ಹಲವು ರಾಜ್ಯಗಳಲ್ಲಿ ಮುಂದುವರಿದ ಪ್ರವಾಹ ಸ್ಥಿತಿ – ರಾಂಬಾನ್ ಜಿಲ್ಲೆಯಲ್ಲಿ 1ರಿಂದ 10ನೇ ತರಗತಿವರೆಗೆ ರಜೆ ಘೋಷಣೆ

ಹಲವು ರಾಜ್ಯಗಳಲ್ಲಿ ಮುಂದುವರಿದ ಪ್ರವಾಹ ಸ್ಥಿತಿ – ರಾಂಬಾನ್ ಜಿಲ್ಲೆಯಲ್ಲಿ 1ರಿಂದ 10ನೇ ತರಗತಿವರೆಗೆ ರಜೆ ಘೋಷಣೆ

ದೇಶದ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವು ರಾಜ್ಯಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಅಸ್ಸಾಂ, ಮೇಘಾಲಯ, ಜಮ್ಮುಕಾಶ್ಮೀರ, ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ. ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : ಜೂ. 26 ರವರೆಗೆ ಕರ್ನಾಟಕದ ಹಲವೆಡೆ ಭಾರಿ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಇನ್ನು ಅಸ್ಸಾಂನ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ಬಾರ್ಪೇಟಾ ಜಿಲ್ಲೆಯಲ್ಲಿ 1.5 ಲಕ್ಷಕ್ಕೂ ಹೆಚ್ಚು ನಿವಾಸಿಗಳನ್ನ ಸ್ಥಳಾಂತರ ಮಾಡಲಾಗಿದೆ. ಜೂನ್ 28 ಹಾಗೂ 29ರಂದು ಮೇಘಾಲಯದ ಹಲವೆಡೆ ಭಾರೀ ಮಳೆಯಾಗಲಿದ್ದು ಭೂಕುಸಿತ ಉಂಟಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೇ ಜಮ್ಮು ಕಾಶ್ಮೀರದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಹಿನ್ನೆಲೆ ರಾಂಬಾನ್ ಜಿಲ್ಲೆಯಲ್ಲಿ ಇಂದು 1ರಿಂದ 10ನೇ ತರಗತಿವರೆಗೆ ಎಲ್ಲಾ ಶಾಲೆಗಳಿಗೆ ರಜೆ ನೀಡಲಾಗಿದೆ. ಆದರೆ ಶಿಕ್ಷಕರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಉಳಿದಂತೆ ಒಡಿಶಾ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಗೋವಾ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಈಶಾನ್ಯ ರಾಜ್ಯಗಳ ಕೆಲ ಭಾಗಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

suddiyaana