ಮೇಘಾಲಯದ ಮುಖ್ಯಮಂತ್ರಿಯಾಗಿ ಕಾನ್ರಾಡ್ ಸಂಗ್ಮಾ ಪ್ರಮಾಣವಚನ ಸ್ವೀಕಾರ

ಮೇಘಾಲಯದ ಮುಖ್ಯಮಂತ್ರಿಯಾಗಿ ಕಾನ್ರಾಡ್ ಸಂಗ್ಮಾ ಪ್ರಮಾಣವಚನ ಸ್ವೀಕಾರ

ನ್ಯಾಷನಲ್ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರು ಮೇಘಾಲಯದ ಮುಖ್ಯಮಂತ್ರಿಯಾಗಿ ಸತತ 2ನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು. ಫೆಬ್ರವರಿ 27 ರಂದು ನಡೆದ ಚುನಾವಣೆಯಲ್ಲಿ ಸಂಗ್ಮಾ ನೇತೃತ್ವದ ಎನ್‌ಪಿಪಿ 26 ಸ್ಥಾನಗಳನ್ನು ಗೆದ್ದಿತ್ತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಕಾನ್ರಾಡ್ ಸಂಗ್ಮಾ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ:  ಬಂಧನ ಭೀತಿಯಲ್ಲಿದ್ದ ವಿರೂಪಾಕ್ಷಪ್ಪಗೆ ಬಿಗ್ ರಿಲೀಫ್ – ಮಧ್ಯಂತರ ಜಾಮೀನು ನೀಡಿ ಕೋರ್ಟ್ ವಿಧಿಸಿದ ಷರತ್ತುಗಳೇನು?

ಮೇಘಾಲಯದ ರಾಜ್ಯಪಾಲ ಫಾಗು ಚೌಹಾಣ್ ಅವರು ಸಂಗ್ಮಾ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಬೋಧಿಸಿದರು. ಇಬ್ಬರು ನಾಯಕರಿಗೆ ಉಪಮುಖ್ಯಮಂತ್ರಿಯಾಗಿ, ಇತರ ಒಂಬತ್ತು ಸಚಿವರಿಗೆ ರಾಜ್ಯಪಾಲರು ಪ್ರಮಾಣ ವಚನ ಬೋಧಿಸಿದರು. ಹೊಸದಾಗಿ ಚುನಾಯಿತರಾದ ಹನ್ನೊಂದು ಶಾಸಕರು ಕೂಡ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಂಪುಟದಲ್ಲಿ ಇಬ್ಬರು ಉಪಮುಖ್ಯಮಂತ್ರಿಗಳಾಗಿ ಪ್ರೆಸ್ಟೋನ್ ಟೈನ್ಸಾಂಗ್ ಮತ್ತು ಸ್ನಿಯಾವ್ಭಲ್ಯಾಂಡ್ ಧಾರ್ ಇರಲಿದ್ದಾರೆ. ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್ 2.0 ಎಂದು ಕರೆಯಲ್ಪಡುವ ಹೊಸ ಸರ್ಕಾರವನ್ನು ರಚನೆ ಮಾಡಿದೆ. ಈ ಸಚಿವ ಸಂಪುಟವು ಎಂ ಅಂಪಾರೀನ್ ಲಿಂಗ್ಡೋಹ್ ಎಂಬ ಒಬ್ಬ ಮಹಿಳಾ ಸಚಿವರನ್ನು ಹೊಂದಿದೆ.

suddiyaana