ಹಿಂದೆ ಕಾಂಗ್ರೆಸ್‌ ಮುಗಿಸಿದ್ವಿ..​​ ಮತ್ತೆ ವೈಟ್‌ವಾಶ್ ಆಗಬಹುದು! – ಕೆಎನ್ ರಾಜಣ್ಣ ಶಾಕಿಂಗ್‌ ಹೇಳಿಕೆ!

ಹಿಂದೆ ಕಾಂಗ್ರೆಸ್‌ ಮುಗಿಸಿದ್ವಿ..​​ ಮತ್ತೆ ವೈಟ್‌ವಾಶ್ ಆಗಬಹುದು! – ಕೆಎನ್ ರಾಜಣ್ಣ ಶಾಕಿಂಗ್‌ ಹೇಳಿಕೆ!

ರಾಜ್ಯ ಕಾಂಗ್ರೆಸ್​​ನಲ್ಲಿ ನವೆಂಬರ್ ಕ್ರಾಂತಿಯ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ಸಂದರ್ಭದಲ್ಲೇ, ಸಿಎಂ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವ ಮಾಜಿ ಸಚಿವ ಕೆಎನ್​ ರಾಜಣ್ಣ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಯಾವ ಪಕ್ಷದ ಬಾವುಟ ಹಿಡಿಬೇಕು ಅನ್ನೋದನ್ನ ನಾನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ. ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ ಈ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಫ್ಲೈಓವರ್ ಪಿಲ್ಲರ್ ಪಿಲ್ಲರ್ ಹತ್ತಿ ಕುಳಿತ ಭೂಪ! – ಮಲಗೋಕೆ ಬೇರೆ ಜಾಗನೇ ಸಿಕ್ಕಿಲ್ವಾ?

ಮಧುಗಿರಿ ತಾಲೂಕಿನ ದೊಡ್ಡೆರಿಯಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ರಾಜಣ್ಣ, ನಾನು ಮಧುಗಿರಿ ಕ್ಷೇತ್ರಕ್ಕೆ ಬಂದಾಗ ಕಾರ್ಯಕರ್ತರು ಕಾಂಗ್ರೆಸ್  ಬಾವುಟ ಹಿಡಿದು ರ್ಯಾಲಿ ಮಾಡುತಿದ್ದರು. ಇವತ್ತಿನ ರ್ಯಾಲಿಯಲ್ಲಿ ಯಾರೂ ಕಾಂಗ್ರೆಸ್ ಬಾವುಟ ಹಿಡಿಯಲೇ ಇಲ್ಲ. ಅವರಿಗೂ ಕಾಂಗ್ರೆಸ್ ಪಕ್ಷದ ಮೇಲೆ ಬೇಸರ ತರಿಸಿದಂತಿದೆ. ಮುಂದಿನ ದಿನದಲ್ಲಿ ಯಾವ ಬಾವುಟ ಹಿಡಿಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತೇನೆ ಎಂದರು.

2004 ರಲ್ಲಿ ಕಾಂಗ್ರೆಸ್ ಪಕ್ಷ ನನ್ನನ್ನು ಗೌರವದಿಂದ ನೋಡಿಕೊಂಡಿರಲಿಲ್ಲ. ಆಗ ನಾನು ಜೆಡಿಎಸ್‌ನಿಂದ ಸ್ಪರ್ಧಿಸಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ವೈಟ್ ವಾಶ್ ಮಾಡಿದ್ದೆ. ಕಾಂಗ್ರೆಸ್‌ ಅನ್ನು ಕಂಪ್ಲೀಟ್ ಮುಗಿಸಿದ್ವಿ. ಜಿಲ್ಲೆಯಲ್ಲಿ ಮತ್ತೇ ಆ ಸಂದರ್ಭ ಬರುತ್ತೋ ಏನೋ ಗೊತ್ತಿಲ್ಲ ಎಂದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದರಿಂದ ಹಿಂದೆ ಆದಂಥ ಪರಿಸ್ಥಿತಿ ಮತ್ತೆ ಬರುವುದಿಲ್ಲ. ಆದರೆ ಪರಿಸ್ಥಿತಿ ಏನಾಗುತ್ತದೆ ಎಂದು ಹೇಳಲಾಗದು ಎಂದು ನಗುತ್ತಾ ಹೇಳಿದರು. ಮುಂದುವರಿದು ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ ಎಂದರು. ಮುಂದಿನ ತೀರ್ಮಾನಗಳನ್ನು ಜನರು ಮಾಡಬೇಕು, ತಾವು ಚುನಾವಣೆಗೆ ನಿಲ್ಲದಿರುವುದರಿಂದ ತಮಗೆ ಪ್ರಶ್ನೆ ಇಲ್ಲ ಎಂದರು.

Shwetha M