ಒಡಿಶಾದಲ್ಲಿ ಭೀಕರ ರೈಲು ದುರಂತ – 238 ಜನರು ಸಾವು, 900 ಮಂದಿ ಗಾಯ

ಒಡಿಶಾದಲ್ಲಿ ಭೀಕರ ರೈಲು ದುರಂತ – 238 ಜನರು ಸಾವು, 900 ಮಂದಿ ಗಾಯ

ಭುವನೇಶ್ವರ: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಭೀಕರ ರೈಲು ದುರಂತ ಶುಕ್ರವಾರ ಸಂಜೆ ಸಂಭವಿಸಿದೆ. ಈ ದುರಂತದಲ್ಲಿ 238 ಮಂದಿ ಸಾವನ್ನಪ್ಪಿದ್ದು, 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು 10-12 ಬೋಗಿಗಳು ಹಳಿತಪ್ಪಿದ್ದವು. ಇದರ ಬೆನ್ನಲ್ಲೇ ಯಶವಂತಪುರದಿಂದ ಹೌರಾದೆಡೆಗೆ ಸಾಗುತ್ತಿದ್ದ ಮತ್ತೊಂದು ರೈಲು ಅದೇ ಮಾರ್ಗವಾಗಿ ಸಾಗುತ್ತಿದ್ದಾಗ ಹಳಿ ತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಬರೋಬ್ಬರಿ 74 ಲಕ್ಷಕ್ಕೂ ಅಧಿಕ ಭಾರತೀಯರ ವಾಟ್ಸ್​ಆ್ಯಪ್ ಖಾತೆ ಬ್ಯಾನ್‌! – ಮೆಟಾ ಕೊಟ್ಟ ಕಾರಣ ಏನು?

ಈ ದುರಂತದಲ್ಲಿ ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ, ಗಂಭೀರ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಸಣ್ಣ ಗಾಯಗಳಾದ ಪ್ರಯಾಣಿಕರಿಗೆ 50,000 ರೂ. ಪರಿಹಾರವನ್ನು ರೈಲ್ವೇ ಇಲಾಖೆ ಘೋಷಿಸಿದೆ.

ಅಪಘಾತದ ಸ್ಥಳದಲ್ಲಿ ರಕ್ಷಣಾ ತಂಡಗಳು ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. 3 ಎನ್‌ಡಿಆರ್‌ಎಫ್‌, 4 ಎಸ್‌ಡಿಆರ್‌ಎಫ್‌, ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ 50 ಅಂಬುಲೆನ್ಸ್‌ಗಳು ನಿರಂತರ ಓಡಾಟ ಮಾಡುತ್ತಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಸ್ಥಳೀಯ ಜನ ಕೂಡ ರಕ್ಷಣಾ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ.

ಸರಣಿ ಅಪಘಾತದಲ್ಲಿ ರೈಲುಗಳ ಬೋಗಿಯೊಳಗಡೆ ಹಲವರು ಸಿಕ್ಕಿಬಿದ್ದಿರುವುದಾಗಿ ವರದಿಗಳು ತಿಳಿಸಿವೆ. ಈಗಾಗಲೇ 233 ಮಂದಿ ಸಾವನ್ನಪ್ಪಿದ್ದು, 900ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇನ್ನೂ ಹಲವರು ಸಿಕ್ಕಿ ಬಿದ್ದಿರುವುದರಿಂದ ಸಾವು ನೋವುಗಳ ಸಂಖ್ಯೆ ಹೆಚ್ಚುವ ಸಾದ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಒಡಿಶಾ ರೈಲು ಅಪಘಾತ ಸಹಾಯವಾಣಿ ಆರಂಭಿಸಲಾಗಿದೆ. ಗಾಯಾಳುಗಳು, ಮೃತಪಟ್ಟವರ ಮಾಹಿತಿ ಪಡೆಯಲು ಸಹಾಯವಾಣಿ ಸ್ಥಾಪನೆ ಮಾಡಲಾಗಿದೆ.

ಸಹಾಯವಾಣಿ ಸಂಖ್ಯೆಗಳು: ಹೌರಾ: 033-26382217

ಖರಗ್‌ಪುರ: 8972073925 & 9332392339

ಬಾಲಸೋರ್: 8249591559 & 7978418322

ಶಾಲಿಮಾರ್: 9903370746

suddiyaana