ಗೆಲ್ಲದ ಸ್ಥಿತಿಯಲ್ಲಿದೆ ಕಾಂಗ್ರೆಸ್.. ಗ್ಯಾರಂಟಿಯನ್ನು ಪೂರ್ಣ ಜಾರಿ ಮಾಡದೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ -ವಿಜಯೇಂದ್ರ ಕಿಡಿ

ಗೆಲ್ಲದ ಸ್ಥಿತಿಯಲ್ಲಿದೆ ಕಾಂಗ್ರೆಸ್.. ಗ್ಯಾರಂಟಿಯನ್ನು ಪೂರ್ಣ ಜಾರಿ ಮಾಡದೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ -ವಿಜಯೇಂದ್ರ ಕಿಡಿ

ಅತ್ತ ಕಾಂಗ್ರೆಸ್‌ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದರೆ, ಇತ್ತ ರಾಜ್ಯ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದರೂ, ಈವರೆಗೂ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕೋಳಿ ಚಿನ್ನದ ಮೊಟ್ಟೆ ಇಡುತ್ತೆ ಅಂತಾ ಕೋಳಿಯನ್ನೇ ಕೊಯ್ಯಬೇಡಿ! –  ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದ ಸಿಎಂ ಸಿದ್ದರಾಮಯ್ಯ!

ಪ್ರತಿಭಟನೆ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ , ಕಾಂಗ್ರೆಸ್‌ ಸುಳ್ಳು ಭರವಸೆ ಕೊಟ್ಟು, ನಾಟಕ ಮಾಡಿ ಅಧಿಕಾರಕ್ಕೆ ಬಂದಿದೆ. ಈಗ ಈ ಗ್ಯಾರಂಟಿಯನ್ನು ಪೂರ್ಣ ಜಾರಿ ಮಾಡದೇ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಯಾವ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲದ ಸ್ಥಿತಿ ಇದೆ. ಹೀಗಾಗಿ ದೆಹಲಿ ಚಲೋ ನಾಟಕ ಮಾಡುತ್ತಿದ್ದಾರೆ ಎಂದು ದೂರಿದರು. ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸದ ದುಷ್ಟ ಸರ್ಕಾರ ಇದು. ಸರಿಯಾಗಿ ಅಧಿಕಾರ ನಡೆಸಲಾಗದೇ ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಕೃಷ್ಣ ಮೇಲ್ದಂಡೆಗೆ ಇವರು ಒಂದು ರೂಪಾಯಿ ಕೊಟ್ಟಿಲ್ಲ. ಮತದಾರರ ಕಣ್ಣಿಗೆ ಮಣ್ಣೆರಚಿ ಅಧಿಕಾರಕ್ಕೆ ಬಂದಿದ್ದಾರೆ. ಇವರ ಮೇಕೆದಾಟು ಹೋರಾಟ, ದೆಹಲಿ ಚಲೋ ಕೇವಲ ನಾಟಕ. ಮಹದಾಯಿಗೆ ಇವರ ಬಳಿ ದುಡ್ಡಿಲ್ಲ. ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ 7,800 ಕೋಟಿ ರೂ. ಬಿಡುಗಡೆ ಮಾಡಿದ ಹಣವನ್ನು ಇವರು ತಡೆದಿದ್ದಾರೆ. ಮುಂದಿನ ಲೋಕಸಭೆಯಲ್ಲಿ ಸೋಲಿಸಿ ಮನೆಗೆ ನಿಮ್ಮನ್ನು ಚಲೋ ಮಾಡಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.

Shwetha M