ಮೋದಿ ತೀರಿಕೊಂಡರೆ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ? – ಮಾತಿನ ಭರದಲ್ಲಿ ನಾಲಗೆ ಹರಿಬಿಟ್ಟ ಕೈ ಶಾಸಕ

ಮೋದಿ ತೀರಿಕೊಂಡರೆ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ? – ಮಾತಿನ ಭರದಲ್ಲಿ ನಾಲಗೆ ಹರಿಬಿಟ್ಟ ಕೈ ಶಾಸಕ

ಎಲೆಕ್ಷನ್‌ ಹೊತ್ತಲ್ಲಿ ರಾಜಕೀಯ ನಾಯಕರ ಮಾತಿನ ಭರಾಟೆ ಜೋರಾಗಿದೆ. ಮತಯಾಚನೆ ಮಾಡುವ ವೇಳೆ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಕಾಂಗ್ರೆಸ್ ಹಿರಿಯ ಶಾಸಕ ರಾಜು ಕಾಗೆ ಪ್ರಧಾನಿ ಮೋದಿ ಅವರನ್ನು ಟೀಕಿಸುವ ಭರದಲ್ಲಿ ನಾಲಗೆ ಹರಿಬಿಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ತೀರಿಕೊಂಡರೆ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ ಅಂತಾ ಪ್ರಶ್ನಿಸಿದ್ದಾರೆ. ಇದೀಗ ಈ ಹೇಳಿಕೆ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.

ಇದನ್ನೂ ಓದಿ: ಫ್ರೀ ಸೈಟ್‌, ಮಹಿಳೆಯರಿಗೆ ಫ್ರೀ ಬಸ್‌, 3 ಎಲ್‌ಪಿಜಿ ಸಿಲಿಂಡರ್‌ ಫ್ರೀ! – ವೈ ಎಸ್ಆರ್‌ಸಿ ಪಕ್ಷ ಅಧಿಕಾರಕ್ಕೆ ಬಂದ್ರೆ ಎಲ್ಲಾ ಫ್ರೀ.. ಫ್ರೀ.. ಫ್ರೀ..

ಬೆಳಗಾವಿಯ ಮಮದಾಪೂರ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಧಾನಿ  ಮೋದಿ ತೀರಿಕೊಂಡರೆ ಈ ದೇಶದಲ್ಲಿ ಮುಂದೆ ಪ್ರಧಾನಿ ಆಗೋದೇ ಇಲ್ಲವಾ? ಮೊದಿ ತೀರಿಕೊಂಡರೆ 140 ಕೊಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ? ಎಂದು ಪ್ರಶ್ನೆ ಮಾಡಿದ್ದಾರೆ.

ಈಗಿನ ಯುವಕರು ಮೋದಿ ಮೋದಿ ಅನ್ನುತ್ತಾರೆ, ಮೋದಿನ ತೆಗೆದುಕೊಂಡು ನೆಕ್ಕುತ್ತೀರಾ? ರಾಜ್ಯದಲ್ಲಿ ಮತದಾರುರು ಕಾಂಗ್ರೆಸ್ ಸರ್ಕಾರ ಬೇಕು ಅಂತಾರೆ, ಆದ್ರೆ ಕೇಂದ್ರದಲ್ಲಿ ಮೋದಿನೇ ಬರಬೇಕು ಅಂತಾರೆ. ಮೋದಿ ಇಲ್ಲಿ ಬಂದು ನೋಡುತ್ತಾರಾ? ಇಲ್ಲಿ ಏನಾದರೂ ಸಮಸ್ಯೆ ಆದರೆ ಮೋದಿ ಬರುವುದಿಲ್ಲ. ಇಲ್ಲಿ ನಾವೇ ನಿಮ್ಮ ಸಮಸ್ಯೆ ಆಲಿಸಬೇಕು. ನರೇಂದ್ರ ಮೋದಿ ಅವರು 3,000 ಕೋಟಿ ವಿಮಾನದಲ್ಲಿ ಓಡಾಡ್ತಾರೆ, 4 ಲಕ್ಷ ರೂಪಾಯಿ ಸೂಟ್ ಹಾಕಿಕೊಳ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ ನಾನೂ ವಿದ್ಯಾವಂತ ಇದ್ದೀನಿ, ನನಗೂ ಬುದ್ಧಿ ಇದೆ, ನಾನೇನು ಕುರಿ ಅಲ್ಲ. ನಾನು ಸಹ ಈ ದೇಶವನ್ನ ಸಮರ್ಥವಾಗಿ ಮುನ್ನಡೆಸುತ್ತೇನೆ ಎನ್ನುವ ಆತ್ಮವಿಶ್ವಾಸ ಇದೆ ಎಂದು ಹೇಳಿದ್ದಾರೆ.

Shwetha M

Leave a Reply

Your email address will not be published. Required fields are marked *