ರಾಮನಗರದಲ್ಲಿ ಅಯೋಧ್ಯೆ ಮಾದರಿಯ ರಾಮಮಂದಿರ ನಿರ್ಮಾಣ – ಯೋಜನೆ ರೂಪಿಸಲು ಸಿಎಂ ಸೂಚನೆ

ರಾಮನಗರದಲ್ಲಿ ಅಯೋಧ್ಯೆ ಮಾದರಿಯ ರಾಮಮಂದಿರ ನಿರ್ಮಾಣ – ಯೋಜನೆ ರೂಪಿಸಲು ಸಿಎಂ ಸೂಚನೆ

ಉತ್ತರ ಭಾರತದಂತೆ ದಕ್ಷಿಣ ಭಾರತದಲ್ಲೂ ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ. ರಾಮ ದೇವರ ಬೆಟ್ಟದಲ್ಲಿಅಯೋಧ್ಯೆ ಮಾದರಿಯ ರಾಮಮಂದಿರ ನಿರ್ಮಾಣಕ್ಕೆ ಯೋಜನೆ ರೂಪಿಸಲು ಸಿಎಂ ಸೂಚನೆ ನೀಡಿದ್ದಾರೆ ಎಂದು ಸಚಿವ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಸುವರ್ಣಸೌಧದಲ್ಲಿ ಮಾತನಾಡಿದ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್, ಉತ್ತರ ಭಾರತದಂತೆ ದಕ್ಷಿಣ ಭಾರತದಲ್ಲೂ ರಾಮ ಮಂದಿರ ನಿರ್ಮಾಣ ಆಗುತ್ತೆ ಎಂಬ ವಿಶ್ವಾಸ ಇದೆ. ಬರುವಂತಹ ಬಜೆಟ್ ನಲ್ಲಿ ಸಿಎಂ ಘೋಷಣೆ ಮಾಡಬಹುದು. ಈಗಾಗಲೇ ಆಗಲ್ಲ ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದರು.

ಇದನ್ನೂ ಓದಿ:  ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಕಾಂಗ್ರೆಸ್‌ನ ಹಿರಿಯ ಶಾಸಕ ಆರ್.ವಿ ದೇಶಪಾಂಡೆ ಆಯ್ಕೆ – ವಿಧಾನಸಭೆಯ ಕಲಾಪದಲ್ಲಿ ಸದಸ್ಯರ ಅಭಿನಂದನೆ

ರಾಮನಗರದ ರಾಮದೇವರ ಬೆಟ್ಟವನ್ನು ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ. ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಲು ಮುಖ್ಯಮಂತ್ರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ. ಅಲ್ಲಿರುವ ರಾಮನ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿ, ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ. ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್  ಆಹ್ವಾನಿಸಿದ್ದೇವೆ. ಅಭಿವೃದ್ಧಿಗೆ ಬರುವಂತ ಬಜೆಟ್ ನಲ್ಲಿ ಸಿಎಂ ಹಣ ಘೋಷಣೆ ಮಾಡುತ್ತಾರೆ. ಆ ಮೂಲಕ ರಾಮನಗರದ ರಾಮದೇವರ ಬೆಟ್ಟವನ್ನು ಹಿಂದೂ ಧಾರ್ಮಿಕ ಕೇಂದ್ರವನ್ನಾಗಿ ಮಾಡುತ್ತೇವೆ ಎಂದರು.

suddiyaana