ವೋಟರ್ ಐಡಿ ಪರಿಷ್ಕರಣೆ ಹಗರಣ – ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪ
ಮತದಾರರ ಹೆಸರನ್ನು ಅಕ್ರಮವಾಗಿ ಡಿಲೀಟ್ ಮಾಡಿರುವ ಆರೋಪ

ವೋಟರ್ ಐಡಿ ಪರಿಷ್ಕರಣೆ ಹಗರಣ – ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪಮತದಾರರ ಹೆಸರನ್ನು ಅಕ್ರಮವಾಗಿ ಡಿಲೀಟ್ ಮಾಡಿರುವ ಆರೋಪ

ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆ ಹಗರಣದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ರಾಜ್ಯ ಕಾಂಗ್ರೆಸ್ ದೂರು ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಾಯಕರು, ಕೆ.ಆರ್.ಸರ್ಕಲ್ ಬಳಿಯಿರುವ ಚುನಾವಣಾ ಆಯೋಗದ ಕಚೇರಿಗೆ ಆಗಮಿಸಿ, ದೂರು ನೀಡಿದರು.

ಇದನ್ನೂ ಓದಿ :  ಜನರ ಬೆಂಬಲವೇ ನನ್ನ ಮುಂದಿನ ಹೋರಾಟಕ್ಕೆ ಶಕ್ತಿ – ಹೆಚ್.ಡಿ ಕುಮಾರಸ್ವಾಮಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ರಾಜ್ಯ ಕಾಂಗ್ರೆಸ್ ದೂರು ನೀಡಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಚಿಲುಮೆ ಸಂಸ್ಥೆಯ ಮುಖ್ಯಸ್ಥರಾದ ರವಿಕುಮಾರ್, ಸೇರಿದಂತೆ ಹಲವರ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಮತದಾರರ ಮಾಹಿತಿ ಕಳ್ಳತನ ಪ್ರಕರಣದಲ್ಲಿ ಸರ್ಕಾರ ಕಳ್ಳಾಟದ ಹೇಳಿಕೆ ನೀಡುತ್ತಾ ದಿಕ್ಕುತಪ್ಪಿಸುತ್ತಿದೆ. ಚಿಲುಮೆ ಸಂಸ್ಥೆಯ ಅಕ್ರಮ ಬೆಳಕಿಗೆ ಬಂದಿರುವುದಕ್ಕೂ, ಮತದಾರ ಪಟ್ಟಿಯಲ್ಲಿ ಮತದಾರರ ಹೆಸರು ಕಾಣೆಯಾಗಿರುವುದಕ್ಕೂ ಸಂಬಂಧವಿರುವುದು ನಿಶ್ಚಿತ. ಸಿಎಂ ಬೊಮ್ಮಾಯಿಯವರು  ಉಡಾಫೆ ಉತ್ತರ ಕೊಟ್ಟು ಜಾರಿಕೊಳ್ಳಲು ಯತ್ನಿಸುತ್ತಿದ್ದಾರೆಂದು ಕಾಂಗ್ರೆಸ್ ಆರೋಪ ಮಾಡಿದೆ.

ಈ ನಡುವೆ ಚಿಲುಮೆ ಸಂಸ್ಥೆಯ ಅಕ್ರಮ ಬಯಲಿಗೆ ಬಂದ ಬೆನ್ನಲ್ಲೇ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಹೆಸರನ್ನು ಅಕ್ರಮವಾಗಿ ಡಿಲೀಟ್ ಮಾಡಿರುವ ಆರೋಪ ಕೇಳಿಬಂದಿದೆ.

suddiyaana