ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ – ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ – ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬುಧವಾರ ಕೂಡ ಭಾರಿ ಮಳೆ ಸುರಿಯುತ್ತಿದೆ. ಈ ಹಿನ್ನಲೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ: ಆಕಾಶದಲ್ಲಿ ಸ್ವರ್ಗದ ಬಾಗಿಲು! – ನಿಗೂಢತೆ ಕಂಡು ನಿಬ್ಬೆರಗಾದ ಬೆಂಗಳೂರಿಗರು

ಬೆಳಗಾವಿ, ಬೀದರ್, ಕಲಬುರಗಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಇನ್ನು ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿ ರಾಜ್ಯದ 9ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಪ್ರವಾಹ ಮುಂದುವರಿದಿದೆ. ಇದರಿಂದ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಜಲಾಶಯಗಳು ಭರ್ತಿಯಾಗುತ್ತಿವೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಬೆಳಗಾವಿ, ಚಿತ್ರದುರ್ಗ, ಕಲಬುರಗಿ, ಹಾಸನದ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

suddiyaana