“ಮೋದಿಯನ್ನು ಕೊಲ್ಲಿ” ಎಂದಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಬಂಧನ

“ಮೋದಿಯನ್ನು ಕೊಲ್ಲಿ” ಎಂದಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಬಂಧನ

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲಲು ಸಿದ್ದರಾಗಿ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರನ್ನು ಪನ್ನಾ ಜಿಲ್ಲಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಸಂವಿಧಾನ ಉಳಿಸಲು ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಿ ಎಂದು ರಾಜಾ ಪಟೇರಿಯಾ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ರಾಜಾ ಪಟೇರಿಯಾ ಹೇಳಿಕೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಧ್ಯಪ್ರದೇಶ ಸರ್ಕಾರ, ಮಾಜಿ ಸಚಿವ ಪಟೇರಿಯಾ ವಿರುದ್ಧ ತನಿಖೆಗೆ ಆದೇಶಿಸಿತ್ತು. ಪನ್ನಾ ಜಿಲ್ಲಾ ಪವಾಯಿ ಪೊಲೀಸ್ ಠಾಣೆಯಲ್ಲಿ ಪಟೇರಿಯಾ ವಿರುದ್ದ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ.

ಇದನ್ನೂ ಓದಿ: ಭಾರತೀಯ ನೌಕಾಪಡೆಗೆ ಮಹಿಳಾ ಕಮ್ಯಾಂಡೋ! ಉಗ್ರರ ವಿರುದ್ಧ ಲೇಡಿ ಮಾರ್ಕೋಸ್ ಫೈಟ್!

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಜಾತಿ, ಧರ್ಮ, ಭಾಷೆ ಆಧಾರದಲ್ಲಿ ವಿಭಜನೆ ಮಾಡುತ್ತಿದ್ದಾರೆ. ದಲಿತ, ಆದಿವಾಸಿ, ಅಲ್ಪಸಂಖ್ಯಾತರಿಗೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ. ಅವರ ಆಡಳಿತದಲ್ಲಿ ದಲಿತರು ಆತಂಕವನ್ನು ಎದುರಿಸುತ್ತಿದ್ದಾರೆ. ಪ್ರಸ್ತುತ ದೇಶದಲ್ಲಿ ಬದುಕುವುದಕ್ಕೂ ಆಗುತ್ತಿಲ್ಲ. ಹೀಗಾಗಿ ಮೋದಿ ಹತ್ಯೆಗೆ ಸಿದ್ಧವಾಗಿರಬೇಕು ಎಂದು ರಾಜಾ ಪಟೇರಿಯಾ ಹೇಳಿರುವ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಬಿಜೆಪಿಯಿಂದ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಹೇಳಿಕೆ ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಜಾ ಪಟೇರಿಯಾ ಅವರು ತೇಪೆ ಹಚ್ಚುವ ಕೆಲಸ ಮಾಡಿದ್ದರು. ನಾನು ಗಾಂಧಿಯನ್ನು ನಂಬುವ ಮನುಷ್ಯನಾಗಿದ್ದು, ಆ ರೀತಿ ಮಾಡಲಾರೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಮೋದಿ ಅವರನ್ನು ಸೋಲಿಸುವ ಅರ್ಥದಲ್ಲಿ ಕೊಲ್ಲಿ ಎಂದು ಹೇಳಿದ್ದೇನೆ. ದಲಿತರು, ಆದಿವಾಸಿಗಳ ರಕ್ಷಣೆ ಮತ್ತು ನಿರುದ್ಯೋಗವನ್ನು ತೊಡೆದುಹಾಕಲು ಮೋದಿಯನ್ನು ಸೋಲಿಸುವುದು ಅವಶ್ಯಕ ಎಂದು ಹೇಳಿದ್ದರು.

suddiyaana