ಆಪರೇಷನ್ ಕಮಲದ ಭೀತಿ: ಗೆದ್ದ ಹಿಮಾಚಲ ಕಾಂಗ್ರೆಸ್ ಶಾಸಕರು ರಾಜಸ್ಥಾನಕ್ಕೆ ಶಿಫ್ಟ್?
‘ಕೇಸರಿ’ ಕಣ್ಣು ‘ಕೈ’ ಶಾಸಕರ ಮ್ಯಾಲೆ?

ಆಪರೇಷನ್ ಕಮಲದ ಭೀತಿ: ಗೆದ್ದ ಹಿಮಾಚಲ ಕಾಂಗ್ರೆಸ್ ಶಾಸಕರು ರಾಜಸ್ಥಾನಕ್ಕೆ ಶಿಫ್ಟ್?‘ಕೇಸರಿ’ ಕಣ್ಣು ‘ಕೈ’ ಶಾಸಕರ ಮ್ಯಾಲೆ?

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವಿನ ಹಾದಿಯಲ್ಲಿರುವಾಗಲೇ ಗೆದ್ದ ಶಾಸಕರು ಕೈ ತಪ್ಪಿ ಹೋಗುವ ಆತಂಕವೂ ಎದುರಾಗಿದೆ. ಹೀಗಾಗಿ ಕಾಂಗ್ರೆಸ್ ರೆಸಾರ್ಟ್ ರಾಜಕಾರಣದ ಮೊರೆ ಹೋಗುವ ಸಾಧ್ಯತೆ ಹೆಚ್ಚಾಗಿದೆ. ಅಂತಿಮ ಫಲಿತಾಂಶ ಘೋಷಣೆಯಾಗುವ ಮುನ್ನವೇ ಬಿಜೆಪಿ ಗೆಲುವು ಖಾತ್ರಿಪಡಿಸಿಕೊಂಡಿರುವ ಕಾಂಗ್ರೆಸ್ ಅಭ್ಯರ್ಥಿಗಳನ್ನ ಸಂಪರ್ಕಿಸಲು ಯತ್ನಿಸಿದೆ ಎಂಬ ಆರೋಪವೂ ಕೇಳಿಬಂದಿದೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಅಲರ್ಟ್ ಆಗಿದ್ದು, ಚುನಾವಣೆಯಲ್ಲಿ ಗೆಲ್ಲೋ ಶಾಸಕರನ್ನು ರೆಸಾರ್ಟ್‌ಗೆ ಕಳುಹಿಸಲು ತಯಾರಿ ನಡೆಸುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ :ಗೆಲುವಿನತ್ತ ಬಿಜೆಪಿ ದಾಪುಗಾಲು – ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗುತ್ತಿದೆ ಹೌಸ್ ದ ಜೋಶ್

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ನಾಯಕರು ತುರ್ತು ಸಭೆ ನಡೆಸಿ, ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚಿಸುತ್ತಿದ್ದಾರೆ. ಬಿಜೆಪಿ ಹಿರಿಯ ನಾಯಕ ವಿನೋದ್ ತಾವ್ಡೆ ಈಗಾಗಲೇ ಹಿಮಾಚಲ ಪ್ರದೇಶಕ್ಕೆ ತೆರಳಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಒಟ್ಟು 68 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಇದರಲ್ಲಿ

ಕಾಂಗ್ರೆಸ್ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಸಂಪೂರ್ಣ ಫಲಿತಾಂಶ ಪ್ರಕಟವಾಗುವವರೆಗೂ ಕಾದು ಕುಳಿತರೆ, ಗೆದ್ದ ಶಾಸಕರು ಕೈತಪ್ಪಿ ಹೋಗಬಹುದು ಎಂಬ ಭೀತಿ ಕಾಂಗ್ರೆಸ್​ನ್ನು ಆವರಿಸಿದೆ. ಹೀಗಾಗಿ ಇಂದು ರಾತ್ರಿ ಗೆದ್ದ ಶಾಸಕರನ್ನು ಕಾಂಗ್ರೆಸ್​​ ಆಡಳಿತವಿರುವ ರಾಜಸ್ಥಾನಕ್ಕೆ ಶಿಫ್ಟ್ ಮಾಡಲು ‘ಕೈ’ ಹೈಕಮಾಂಡ್ ಚಿಂತನೆ ನಡೆಸಿದೆ. ಇದ್ರ ಸಂಪೂರ್ಣ ಹೊಣೆಯನ್ನು ಛತ್ತೀಸ್​ಗಢ ಮುಖ್ಯಮಂತ್ರಿ ಭೂಪೇಶ್ ಭಾಗೇಲ್ ಮತ್ತು ಹಿರಿಯ ನಾಯಕ ಭೂಪೇಂದರ್ ಸಿಂಗ್ ಹೂಡಾಗೆ ನೀಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಎಲ್ಲಾ ಬೆಳವಣಿಗೆಗಳನ್ನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅಲ್ಲದೇ, ಇಂದು ರಾತ್ರಿ ಪ್ರಿಯಾಂಕಾ ಹಿಮಾಚಲಕ್ಕೆ ತಲುಪುವ ಸಾಧ್ಯತೆ ಇದೆ.

suddiyaana