ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಸಂಘರ್ಷ! – ಒಂದೇ ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತು ಸಿಎಂ-ಡಿಸಿಎಂ ಗುಸುಗುಸು

ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಸಂಘರ್ಷ! – ಒಂದೇ ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತು ಸಿಎಂ-ಡಿಸಿಎಂ ಗುಸುಗುಸು

ಕರ್ನಾಟಕ ಕಾಂಗ್ರೆಸ್ಸಿನಲ್ಲಿ ತೀವ್ರ ರೀತಿಯ ಬೆಳವಣಿಗೆಗಳು ನಡೆಯುತ್ತಿವೆ. ನವೆಂಬರ್ ಕ್ರಾಂತಿ ಎಂದು ಏನು ಹಲವು ದಿನಗಳಿಂದ ರಾಜಕೀಯ ವಿದ್ಯಮಾನ ನಡೆದುಕೊಂಡು ಬಂದಿದೆಯೋ, ಅದಕ್ಕೆ ಪೂರಕ ಎನ್ನುವಂತೆ, ಶಾಸಕರ ದೆಹಲಿ ಪ್ರವಾಸ ನಡೆದಿದೆ. ಇನ್ನೊಂದು ಕಡೆ, ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ದವಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇವೆಲ್ಲದ್ರ ನಡುವೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಟ್ಟಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮದುವೆ ದಿನವೇ ವಧುಗೆ ಅಪಘಾತ! – ICUನಲ್ಲೇ ತಾಳಿ ಕಟ್ಟಿದ ವರ

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಸಮರ ಭಾರೀ ಸದ್ದು ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಬಣ ಒಂದುಕಡೆಯಾದರೆ, ಡಿಸಿಎಂ ಡಿ.ಕೆ ಶಿವಕುಮಾರ್ ಬಣ ಮತ್ತೊಂದು ಕಡೆ ಇದೆ. ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಡಿಕೆಶಿ ಬಣ ದೆಹಲಿ ಪರೇಡ್ ನಡೆಸಿದೆ. ಇದೆಲ್ಲದರ ನಡುವೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಬ್ರದರ್ಸ್ ಪ್ರತ್ಯೇಕವಾಗಿ ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇವೆಲ್ಲದ್ರ ನಡುವೆ ಸಿಎಂ, ಡಿಸಿಎಂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ವಿಶ್ವ ಮೀನುಗಾರಿಕೆ ದಿನಾಚರಣೆ ಹಿನ್ನೆಲೆ ಹೆಬ್ಬಾಳದ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಮತ್ಸ್ಯಮೇಳ ಕಾರ್ಯಕ್ರಮಕ್ಕೆ ಸಿಎಂ ಹಾಗೂ ಡಿಸಿಎಂ ಒಟ್ಟಿಗೆ ಆಗಮಿಸಿದ್ದಾರೆ. ಅಲ್ಲದೇ ಮತ್ಸ್ಯಮೇಳದ ಸ್ಟಾಲ್‌ಗಳನ್ನು ಜೊತೆಯಾಗಿ ವೀಕ್ಷಿಸಿದ್ದಾರೆ. ಇನ್ನು ಒಂದೇ ವೇದಿಕೆಯ ಮೇಲೆ ಅಕ್ಕಪಕ್ಕ ಕುಳಿತಿರುವ ಸಿಎಂ-ಡಿಸಿಎಂ ಗುಸುಗುಸು ಮಾತನಾಡಿದ್ದಾರೆ. ಸಂಸತ್ ಅಧಿವೇಶನ ಸಂದರ್ಭದಲ್ಲಿ ಎಲ್ಲ ನಾಯಕರು ಒಟ್ಟಿಗೆ ಸೇರಲಿದ್ದು, ಆ ಸಂದರ್ಭದಲ್ಲಿ ನಾಯಕತ್ವದ ವಿಚಾರದ ಬಗ್ಗೆಯೂ ಚರ್ಚಿಸಲಾಗುವುದು. ಅಲ್ಲಿಯವರೆಗೆ ಸಂಪುಟ ಪುನಾರಚನೆಗೆ ಅವಕಾಶ ಸಿಗುವುದಿಲ್ಲ. ಹಾಗಾಗಿ, ಸಮಾಧಾನದಿಂದ ಇರುವಂತೆ ಡಿಕೆ ಸಹೋದರರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಸೂಚಿಸಿದ್ದಾರೆ ಎನ್ನಲಾಗಿದೆ. ಕುರ್ಚಿ ಕದನದ ನಡುವೆಯೇ ಸಿಎಂ-ಡಿಸಿಎಂ ಒಟ್ಟಿಗೆ ಕಾಣಿಸಿಕೊಂಡಿರುವುದು ಅಚ್ಚರಿ ಮೂಡಿಸಿದೆ.

Shwetha M