತ್ರಕ್ಕೆ ಡಾ.ಬಿ.ಸಿ.ಮುದ್ದು ಗಂಗಾಧರ್ ಅವರನ್ನು ಫೈನಲ್​ ಮಾಡಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿತ್ತು. ಆದರೆ ಸ್ಥಳೀಯವಾಗಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಕಾಂಗ್ರೆಸ್​ ಮುಳಬಾಗಿಲು ಅಭ್ಯರ್ಥಿಯನ್ನು ಬದಲಿಸಿದ್ದು, ಮುದ್ದು ಗಂಗಾಧರ್ ಬದಲಿಗೆ ಆದಿನಾರಾಯಣ ಎನ್ನುವರಿಗೆ ಮಣೆ ಹಾಕಿದೆ.

ಇದನ್ನೂ ಓದಿ : ಹಾಸನಕ್ಕೆ ಪತ್ನಿ.. ಹೊಳೆನರಸೀಪುರದಲ್ಲಿ ಪತಿ – ಹೆಚ್.ಡಿ ರೇವಣ್ಣ ವಿರುದ್ಧ ಪ್ರೀತಂ ಗೌಡ ಅಖಾಡಕ್ಕೆ?

ಅಚ್ಚರಿಯ ವಿಚಾರ ಅಂದರೆ ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೊತ್ತನೂರು ಮಂಜುನಾಥ್​ ಅವರು ಮುಳಬಾಗಿಲು ಕ್ಷೇತ್ರಕ್ಕೆ ತಮ್ಮ ಬೆಂಬಲಿಗರಿಗೆ ಟಿಕೆಟ್​ ನೀಡುವಂತೆ ಮನವಿ ಮಾಡಿದ್ದರು. ಆದಿನಾರಾಯಣ ಅವರಿಗೆ ಟಿಕೆಟ್​ ನೀಡುವಂತೆ ಮನವಿ ಮಾಡಿದ್ದರು. ಆದರೆ ಹೈಕಮಾಂಡ್​ ಡಾ.ಬಿ.ಸಿ.ಮುದ್ದು ಗಂಗಾಧರ್ ಅವರಿಗೆ ಟಿಕೆಟ್ ನೀಡಿತ್ತು. ಇದರಿಂದ ಕೊತ್ತನೂರು ಮಂಜುನಾಥ್ ಸೇರಿದಂತೆ ಸ್ಥಳೀಯ ನಾಯಕರು ತೀವ್ರ ಅಸಮಾಧಾನಗೊಂಡಿದ್ದರು. ಜೊತೆಗೆ ಇವತ್ತೇ ಕೊನೆ ದಿನ ಆಗಿದ್ರೂ ಕೂಡ ಕೊತ್ತೂರು ಮಂಜುನಾಥ್ ನಾಮಪತ್ರ ಸಲ್ಲಿಕೆ ಮಾಡಲ್ಲ ಎಂದು ಹಠ ಹಿಡಿದಿದ್ದರು. ಈ ಎಲ್ಲಾ ಕಾರಣಗಳಿಂದಾಗಿ ಕಾಂಗ್ರೆಸ್​ ಕೊಣೇ ಕ್ಷಣದಲ್ಲಿ ಮುದ್ದು ಗಂಗಾಧರ್ ಅವರನ್ನು ಬದಲಿಸಿ ಆದಿನಾರಾಯಣ ಅವರನ್ನು ಅಂತಿಮ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.

ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಸಂಘಟನೆಯಲ್ಲಿ ತೊಡಗಿಕೊಂಡಿರುವ ಕೊತ್ತೂರು ಮಂಜುನಾಥ್ ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿದ್ದರು. ಸಿದ್ದರಾಮಯ್ಯ ಕ್ಷೇತ್ರದಿಂದ ಹಿಂದೆ ಸರಿದ ಕಾರಣ ದಿಢೀರ್ ಅಂತ ಕೊತ್ತೂರು ಮಂಜುನಾಥ್ ಹೆಸರನ್ನು ಘೋಷಣೆ ಮಾಡಲಾಗಿತ್ತು.

suddiyaana