ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ – ಕಾಂಗ್ರೆಸ್​ ವ್ಯಂಗ್ಯ

ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ – ಕಾಂಗ್ರೆಸ್​ ವ್ಯಂಗ್ಯ

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕನಾಗಿ ಆರ್‌. ಅಶೋಕ್‌ ನೇಮಕವಾಗಿದ್ದಾರೆ. ಈ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಧಾನ ಸೃಷ್ಟಿಯಾಗಿದೆ. ಬೆಂಗಳೂರಿನ ಖಾಸಗಿ ಹೊಟೇಲ್​ವೊಂದರಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿದ್ದ, ಬಸನಗೌಡ ಪಾಟೀಲ್​ ಯತ್ನಾಳ್, ರಮೇಶ್​ ಜಾರಕಿಹೊಳಿ, ಬೆಲ್ಲದ್​ ಮೂವರು ಸಭೆ ಶುರುವಾಗುವ ಮುಂಚೆಯೇ ಹೊರನಡೆದಿದ್ದು, ಇದೀಗ ಆಡಳಿತ ಪಕ್ಷ ಕಾಂಗ್ರೆಸ್,​ ಟ್ವೀಟ್​ ಮೂಲಕ ಟೀಕಾ ಪ್ರಹಾರ ನಡೆಸಿದೆ.

ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ ಎಂದು ಹೊರಗೆ ಟೀ ಕುಡಿಯಲು ಹೋದವರು ಜಗನ್ನಾಥ ಭವನದ ಎದುರು ಟೀ ಮಾರಿಕೊಂಡು ಕೂತಿದ್ದಾರಂತೆ, ಮೋದಿ ಮಾದರಿ! ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ? “ಜಾರಿದವರ ಯತ್ನ ಬೆಲ್ಲ” ಆಗ್ಲಿಲ್ಲವಲ್ಲಪ್ಪ ಎಂದು ಟ್ವೀಟ್​ ಮೂಲಕ ಟೀಕಿಸಿದೆ.

ಇದನ್ನೂ ಓದಿ: ಚುನಾವಣೆಯಲ್ಲಿ ಗೆಲ್ಲಬೇಕೆಂದು ಚಪ್ಪಲಿಯಿಂದ ಹೊಡೆಸಿಕೊಂಡ ಕಾಂಗ್ರೆಸ್‌ ಅಭ್ಯರ್ಥಿ!

ಇನ್ನು ಮತ್ತೊಂದು ಟ್ವೀಟ್​ ಮಾಡಿರುವ ಕಾಂಗ್ರೆಸ್​ ‘ಲಿಂಗಾಯತ ನಾಯಕರನ್ನು ಬಳಸಿ ಬೀಸಾಡುವುದೇ ಬಿಜೆಪಿಯ ಅಜೆಂಡಾ ಎಂದಿದೆ. ಯಡಿಯೂರಪ್ಪರನ್ನು ಎರಡೆರಡು ಬಾರಿ ಕಣ್ಣೀರು ಹಾಕಿಸಿ ಹುದ್ದೆಯಿಂದ ಕೆಳಗಿಳಿಸಿ ಕಳಿಸಿತ್ತು, ಜಗದೀಶ್ ಶೆಟ್ಟರ್ ರವರನ್ನು ಅಧಿಕಾರದಿಂದ ದೂರವಿಟ್ಟು ವಂಚಿಸಿತ್ತು , ವಿ. ಸೋಮಣ್ಣರನ್ನು ವ್ಯವಸ್ಥಿತವಾಗಿ ಸೋಲಿನ ಹೊಂಡಕ್ಕೆ ತಳ್ಳಲಾಗಿತ್ತು, ಲಕ್ಷ್ಮಣ್ ಸವದಿಯವರನ್ನು ಮೂಲೆಗುಂಪು ಮಾಡಿ ಕೂರಿಸಲಾಗಿತ್ತು, ಈಗ ಸಿಎಂ ಆಗಿದ್ದ ಬೊಮ್ಮಾಯಿಯವರು ಆಟಕ್ಕೂ ಇಲ್ಲ, ಲೆಕ್ಕಕ್ಕೂ ಇಲ್ಲದಂತೆ ನಿರ್ಲಕ್ಷಿಸಲಾಗಿದೆ.

ಇದೇ ಮಾದರಿಯಲ್ಲಿ ವಿಜಯೇಂದ್ರರನ್ನು ಕೂಡ ಬಳಸಿ ಬೀಸಾಡಲು ತಂದಿರುವ ಹೊಸ “ಹರಕೆಯ ಕುರಿ” ಅಷ್ಟೇ ಎಂದು ಟ್ವೀಟ್​ ಮಾಡುವ ಮೂಲಕ ಬಿಜೆಪಿ ವಿರುದ್ದ ಟಾಂಗ್​ ನೀಡಿದ್ದಾರೆ.

Shwetha M