ಯಾವುದೇ ಹಗರಣ ಮಾಡಿಲ್ಲವೆಂದು ಆಣೆ ಪ್ರಮಾಣ ಮಾಡ್ತಾರಾ ಸುಧಾಕರ್? – ಪ್ರದೀಪ್ ಈಶ್ವರ್ ಸವಾಲ್
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಆರೋಪ ಪ್ರತ್ಯಾರೋಪ ಜೋರಾಗಿಯೇ ನಡೆಯುತ್ತಿದೆ. ವಿಧಾನಸಭಾ ಚುನಾವಣೆ ಸೋಲುಕಂಡಿರುವ ಮಾಜಿ ಸಚಿವ ಡಾ.ಕೆ ಸುಧಾಕರ್ ಅವರಿಗೆ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್ ನೀಡಲಾಗಿದೆ. ಇದರ ಬೆನ್ನಲ್ಲೇ ರಾಜಕೀಯ ಎದುರಾಳಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರಪ್ಪ ಅವರು ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನಾನು ಹಗರಣ ಮಾಡಿಲ್ಲ ಎಂದು ನಾಳೆ ನಂದಿಭೋಗ ನಂದೀಶ್ವರ ದೇಗುಲದಲ್ಲಿ ಆಣೆ ಪ್ರಮಾಣ ಮಾಡುತ್ತೇನೆ. ಸುಧಾಕರ್ ಪ್ರಮಾಣ ಮಾಡುವುದಕ್ಕೆ ರೆಡಿ ಇದ್ದಾರಾ ಅಂತಾ ಸವಾಲು ಹಾಕಿದ್ದಾರೆ.
ಇದನ್ನೂ ಓದಿ: ರೀಲ್ಸ್ ಸ್ಟಾರ್ ಸೋನು ಗೌಡಗೆ ಜೈಲು ಫಿಕ್ಸಾ? – 14 ದಿನ ನ್ಯಾಯಾಂಗ ಬಂಧನ
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಪ್ರದೀಪ್ ಈಶ್ವರ್, IT, ED ಬಿಟ್ಟು ಕಾಟ ಕೊಡುತ್ತೀರಾ ಸುಧಾಕರ್ ಅವರೇ, ನಾನು ರೆಡಿ ಇದ್ದೇನೆ. ನಾನು ಹಗರಣ ಮಾಡಿಲ್ಲ ಎಂದು ಪ್ರಮಾಣ ಮಾಡುತ್ತೇನೆ. ನಾಳೆ ನಂದಿಭೋಗ ನಂದೀಶ್ವರ ದೇಗುಲದಲ್ಲಿ ಆಣೆ ಮಾಡುತ್ತೇನೆ. ಸುಧಾಕರ್ ಪ್ರಮಾಣ ಮಾಡುವುದಕ್ಕೆ ರೆಡಿ ಇದ್ದಾರಾ ಎಂದು ಆಣೆ ಪ್ರಮಾಣದ ಸವಾಲೆಸೆದಿದ್ದಾರೆ.
ಸುಧಾಕರ್ ಕಾಂಗ್ರೆಸ್ ಸೇರಲು ಬಹಳ ಪ್ರಯತ್ನ ಮಾಡಿದ್ರು. ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಬರಲು ಬಹಳ ಪ್ರಯತ್ನ ಮಾಡಿದ್ದರು. ಕೆಲವು ನಾಯಕರ ಜೊತೆ ಸಿಎಂ, ಡಿಸಿಎಂ ಭೇಟಿ ಮಾಡಿಸಿ ಎಂದು ಹೇಳಿದ್ದರು. ಆದರೆ ಕೊನೆಗೆ ಸುಧಾಕರ್ ಏನು ಯೋಚನೆ ಮಾಡಿದ್ರೋ ಗೊತ್ತಿಲ್ಲ. ಬಿಜೆಪಿ ಬಿಟ್ಟರೆ ಐಟಿ, ಇಡಿ ರೇಡ್ ಆಗಬಹುದು ಎಂದು ಹೆದರಿದ್ದಾರೆ. ಸುಧಾಕರ್ ಟಾರ್ಚರ್ನಿಂದಲೇ ನಾನು ಶಾಸಕನಾಗಿದ್ದೇನೆ. ಸುಧಾಕರ್ಗೆ ಮತ ಹಾಕಿದ್ರೆ ಪ್ರಜಾಪ್ರಭುತ್ವಕ್ಕೆ ಮಾರಕ. ಸಾಮಾನ್ಯ ಜನರಿಗೆ ಸುಧಾಕರ್ ತೊಂದರೆ ಕೊಡುತ್ತಾರೆ. . 1 ಮಾಸ್ಕ್ಗೆ 450 ರೂ. ಕೊಟ್ಟು ಖರೀದಿಸಿ ಹಗರಣ ಮಾಡಿದ್ದಾರೆ. ಕೊವಿಡ್ ಹಗರಣದ ತನಿಖೆ ಆಳವಾಗಿ ನಡೆಯುತ್ತಿದೆ. ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಸುಧಾಕರ್ ಪರ ಕೆಲಸ ಮಾಡಲ್ಲ ಅಂದಿದ್ದಾರೆ ಎಂದು ಪ್ರದೀಶ್ ಈಶ್ವರ್ ಹೇಳಿದರು.
ಡಾ.ಕೆ.ಸುಧಾಕರ್ ನೂರಾರು ಕೋಟಿ ಆಸ್ತಿ ಮಾಡಿದ್ದಾರೆ. ತಂದೆ ಬಾಮೈದನ ಹೆಸರಲ್ಲಿ ನೂರಾರು ಎಕರೆ ರಿಜಿಸ್ಟರ್ ಆಗಿದೆ. ಸುಧಾಕರ್ ನೂರಾರು ಕೋಟಿ ರೂಪಾಯಿ ಮಾಡಿದ್ದಾರೆ. ಅನೇಕ ಕಂಪನಿಗಳಿಗೆ ಸುಧಾಕರ್ ಹೂಡಿಕೆ ಮಾಡಿದ್ದಾರೆ. ಶ್ರೀಲಂಕಾದಲ್ಲಿ ಸುಧಾಕರ್ ಅವರ ಪ್ರಾಪರ್ಟಿ ಇದೆ. ಬೆಂಗಳೂರಿನ ಸದಾಶಿವನಗರದಲ್ಲಿ ಅವರ ಮನೆ ಇದೆ. ಇದೆಲ್ಲವೂ ಎಲ್ಲಿಂದ ಬಂದಿದೆ ಎಂದು ಅವರು ಹೇಳಲಿ ಎಂದು ವಾಗ್ದಾಳಿ ನಡೆಸಿದರು.