ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭ!

ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭ!

ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿದೆ. ಎಲ್ಲಾ ರಾಜಕೀಯ ಪಕ್ಷಗಳು ಅಧಿಕಾರದ ಚುಕ್ಕಾಣಿ ಹಿಡಿಯಲು ಈಗಿನಿಂದಲೇ  ನಾನಾ ಸರ್ಕಸ್‌ ಮಾಡುತ್ತಿವೆ. ಕರ್ನಾಟಕದಲ್ಲೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ  ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲು ಕಾಂಗ್ರೆಸ್ ಸಿದ್ಧತೆಗಳನ್ನು ನಡೆಸುತ್ತಿದೆ. ರಾಜ್ಯ ಕಾಂಗ್ರೆಸ್‌ ಇದೀಗ ಬಿಜೆಪಿಗಿಂತ ಒಂದು ಹೆಜ್ಜೆ ಮುಂದೆ ಹೋಗಿದ್ದು, ಲೋಕಸಭಾ ಅಭ್ಯರ್ಥಿಗಳ ಆಯ್ಕೆ ಪ್ರತಿಕ್ರಿಯೆ ಶುರು ಮಾಡಿಕೊಂಡಿದೆ. ಇನ್ನೇನು ಮೂರ್ನಾಲ್ಕು ದಿನಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಲಿದೆ ಎಂದು ಸ್ವತಃ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್,  ಈಗಾಗಲೇ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನ ನೇಮಕ ಮಾಡಲಾಗಿತ್ತು. 75% ಕ್ಷೇತ್ರಕ್ಕೆ ಹೋಗಿ ಕಾರ್ಯಕರ್ತರುಗಳನ್ನು ಭೇಟಿ ಆಗಿ ಬಂದಿದ್ದಾರೆ. ಅವರೆಲ್ಲರೂ ಈಗಾಗಲೇ ಅಭ್ಯರ್ಥಿಗಳ ವರದಿ ಸಿದ್ದ ಮಾಡಿಕೊಂಡಿದ್ದಾರೆ. ಅವರು ಇನ್ನೂ ವರದಿಯನ್ನ ಕೊಟ್ಟಿಲ್ಲ. ನಮ್ಮ ವರಿಷ್ಠರು ಸಹ ಕೆಲವು ಸಲಹೆ ನೀಡಿದ್ದಾರೆ. ಮೂರ್ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ದವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿ ಬಿಡುಗಡೆ – ಎಲ್ಲೆಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ?

ನಮ್ಮ‌ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ನಮ್ಮಲ್ಲಿ ಅಸಮಾಧಾನ ಎಲ್ಲಿ ಇದೆ..? ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನ ಮಾಡುಲು ಆಗುತ್ತಿಲ್ಲ. ದೇಶದ, ರಾಜ್ಯದ ಇತಿಹಾಸದಲ್ಲಿ ಸರ್ಕಾರ ರಚನೆ ಆಗಿ ಐದು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕನನ್ನ ನೇಮಕ ಮಾಡುವ ಸಾಮರ್ಥ್ಯ ಇಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುಡುಗಿದ್ದಾರೆ.

ಬಿಜೆಪಿಯವರು ಬರ ಸಮೀಕ್ಷೆ ಮಾಡಲಿ, ಅವರು ದೆಹಲಿಗೆ ಹೋಗಿ ವರದಿ ಕೊಡಲಿ. ಚಲುವರಾಯಸ್ವಾಮಿ, ಕೃಷ್ಣ ಭೈರೆಗೌಡ್ರು ತಂಡ ಬರ ಅಧ್ಯಯನ ಮಾಡಿದೆ. ಎಲ್ಲಾ ಜಿಲ್ಲೆಗಳಿಗೆ ಹೋಗಿ ಅಧ್ಯಯನ ಮಾಡಿ, 175 ತಾಲೂಕಗಳನ್ನ ಬರ ಎಂದು ಘೋಷಣೆ ಮಾಡಿದೆ. ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿ ಖಾತೆಯಲ್ಲಿ ಒಂದು ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣ ಮೀಸಲಿಡಲಾಗಿದೆ ಎಂದು ಬಿಜೆಪಿ ಆರೋಪಗಳಿಗೆ ತಿರುಗೇಟು ನೀಡಿದರು.

Shwetha M