ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ –  ಮಧ್ಯಾಹ್ನ ಅಂತ್ಯ ಸಂಸ್ಕಾರ

ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ –  ಮಧ್ಯಾಹ್ನ ಅಂತ್ಯ ಸಂಸ್ಕಾರ

ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ಅವರು ಭಾನುವಾರ ಹೃದಯಾಘಾತದಿಂದ  ನಿಧನರಾಗಿದ್ದಾರೆ. ರಾಜಕೀಯ ನಾಯಕರು, ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ. ಅಭಿಮಾನಿಗಳು ಕಂಬನಿ ಸುರಿಸುತ್ತಿದ್ದಾರೆ.

ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಹೃದಯಾಘಾತದಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ರಾಜಾ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಸಾವಿನ ಸುದ್ದಿ ತಿಳಿಯುತ್ತಲೇ ಆಸ್ಪತ್ರೆಗೆ ಧಾವಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಸಚಿವರು, ಶಾಸಕರು ಅಂತಿಮ ದರ್ಶನ ಪಡೆದರು.

ಇದನ್ನೂ ಓದಿ: ಇದ್ರೆ ಇಂಥಾ ಗರ್ಲ್ ಫ್ರೆಂಡ್ ಇರ್ಬೇಕು ನೋಡಿ!- ಟಿಕ್ ಟಾಕ್ ಸುಂದರಿ ಮಾಡಿದ್ದೇನು ಗೊತ್ತಾ?

ಸುರಪುರ ಪಟ್ಟಣದಲ್ಲಿ ನೀರವ ಮೌನ ಆವರಿಸಿ ಸ್ವಯಂ ಪ್ರೇರಿತವಾಗಿ ಅಂಗಡಿ, ಮುಗ್ಗಟ್ಟುಗಳು ಮುಚ್ಚಿ ನೆಚ್ಚಿನ ನಾಯಕನ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವ್ರ ಅತ್ಯಾಪ್ತ ವೆಂಕಟಪ್ಪ ನಾಯಕ, ಅವರು ಅವ್ರ ಮಾರ್ಗದರ್ಶನದಲ್ಲಿ ಬೆಳೆದವರು. ಖರ್ಗೆ ಮಾತ್ರವಲ್ಲದೇ ಸಿಎಂ ಸಿದ್ದರಾಮಯ್ಯರ ಆಪ್ತರಾಗಿದ್ದರು.

ಪಟ್ಟಣದ ಪ್ರಭು ಕಾಲೇಜು ಆವರಣದಲ್ಲಿ ಅಂತಿಮ ದರ್ಶನಕ್ಕೆ‌ ಜಿಲ್ಲಾಡಳಿತದಿಂದ ಸಿದ್ಧತೆ ಮಾಡಿಕೊಂಡಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಸಾರ್ವಜನಿಕರ ಅಂತಿಮ ದರ್ಶನ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸೇರಿ ಹಲವು ಸಚಿವರು ಪಾರ್ಥಿವ ಶರೀರಕ್ಕೆ‌ ಅಂತಿಮ ಗೌರವ ಸಲ್ಲಿಸಲಿದ್ದಾರೆ.

ಅಂತಿಮ ದರ್ಶನದ ಬಳಿಕ ಪಟ್ಟಣದಲ್ಲಿ ಮೆರವಣಿಗೆ ನಡೆಯಲಿದೆ. ಸುರಪುರ ನಗರದ ರಾಜ ಕುಟುಂಬದ ಸ್ಮಶಾನ ಜಾಗದಲ್ಲಿ ರಾಜಮನೆತನದ ವಿಧಿವಿಧಾನಗಳ ಪ್ರಕಾರ ಸಕಲ‌ ಸರ್ಕಾರಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಲಿದೆ.

Shwetha M