ಯುವನಿಧಿ ಯೋಜನೆಗೆ ಜಾರಿಗೆ ಮುಹೂರ್ತ ಫಿಕ್ಸ್! – ಯಾವ ತಿಂಗಳಿನಿಂದ ನಿಮ್ಮ ಅಕೌಂಟ್ ಗೆ ಹಣ ಗೊತ್ತಾ?

ಯುವನಿಧಿ ಯೋಜನೆಗೆ ಜಾರಿಗೆ ಮುಹೂರ್ತ ಫಿಕ್ಸ್! – ಯಾವ ತಿಂಗಳಿನಿಂದ ನಿಮ್ಮ ಅಕೌಂಟ್ ಗೆ ಹಣ ಗೊತ್ತಾ?

ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಈಗಾಗಲೇ ನಾಲ್ಕು ಗ್ಯಾರಂಟಿಗಳು ಜಾರಿಯಾಗಿವೆ. ಇದೀಗ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿಯೊಂದಾದ ಯುವನಿಧಿ ಯೋಜನೆ ಜಾರಿಗೆ ಕಾಲ ಕೂಡಿ ಬಂದಿದೆ. 2024ರ ಜನವರಿಯಲ್ಲಿ ಯುವನಿಧಿ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ ಎಂದು ತಿಳಿದು ಬಂದಿದೆ.

ಡಿಸೆಂಬರ್ 21 ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಮುಂದಿನ ವರ್ಷ ಅಂದರೆ 2024ರ ಜನವರಿಯಲ್ಲಿ ಯುವನಿಧಿ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ. ಇನ್ನೂ ಜನವರಿಯಲ್ಲಿ ಎರಡನೇ ವಾರದಂದು ಯುವ ನಿಧಿ ಯೋಜನೆಯನ್ನ ಜಾರಿಗೊಳ್ಳಲಿದ್ದು, ಫೆಬ್ರವರಿಯಲ್ಲಿ ಪಲಾನುಭವಿಗಳ ಖಾತೆಗೆ ಹಣ ಬರಲಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಶಬರಿಮಲೆ ದೇಗುಲದಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ – ಜನಸಂದಣಿ ನಿರ್ವಹಣೆಗೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಸಚಿವ ಶರಣಪ್ರಕಾಶ ಪಾಟೀಲ್​, ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು.

ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು. ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ ಎಂದು ಬರೆದುಕೊಂಡಿದ್ದಾರೆ.

ನಿರುದ್ಯೋಗಿ ಯುವಕರಿಗೆ ಮಾತ್ರ

ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರೂ. ನಿಗದಿ ಮಾಡಿದ್ದರೆ, ಡಿಪ್ಲೊಮ ಪಾಸ್ ನಿರುದ್ಯೋಗಿಗಳಿಗೆ ಮಾಸಿಕ 1500 ರೂ. ಸಿಗಲಿದೆ. ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ನಿರುದ್ಯೋಗಿ ಯುವಕರಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಯು 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ.

ಯುವನಿಧಿಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು?

ಯುವನಿಧಿಗೆ ಅರ್ಜಿ ಸಲ್ಲಿಸಲು ಮೊದಲು ಅಭ್ಯರ್ಥಿ ಕರ್ನಾಟಕದವರಾಗಿರಬೇಕು. ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ಸೂಕ್ತ ದಾಖಲೆ, ಹತ್ತನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಅಂಕಪಟ್ಟಿ, ಆಧಾರ್‌ ಕಾರ್ಡ್‌, ಜಾತಿ ಪ್ರಮಾಣ ಪತ್ರ(ಅನ್ವಯಿಸಿದಲ್ಲಿ), ಬ್ಯಾಂಕ್ ಖಾತೆ ವಿವರ, ಆದಾಯ ಪ್ರಮಾಣಪತ್ರ ದಾಖಲೆಯನ್ನೊಳಗೊಂಡ ಸ್ವಯಂ ಘೋಷಣಾ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.

Shwetha M