ಬ್ರಹ್ಮಾಂಡ ಭ್ರಷ್ಟಾಚಾರ.. ಬೊಮ್ಮಾಯಿ ರಾಜೀನಾಮೆಗೆ ಒತ್ತಡ – ಬೆಂಗಳೂರಲ್ಲಿ ಕೆರಳಿದ ‘ಕೈ’ಪಡೆ!

ಬ್ರಹ್ಮಾಂಡ ಭ್ರಷ್ಟಾಚಾರ.. ಬೊಮ್ಮಾಯಿ ರಾಜೀನಾಮೆಗೆ ಒತ್ತಡ – ಬೆಂಗಳೂರಲ್ಲಿ ಕೆರಳಿದ ‘ಕೈ’ಪಡೆ!

ದಾವಣಗೆರೆ ಜಿಲ್ಲೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ನಿವಾಸ ಹಾಗೂ ಕಚೇರಿ ಮೇಲೆ ನಡೆದ ಲೋಕಾಯುಕ್ತ ರೇಡ್ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಅದ್ರಲ್ಲೂ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲೇ ನಡೆದಿರುವ ಈ ದಾಳಿ ಕಾಂಗ್ರೆಸ್ ಗೆ ಬಿಜೆಪಿ ವಿರುದ್ಧ ಬ್ರಹ್ಮಾಸ್ತ್ರವೇ ಸಿಕ್ಕಂತಾಗಿದೆ.

ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆ ಹಾಗೂ ಕಚೇರಿಯಲ್ಲಿ ಒಟ್ಟಾರೆ 8 ಕೋಟಿ 12 ಲಕ್ಷ ರೂಪಾಯಿ ಹಣವನ್ನ ಲೋಕಾಯುಕ್ತ ಪೊಲೀಸರು ಸೀಜ್ ಮಾಡಿದ್ದರು. ಈ ಬೆನ್ನಲ್ಲೇ ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಇವತ್ತು ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಯ್ತು. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ವಿಪಕ್ಷನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಂ ನಿವಾಸದವರೆಗೆ ರ್ಯಾಲಿ ನಡೆಸಿದ್ರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಕೆಜೆ ಜಾರ್ಜ್, ಕೃಷ್ಣಭೈರೇಗೌಡ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ರು.

ಇದನ್ನೂ ಓದಿ : ಲೋಕಸಭೆ ಚುನಾವಣೆಗೆ ಮೈತ್ರಿಯಿಲ್ಲ – ಟಿಎಂಸಿಯಿಂದ ಏಕಾಂಗಿ ಸ್ಪರ್ಧೆ ಎಂದ ಮಮತಾ ಬ್ಯಾನರ್ಜಿ

ಗುಟ್ಕಾ ಬ್ಯಾಗ್, ನಕಲಿ ಹಣ ತೋರಿಸಿ ವ್ಯಂಗ್ಯವಾಡಿದ್ರು. ಹಾಗೇ 40 ಪರ್ಸೆಂಟ್ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗುತ್ತಾ ಆಕ್ರೋಶ ಹೊರಹಾಕಿದ್ರು. ಸಾವಿರಾರು ಕಾರ್ಯಕರ್ತರು ಱಲಿಯಲ್ಲಿ  ಭಾಗಿಯಾಗಿದ್ದು, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟಿದ್ರು. ಈ ವೇಳೆ ಪೊಲೀಸ್ರು ದಾರಿಮಧ್ಯೆಯೇ ಕಾರ್ಯಕರ್ತರ ತಡೆಗೆ ಬ್ಯಾರಿಕೇಡ್ ಹಾಕಿದ್ರು. ಈ ವೇಳೆ ಕಾಂಗ್ರೆಸ್ ನಾಯಕರು ರಸ್ತೆಯಲ್ಲೇ ಕುಳಿತು ಆಕ್ರೋಶ ಹೊರ ಹಾಕಿದ್ರು. ಈ ವೇಳೆ ವಿಪಕ್ಷನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು. ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪಗಳಿಗೆ ದಾಖಲಾತಿ ಕೊಡಿ ಅಂತಾರೆ. ಮಾಡಾಳ್ ಗಿಂತ ಸಾಕ್ಷಿ ಬೇಕಾ. ಕೂಡಲೇ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ರು.

suddiyaana