ಕಾಂಗ್ರೆಸ್‌ ಘೋಷಿಸಿದ್ದ ಐದು ಗ್ಯಾರಂಟಿಗಳು ಜಾರಿಗೆ ಬರುತ್ತಾ? – ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

ಕಾಂಗ್ರೆಸ್‌ ಘೋಷಿಸಿದ್ದ ಐದು ಗ್ಯಾರಂಟಿಗಳು ಜಾರಿಗೆ ಬರುತ್ತಾ? – ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದಿಂದ ಗೆಲ್ಲಲು ಐದು ಗ್ಯಾರಂಟಿಗಳೇ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಜನರು ಕೂಡ ಈ ಐದು ಗ್ಯಾರಂಟಿಗಳನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. 200 ಯುನಿಟ್‌ ವಿದ್ಯುತ್‌ ಉಚಿತವಾಗಿ ಕೊಡುವುದಾಗಿ ಮಾಡಿದ್ದ ಘೋಷಣೆಯನ್ನು ಜನರೇ ಈಗ ಜಾರಿಗೆ ತಂದಂತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕರೆಂಟ್‌ ಬಿಲ್‌ ಕಟ್ಟಲ್ಲ ಎಂದು ಜನರು ಪಟ್ಟು ಹಿಡಿದು ಕುಳಿತಿದ್ದಾರೆ.

ಇದನ್ನೂ ಓದಿ: ಸಿದ್ದು ವಿರುದ್ಧ ಮಾತಾಡಿದ ಸುಧಾಕರ್ ಗೆ ಪ್ರದೀಪ್ ಈಶ್ವರ್ ಟಾಂಗ್ – ಕ್ಷೇತ್ರದ ಮನೆ ಮನೆಗೂ ಭೇಟಿ!

ಇವೆಲ್ಲದರ ನಡುವೆ ಕಾಂಗ್ರೆಸ್ ಘೋಷಿಸಿದ್ದ 5 ‘ಗ್ಯಾರಂಟಿ’ಗಳು ಸಿಗುತ್ತದೆಯೋ, ಇಲ್ಲವೋ? ಈ ಯೋಜನೆಗಳು ಜಾರಿಗೆ ಬರಲಿವೆಯಾ? ಕೊಟ್ಟ ಮಾತನ್ನು ಕಾಂಗ್ರೆಸ್‌ ಉಳಿಸಿಕೊಳ್ಳುತ್ತಾ ಎಂಬ ಚರ್ಚೆ ಕೂಡ ನಡೆಯುತ್ತಿವೆ. ಇದೀಗ ಕಾಂಗ್ರೆಸ್‌ ಘೋಷಿಸಿದ್ದ 5 ಗ್ಯಾರಂಟಿಗಳ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ʼಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ. ಆರೂವರೆ ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ ಐದೂ ‘ಗ್ಯಾರಂಟಿ’ಗಳನ್ನು ನಾವು ಜಾರಿಗೆ ತರುತ್ತೇವೆʼ ಎಂದು ಖರ್ಗೆ ಟ್ವೀಟ್‌ ಮಾಡಿದ್ದಾರೆ.

suddiyaana