ಬಿಜೆಪಿ ಸರ್ಕಾರದ ವಿರುದ್ಧ ಮತದಾರರ ಮಾಹಿತಿ ಕಳ್ಳತನದ ಗಂಭೀರ ಆರೋಪ ಹೊರಿಸಿದ ಕಾಂಗ್ರೆಸ್
ಸಿಎಂ ಬೊಮ್ಮಾಯಿ, ಸಚಿವ ಅಶ್ವತ್ಥ್ ನಾರಾಯಣ ರಾಜೀನಾಮೆಗೆ ಆಗ್ರಹ

ಬಿಜೆಪಿ ಸರ್ಕಾರದ ವಿರುದ್ಧ ಮತದಾರರ ಮಾಹಿತಿ ಕಳ್ಳತನದ ಗಂಭೀರ ಆರೋಪ ಹೊರಿಸಿದ ಕಾಂಗ್ರೆಸ್ಸಿಎಂ ಬೊಮ್ಮಾಯಿ, ಸಚಿವ ಅಶ್ವತ್ಥ್ ನಾರಾಯಣ ರಾಜೀನಾಮೆಗೆ ಆಗ್ರಹ

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಮತದಾರರ ಮಾಹಿತಿ ಕಳ್ಳತನದ ಗಂಭೀರ ಆರೋಪ ಹೊರಿಸಿರುವ ಕಾಂಗ್ರೆಸ್ , ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಸಚಿವ ಅಶ್ವತ್ಥ್ ನಾರಾಯಣ ರಾಜೀನಾಮೆ ನೀಡುವಂತೆ ಆಗ್ರಹಿಸಿದೆ. ಅಲ್ಲದೇ ನಿರಂತರವಾಗಿ ಟ್ವೀಟ್ ಮಾಡುವ ಮೂಲಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ:  ‘ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು’ –ಟ್ವಿಟ್ಟರ್ ಖಾತೆಯಲ್ಲಿ ಕಾಂಗ್ರೆಸ್ ಟೀಕೆ

ಭ್ರಷ್ಟಾಚಾರ ಹಾಗೂ ವೈಫಲ್ಯಗಳ ಸರಮಾಲೆ ಹೊದ್ದಿರುವ @BJP4Karnataka ಸರ್ಕಾರ ಈಗ ಅಕ್ರಮದ ಮೂಲಕ ಚುನಾವಣೆಗೆ ಸಜ್ಜಾಗುತ್ತಿದೆ. ಬೆಂಗಳೂರು ಉಸ್ತುವಾರಿ ಹೊಂದಿರುವ @BSBommai ಅವರೇ, ನಿಮ್ಮ ಇಷಾರೆ ಇಲ್ಲದೆ ಮತದಾರರ ಮಾಹಿತಿ ಕಳ್ಳತನಕ್ಕೆ ಅವಕಾಶ ನೀಡಲು ಅಸಾಧ್ಯ. ಈ ಹಗರಣದಲ್ಲಿ ನೇರವಾಗಿ ಸಿಎಂ ಕೈವಾಡವಿರುವುದು ಸ್ಪಷ್ಟ ಎಂದು ಟ್ವೀಟ್ ಮಾಡುವ ಮೂಲಕ ಬೊಮ್ಮಾಯಿ ಅವರ ವಿರುದ್ಧ ಆರೋಪಗಳ ಸುರಿಮಳೆ ಮಾಡಿದೆ.

ಇನ್ನೂ ಒಂದು ಟ್ವೀಟ್‌ನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಉಚಿತವಾಗಿ ಮಾಡುತ್ತೇವೆ ಎನ್ನುತ್ತದೆ ಚಿಲುಮೆ ಸಂಸ್ಥೆ. ಮತದಾರರ ಜಾಗೃತಿ ಕಾರ್ಯಕ್ರಮವನ್ನು ಉಚಿತವಾಗಿ ಮಾಡುತ್ತೇವೆ ಎನ್ನುತ್ತದೆ ಚಿಲುಮೆ ಸಂಸ್ಥೆ. ಆ ಕಾರ್ಯಕ್ರಮಕ್ಕೆ ದಿನಕ್ಕೆ ₹1,500 ವೇತನ ನೀಡಿ ಬಿಜೆಪಿ ಕಾರ್ಯಕರ್ತರನ್ನೇ ಬೂತ್ ಲೆವೆಲ್ ಆಫೀಸರ್‌ಗಳೆಂದು ನೇಮಿಸುತ್ತದೆ. ಉಚಿತ ಕೆಲಸ ಮಾಡುವವರು ದುಬಾರಿ ವೇತನ ನೀಡುತ್ತಾರೆಂದರೆ ಅವರ “ಲಾಭಾಂಶ” ಯಾವುದು @BSBommai ಅವರೇ?. #FraudBJP ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಪೋಸ್ಟ್ ಮಾಡಿದೆ.

ಮತದಾರರ ಜಾಗೃತಿ ಹೆಸರಲ್ಲಿ ಮತದಾರರ ಡಾಟಾ ಕಳ್ಳತನಕ್ಕೆ ಇಳಿದ @BJP4Karnataka ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹೈಜಾಕ್ ಮಾಡಲು ಮುಂದಾಗಿದೆ. ಅನುಮತಿ ಪತ್ರದಲ್ಲಿ ರಾಜಕೀಯ ಪಕ್ಷಗಳೊಂದಿಗೆ ಸಂಬಂಧ ಇರಬಾರದು ಎಂದಿದೆ. ಆದರೆ ಸಂಸ್ಥೆಯ ಮುಖ್ಯಸ್ಥ ಬಿಜೆಪಿಯ ಸಚಿವರ ಆಪ್ತನಾಗಿರುವುದು ಮುಚ್ಚಿಟ್ಟಿದೆ ಸರ್ಕಾರ ಎಂದು ಕಾಂಗ್ರೆಸ್ ಟ್ವಿಟ್ಟರ್ ಖಾತೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಹರಿಹಾಯ್ದಿದೆ.

suddiyaana