ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು – ಮುಂದಿನ ಐದು ವರ್ಷಗಳಲ್ಲಿ 2 ಕೋಟಿ ಬಡವರಿಗಾಗಿ ಮನೆ ನಿರ್ಮಾಣ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡನೆ ಮಾಡಿದರು. ಕಾಲಕಾಲ ರೈತರಿಗೆ ನೀಡುವ ಕನಿಷ್ಠ ಬೆಂಬಲ ಬೆಲೆ ಏರಿಕೆ ಮಾಡಲಾಗಿದೆ. ಸಬ್ಕಾ ಸಾಥ್, ಸಬ್ಕಾ ವಿಕಾಸ್ ನಮ್ಮ ಸರ್ಕಾರ ಮಂತ್ರವಾಗಿದೆ. ಒಟ್ಟು ಇಲ್ಲಿಯವರೆಗೆ 80 ಕೋಟಿ ಜನರಿಗೆ ಉಚಿತ ಪಡಿತರ ವಿತರಣೆ ಮಾಡಲಾಗಿದೆ ಎಂದು ಬಜೆಟ್ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಇದನ್ನೂ ಓದಿ: ಮಹಿಳೆಯರಿಗೆ 70% ಕ್ಕಿಂತ ಹೆಚ್ಚು ಮನೆಗಳು – ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ
ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗುವುದು, ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಬಜೆಟ್ ಮಂಡನೆ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಮುಂದಿನ ಐದು ವರ್ಷಗಳಲ್ಲಿ 2 ಕೋಟಿ ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಕ್ರೀಡೆಯಲ್ಲಿ ಹೊಸ ಎತ್ತರಕ್ಕೆ ಏರುತ್ತಿರುವ ನಮ್ಮ ಯುವಕರ ಬಗ್ಗೆ ದೇಶಕ್ಕೆ ಹೆಮ್ಮೆ ಇದೆ. 2023 ರಲ್ಲಿ ಏಷ್ಯನ್ ಗೇಮ್ಸ್ ಮತ್ತು ಏಷ್ಯನ್ ಪ್ಯಾರಾ ಗೇಮ್‌ನಲ್ಲಿ ಅತ್ಯಧಿಕ ಪದಕಗಳ ಸಂಖ್ಯೆಯು ಹೆಚ್ಚಿನ ಆತ್ಮವಿಶ್ವಾಸವನ್ನು ತೋರಿಸುತ್ತದೆ. ಸರ್ಕಾರದ ಗಮನವು ಜಿಡಿಪಿ ಮೇಲೆ ಇದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಹೇಳಿದರು.
ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ. ನಿರ್ಮಲಾ ಸೀತಾರಾಮನ್ ತ್ರಿವಳಿ ತಲಾಖ್ ಅನ್ನು ಕಾನೂನುಬಾಹಿರವಾಗಿಸುವುದು, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಹೇಳಿದರು.