ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲಾ ಹಳದಿ.. ಅಧಿಕೃತ ಭೇಟಿಗೂ, ಅನೌಪಚಾರಿಕ ಭೇಟಿಗೂ ಕಾಂಗ್ರೆಸ್‌ಗೆ ವ್ಯತ್ಯಾಸವೇ ಗೊತ್ತಿಲ್ಲ! – ಬಿಜೆಪಿ ಠಕ್ಕರ್‌

ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲಾ ಹಳದಿ.. ಅಧಿಕೃತ ಭೇಟಿಗೂ, ಅನೌಪಚಾರಿಕ ಭೇಟಿಗೂ ಕಾಂಗ್ರೆಸ್‌ಗೆ ವ್ಯತ್ಯಾಸವೇ ಗೊತ್ತಿಲ್ಲ! – ಬಿಜೆಪಿ ಠಕ್ಕರ್‌

ಬೆಂಗಳೂರು: ಚಂದ್ರಯಾನ -3 ಗೆ ಸಕ್ಸಸ್ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಬಿಜೆಪಿ ನಾಯಕರು ಸಾರ್ವಜನಿಕ ಸ್ಥಳದಲ್ಲಿ ನಿಂತು ಪ್ರಧಾನಿ ಮೋದಿ ಅವರಿಗೆ ಕೈ ಬೀಸಿ ಸ್ವಾಗತಿಸಿದ್ದಾರೆ. ಈ ಸಂಬಂಧ ರಾಜ್ಯ ಕಾಂಗ್ರೆಸ್‌ ವ್ಯಂಗ್ಯವಾಡಿದೆ. ಆತ್ಮ ಗೌರವ, ಸ್ವಾಭಿಮಾನವಿಲ್ಲದೆ ಕೈಬೀಸುತ್ತಿದ್ದಾರೆ ಎಂದರೆ ಗುಲಾಮಗಿರಿಯ ಪರಮಾವಧಿಗೆ ತಲುಪಿದ್ದಾರೆ ಎಂದರ್ಥವಲ್ಲವೇ ಎಂದು ಕಾಂಗ್ರೆಸ್‌ ಲೇವಡಿ ಮಾಡಿತ್ತು. ಇದಕ್ಕೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.

ಇದನ್ನೂ ಓದಿ: ರಾಖಿ ಕಟ್ಟಲು ಅಣ್ಣ ಬೇಕೆಂದು ಮಗಳ ಹಠ.. ಗಂಡು ಮಗುವನ್ನೇ ಕಿಡ್ನ್ಯಾಪ್‌ ಮಾಡಿದ್ರು ಈ ಖತರ್ನಾಕ್‌ ದಂಪತಿ!

ಕಾಂಗ್ರೆಸ್‌ ಟ್ವೀಟ್‌ ಗೆ ಠಕ್ಕರ್‌ ಕೊಟ್ಟಿರುವ ರಾಜ್ಯ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಬಂದಿದ್ದು ಚಂದ್ರಯಾನದ ಅಭೂತಪೂರ್ವ ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸುವುದಕ್ಕೇ ಹೊರತು ಪಕ್ಷದ ಸಭೆಗಲ್ಲ. ಆದಾಗ್ಯೂ ನಮ್ಮ ಪಕ್ಷದ ಪ್ರಮುಖರು ಜನಸಾಮಾನ್ಯರಂತೆ ನಿಂತು ಅವರ ಸಂತಸದಲ್ಲಿ ಪಾಲ್ಗೊಂಡು ಅವರೊಡನೆ ತಮ್ಮ ಅಭಿಮಾನ ಪ್ರದರ್ಶಿಸಿರುವುದರಲ್ಲಿ ಹುಳುಕು ಹುಡುಕಲೆತ್ನಿಸಿರುವ ನಿಮಗೆ ಕಾಮಾಲೆಯಂತೆ ಏನೋ ಕಾಯಿಲೆ ಇರಬಹುದು ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದೆ.

ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲಾ ಹಳದಿಯೇ ಎಂಬಂತೆ ಗಾಂಧಿ ಕುಟುಂಬದ ಜೀತಕ್ಕೆ ಬಿದ್ದವರಂತೆ ಸೇವೆ ಮಾಡುವ ಕಾಂಗ್ರೆಸ್ಸಿಗರಿಗೆ ಪ್ರಧಾನಮಂತ್ರಿಗಳ ಅಧಿಕೃತ ಸರ್ಕಾರಿ ಭೇಟಿಗೂ, ಅನೌಪಚಾರಿಕ ಭೇಟಿಗೂ ವ್ಯತ್ಯಾಸ ತಿಳಿದಿಲ್ಲ ಎಂದು ಟಾಂಗ್‌ ಕೊಟ್ಟಿದೆ.

ತಮ್ಮ ಮೋಜಿಗಾಗಿ ಲಕ್ಷದ್ವೀಪಕ್ಕೆ ತೆರಳಲು ಸೇನಾ ನೌಕೆ ಬಳಸುತ್ತಿದ್ದವರು ಬಿಟ್ಟು ಹೋದ ಸಂಸ್ಕಾರದಲ್ಲಿ ಬೆಳೆದವರಿಗೆ ಇವು ಅರ್ಥ ಆಗದು. ಅಂದಹಾಗೆ ಮಲ್ಲಿಕಾರ್ಜುನ ಖರ್ಗೆಯವರಿಗೆ ‘ಗಾಂಧಿ’ ಕುಟುಂಬ ಕೊಟ್ಟಿರುವ ಮರ್ಯಾದೆಯನ್ನು ಕರ್ನಾಟಕ ನೋಡಿದೆ ಎಂದು ಬಿಜೆಪಿ ಚಾಟಿ ಬೀಸಿದೆ.

suddiyaana