“ನಾನು ಸತ್ತಂತೆ ಮಾಡುವೆ, ನೀನು ಅತ್ತಂತೆ ಮಾಡು” ಎಂಬ ಧೋರಣೆ ಮೂಲಕ ರಾಜ್ಯ ಸರ್ಕಾರ ಕನ್ನಡನಾಡಿಗೆ ದ್ರೋಹ ಬಗೆದಿದೆ – ಬಿಜೆಪಿ ಕಿಡಿ

“ನಾನು ಸತ್ತಂತೆ ಮಾಡುವೆ, ನೀನು ಅತ್ತಂತೆ ಮಾಡು” ಎಂಬ ಧೋರಣೆ ಮೂಲಕ ರಾಜ್ಯ ಸರ್ಕಾರ ಕನ್ನಡನಾಡಿಗೆ ದ್ರೋಹ ಬಗೆದಿದೆ – ಬಿಜೆಪಿ ಕಿಡಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ಸಂಬಂಧ ಕರ್ನಾಟಕಕ್ಕೆ ಬಿಗ್ ಶಾಕ್ ಎದುರಾಗಿದೆ. ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದೀಗ ರಾಜ್ಯ ಬಿಜೆಪಿ, ಕಾಂಗ್ರೆಸ್‌ ವಿರುದ್ದ ಕಿಡಿಕಾರಿದೆ. ಮಿತ್ರಪಕ್ಷ ಡಿಎಂಕೆಯ ಸರ್ಕಾರದ ಮುಂದೆ ಕಾಂಗ್ರೆಸ್‌ ಮಂಡಿಯೂರಿ ಕುಳಿತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ ಎಂದು ಬಿಜೆಪಿ ಕಿಡಿಕಾರಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ, ಕಾವೇರಿ ನದಿ ನೀರಿನ ಹಂಚಿಕೆಯ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ ಮತ್ತೊಮ್ಮೆ ಬಯಲಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕದ ಪರ ಸಮರ್ಥವಾಗಿ ವಾದ ಮಂಡಿಸುವಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಮಿತ್ರಪಕ್ಷ ಡಿಎಂಕೆಯ ಸರ್ಕಾರದ ಮುಂದೆ ಮಂಡಿಯೂರಿ ಕುಳಿತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ ಎಂದು ಕಿಡಿಕಾರಿದೆ.

ಇದನ್ನೂ ಓದಿ: ಕಾವೇರಿ ನದಿ ನೀರು ವಿಚಾರವಾಗಿ ಕರ್ನಾಟಕಕ್ಕೆ ಬಿಗ್ ಶಾಕ್ – 15 ದಿನ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ

ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್ಸ್ ನೀರು ಬಿಡಲು ಸಿದ್ದರಾಮಯ್ಯರವರ ಸರ್ಕಾರ ಒಪ್ಪಿಕೊಂಡು ಬಂದಿದೆ. ಕನ್ನಡಿಗರು ನೀರಿಲ್ಲದೆ ಪರಿತಪಿಸುತ್ತಿದ್ದರೂ ಪರವಾಗಿಲ್ಲ, ಕಾಂಗ್ರೆಸ್ಸಿಗೆ I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಬೇಕಿದೆ‌. “ನಾನು ಸತ್ತಂತೆ ಮಾಡುವೆ, ನೀನು ಅತ್ತಂತೆ ಮಾಡು” ಎನ್ನುವ ಧೋರಣೆಯ ಮೂಲಕ ಕಾಂಗ್ರೆಸ್ ಸರ್ಕಾರ ಕನ್ನಡನಾಡಿಗೆ ದ್ರೋಹ ಬಗೆದಿದೆ. ಕೊಡಗಿನ ಕಾವೇರಿಯ ಕೊನೆ ಹನಿ ಕೂಡ ತಮಿಳುನಾಡು ಪಾಲಾಗುವುದು ನಿಶ್ಚಿತ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

Shwetha M