ಆಪರೇಷನ್ ಕಮಲದ ಭೀತಿ – ಗೆದ್ದ ತಕ್ಷಣವೇ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬರುವಂತೆ ಸೂಚನೆ

ಆಪರೇಷನ್ ಕಮಲದ ಭೀತಿ – ಗೆದ್ದ ತಕ್ಷಣವೇ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬರುವಂತೆ ಸೂಚನೆ

ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಇದರ ಜೊತೆಗೆ ಕಾಂಗ್ರೆಸ್ ನಾಯಕರಿಗೆ ತಮ್ಮ ಶಾಸಕರ ರಕ್ಷಣೆ ಬಗ್ಗೆಯೂ ಚಿಂತೆ ಶುರುವಾಗಿದೆ. ಅತಂತ್ರ ಸರ್ಕಾರ ಬಂದರೆ ಆಪರೇಷನ್ ಕಮಲದ ಭೀತಿಯಿರುವ ಹಿನ್ನೆಲೆಯಲ್ಲಿ ಗೆದ್ದ ಶಾಸಕರ ವಿಚಾರದಲ್ಲಿ ಕಾಂಗ್ರೆಸ್ ಮುಖ್ಯ ತೀರ್ಮಾನ ಕೈಗೊಂಡಿದೆ. ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳನ್ನು ರಿಸಲ್ಟ್ ದಿನವೇ ಬೆಂಗಳೂರಿಗೆ ಕರೆತರುವ ಟಾಸ್ಕ್ ನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ನೀಡಿದ್ದಾರೆ.

ಇದನ್ನೂ ಓದಿ:  ಸಿದ್ದರಾಮಯ್ಯ ಎಡಗೈನಲ್ಲಿ ಊತ.. ವೈದ್ಯರಿಂದ ಚಿಕಿತ್ಸೆ – 15 ದಿನ ವಿಶ್ರಾಂತಿ ಪಡೆಯುವಂತೆ ಸಲಹೆ!

ರಾಜ್ಯದಲ್ಲಿ ಕಾಂಗ್ರೆಸ್ ಗೆ ಬಹುಮತ ಬರಲಿದೆ ಎಂಬ ಮತಗಟ್ಟೆ ಸಮೀಕ್ಷೆ ವರದಿ ಇದ್ದರೂ ಕಾಂಗ್ರೆಸ್ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಒಂದು ವೇಳೆ ಸರಳ ಬಹುಮತ ಬಂದರೂ ಬಿಜೆಪಿ ಕಾಂಗ್ರೆಸ್ ಶಾಸಕನ್ನು ತಮ್ಮತ್ತ ಸೆಳೆಯುವ ಸಾಧ್ಯತೆ ಅಲ್ಲಗಳೆಯುವ ಹಾಗಿಲ್ಲ. ಈ ಹಿನ್ನಲೆಯಲ್ಲಿ ಅಲರ್ಟ್ ಆದ ಕಾಂಗ್ರೆಸ್, ಜಿಲ್ಲಾವಾರು ಗೆದ್ದ ಅಭ್ಯರ್ಥಿಗಳ ರಕ್ಷಣೆಯ ಹೊಣೆಯನ್ನು ಜಿಲ್ಲಾಧ್ಯಕ್ಷರಿಗೆ ನೀಡಲಾಗಿದೆ. ಫಲಿತಾಂಶದ ಬೆನ್ನಲ್ಲೇ ಗೆದ್ದ ಅಭ್ಯರ್ಥಿಗಳನ್ನು ಬೆಂಗಳೂರಿಗೆ ಕರೆ ತರಲು ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲೆಯ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲಾ ಸೂಚನೆ ನೀಡಿದ್ದಾರೆ. ಜಿಲ್ಲಾ ಅಧ್ಯಕ್ಷರ ಜೊತೆಗೆ ಇನ್ನೊಬ್ಬ ನಾಯಕರಿಗೂ ಪ್ರತಿ ಜಿಲ್ಲೆಯ ಜವಾಬ್ದಾರಿಯನ್ನು ವಹಿಸಲಾಗಿದೆ. ಗೆದ್ದ ಅಭ್ಯರ್ಥಿಗಳನ್ನು ಬೇರೆಯವರ ಸಂಪರ್ಕಕ್ಕೆ ಸಿಗದಂತೆ ನೋಡಿಕೊಳ್ಳಿ ಹಾಗೂ ಯಾರ ಕೈಗೂ ಸಿಗದಂತೆ ಬೆಂಗಳೂರಿಗೆ ಕರೆತನ್ನಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

suddiyaana