ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಹೃದಯಾಘಾತದಿಂದ ಸಾವು
ಪಂಜಾಬ್‌ನ ಫಿಲ್ಲೌರ್‌ನಲ್ಲಿ ಶನಿವಾರ ಬೆಳಗ್ಗೆ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಹೆಚ್ಚೆ ಹಾಕುತಿದ್ದ ಜಲಂಧರ್‌ನ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ (77) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾಗ ಸಂತೋಖ್ ಸಿಂಗ್ ಹೃದಯಾಘಾತವಾಗಿ ಅಸ್ವಸ್ಥರಾಗಿದ್ದರು. ಕೋಡಲೇ ಅವರನ್ನು ಲೂದಿಯಾನದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಂಸದ ಸಂತೋಖ್ ಸಿಂಗ್ ಚೌಧರಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಬುದ್ಧಿ ಕಲಿಯದ ಪಾಕಿಸ್ತಾನ – ಭಾರತ ಜೊತೆಗಿನ ಬಿಕ್ಕಟ್ಟು ಪರಿಹಾರಕ್ಕೆ ಮಧ್ಯಸ್ಥಿಕೆ ಬಯಸಿದ್ದೇಕೆ?
ಪಂಜಾಬ್‌ನ ಲೂದಿಯಾನದಲ್ಲಿ ನಡೆಯುತ್ತಿದ್ದ ಯಾತ್ರೆ ವೇಳೆ ಘಟನೆ ನಡೆದಿದ್ದು, ಶಾಸಕ ರಾಣಾ ಗುರ್ಜಿತ್ ಸಿಂಗ್ ಮತ್ತು ವಿಜಯ್ ಇಂದರ್ ಸಿಂಗ್ಲಾ ಅವರೊಂದಿಗೆ ರಾಹುಲ್ ಗಾಂಧಿ ಆಸ್ಪತ್ರೆಯಲ್ಲಿ ಸಂಸದರ ಕುಟುಂಬಸ್ಥರನ್ನು ಭೇಟಿ ಮಾಡಿ ಸಂತ್ವಾನ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಸಂತೋಖ್ ಸಿಂಗ್ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸಂತಾಪ ಸೂಚಿಸಿದ್ದಾರೆ.
#WATCH | Ludhiana, Punjab: Congress MP Santokh Singh Chaudhary was rushed to a hospital in an ambulance after he collapsed while walking during Bharat Jodo Yatra today. He passed away soon after.
(Earlier visuals) pic.twitter.com/DO1WU2lTtC
— ANI (@ANI) January 14, 2023
ಫಿಲೌರ್ ವಿಧಾನಸಭಾ ಕ್ಷೇತ್ರವನ್ನು ಸಂತೋಖ್ ಸಿಂಗ್ ಚೌಧರಿ ಅವರ ಪುತ್ರ ವಿಕ್ರಮಜಿತ್ ಚೌಧರಿ ಪ್ರತಿನಿಧಿಸುತ್ತಿದ್ದಾರೆ. 2014 ಮತ್ತು 2019ರಲ್ಲಿ ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಸಂತೋಷ್ ಸಿಂಗ್ ಗೆದ್ದಿದ್ದರು.
ಸಂಸದ ಸಂತೋಖ್ ಸಿಂಗ್ ರಾಹುಲ್ ಗಾಂಧಿ ಅವರೊಂದಿಗೆ ಕುಶ್ತ್ ಆಶ್ರಮದಿಂದ ಹೊರಬಂದಾಗ ಕುಸಿದು ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ತಕ್ಷಣ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಭಾರತ್ ಜೋಡೋ ಯಾತ್ರೆ ಸದ್ಯ ಸ್ಥಗಿತಗೊಂಡಿದೆ.