ಕಾಂಗ್ರೆಸ್ ನಾಯಕರ ಮನವೊಲಿಕೆ ಸಕ್ಸಸ್ – ಸ್ವೀಕರ್‌ ಸ್ಥಾನಕ್ಕೆ ಯು.ಟಿ ಖಾದರ್‌ ಫಿಕ್ಸ್?‌

ಕಾಂಗ್ರೆಸ್ ನಾಯಕರ ಮನವೊಲಿಕೆ ಸಕ್ಸಸ್ – ಸ್ವೀಕರ್‌ ಸ್ಥಾನಕ್ಕೆ ಯು.ಟಿ ಖಾದರ್‌ ಫಿಕ್ಸ್?‌

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 135 ಸ್ಥಾನಗಳಲ್ಲಿ ಗೆದ್ದಿರುವ ಕಾಂಗ್ರೆಸ್‌ ನಲ್ಲಿ ಈಗ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಯುತ್ತಿದೆ. ಇದರ ಬೆನ್ನಲ್ಲೇ ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಯಾರು ಎನ್ನುವುದಕ್ಕೆ ತೆರೆ ಬಿದ್ದಿದೆ. ಮಾಜಿ ಸಚಿವ ಯು.ಟಿ. ಖಾದರ್ ಅವರನ್ನು ವಿಧಾನಸಭಾಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್‌ ಹೈಕಮಾಂಡ್‌ ಸೋಮವಾರ ತಡರಾತ್ರಿ ನಿರ್ಧರಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅವಾಂತರ – ಇಂದು ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ

ಹೈಕಮಾಂಡ್‌ ಆದೇಶದ ಹಿನ್ನೆಲೆಯಲ್ಲಿ ಖಾದರ್‌ ಈ ಜವಾಬ್ದಾರಿಯನ್ನು ಒಪ್ಪಿಕೊಂಡಿದ್ದುಅದರಂತೆ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಸಭಾಧ್ಯಕ್ಷ ಸ್ಥಾನಕ್ಕೆ ಯುಟಿ ಖಾದರ್ ನಾಮಪತ್ರ ಸಲ್ಲಿಸಲಿದ್ದು, ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಮೇ 24 ರಂದು ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಮಂಗಳವಾರ ಮಧ್ಯಾಹ್ನ 12ರ ಒಳಗೆ ಸ್ಪೀಕರ್ ಚುನಾವಣೆಗೆ ಸ್ಪರ್ಧಿಸುವವರು ನಾಮಪತ್ರ ಸಲ್ಲಿಸಬೇಕಾಗುತ್ತದೆ ಎಂದು ವಿಧಾನಸಭೆ ಬುಲೆಟಿನ್  ಹೊರಡಿಸಿದೆ.

ಮೂರು ದಿನಗಳ ವಿಧಾನಸಭೆ ಅಧಿವೇಶನದ ಮೊದಲ ದಿನವಾದ ಸೋಮವಾರದಂದು 224 ಶಾಸಕರ ಪೈಕಿ 182 ಶಾಸಕರಿಗೆ ಹಂಗಾಮಿ ಸ್ಪೀಕರ್ ಆಗಿರುವ ಹಿರಿಯ ನಾಯಕ ಆರ್‌ವಿ ದೇಶಪಾಂಡೆ ಪ್ರಮಾಣ ವಚನ ಬೋಧಿಸಿದರು. ದೇಶಪಾಂಡೆ ಅವರನ್ನು ಸ್ಪೀಕರ್ ಹುದ್ದೆಯನ್ನು ನಿಭಾಯಿಸಲು ಕೇಳಲಾಯಿತು. ಆದರೆ, ಅವರು ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಹುದ್ದೆಯನ್ನು ನಿರಾಕರಿಸಿದರು. ಹಿರಿಯ ನಾಯಕ ಹಾಗೂ ಮಾಜಿ ಸಚಿವ ಹೆಚ್‌ಕೆ ಪಾಟೀಲ್ ಅವರನ್ನು ಕೂಡ ಸ್ಪೀಕರ್ ಹುದ್ದೆಗೆ ಪಕ್ಷ ಪರಿಗಣಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿರುವ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರನ್ನೂ ಸಂಪರ್ಕಿಸಲಾಗಿತ್ತು ಎನ್ನಲಾಗಿದೆ.

ಮೂರು ದಿನಗಳ ವಿಧಾನಮಂಡಲದ ಅಧಿವೇಶನ ಬುಧವಾರ ಮುಕ್ತಾಯಗೊಂಡ ನಂತರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿರುವುದರಿಂದ ಹೆಚ್ಚಿನ ಹಿರಿಯ ಶಾಸಕರು ಕ್ಯಾಬಿನೆಟ್ ಸ್ಥಾನಕ್ಕಾಗಿ ಕಾಯುತ್ತಿದ್ದಾರೆ.

suddiyaana