ಕೆಮ್ಮಿನ ಸಿರಪ್‌ ಸೇವಿಸಿ 11 ಮಕ್ಕಳು ಸಾವು! – ಕರ್ನಾಟಕದಲ್ಲೂ ಕೋಲ್ಡ್ರಿಫ್ ಸಿರಪ್​​​ ಬ್ಯಾನ್!

ಕೆಮ್ಮಿನ ಸಿರಪ್‌ ಸೇವಿಸಿ 11 ಮಕ್ಕಳು ಸಾವು! – ಕರ್ನಾಟಕದಲ್ಲೂ ಕೋಲ್ಡ್ರಿಫ್ ಸಿರಪ್​​​ ಬ್ಯಾನ್!

ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ನಕಲಿ ಕೆಮ್ಮಿನ ಸಿರಪ್ ಸೇವಿಸಿ ಒಟ್ಟು 11 ಮಕ್ಕಳು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಬೆನ್ನಲ್ಲೇ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಇದೀಗ ಕರ್ನಾಟಕದಲ್ಲೂ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್​​ ಅನ್ನು ಕರ್ನಾಟಕ ಬ್ಯಾನ್‌ ಮಾಡಲಾಗಿದೆ.

ಇದನ್ನೂ ಓದಿ: ವಿಜಯಲಕ್ಷ್ಮಿ ಮುಂದೆ ದಾಸನ ಗೋಳಾಟ! –  ಜೈಲಿಗೆ ಬರಬೇಡ ಎಂದು ಹೇಳಿದ ದರ್ಶನ್!‌

ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ನಕಲಿ ಕೆಮ್ಮಿನ ಸಿರಪ್‌ ಸೇವಿಸಿ ಈಗಾಗಲೇ 11 ಮಕ್ಕಳು ಸಾವನ್ನಪ್ಪಿದ್ದಾರೆ. ಈ ಬೆನ್ನಲ್ಲೇ ಕೇಂದ್ರ ಸರ್ಕಾರ 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್‌ ನೀಡಬಾರದು ಎಂದು ತಿಳಿಸಿತ್ತು. ಈ ಬೆನ್ನಲ್ಲೇ ಕರ್ನಾಟಕದಲ್ಲೂ ಕೋಲ್ಡ್ರಿಫ್ ಕಾಫ್ ಸಿರಪ್ ಅನ್ನ ಬ್ಯಾನ್‌ ಮಾಡಲಾಗಿದೆ. ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆ ಎಲ್ಲಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್​ಗಳಿಗೆ ಪತ್ರ ಬರೆಯಲಾಗಿದ್ದು, ಕೋಲ್ಡ್ರಿಫ್​​​ ಕಾಫ್ ಸಿರಪ್ ಮಾರಾಟ ಮಾಡದಂತೆ ಮೆಡಿಕಲ್​ ಸ್ಟೋರ್ಸ್​ ಹಾಗೂ ಡಿಸ್ಟ್ರಿಬ್ಯೂಟರ್​​ಗಳಿಗೆ ಸೂಚನೆ ನೀಡಿದೆ. ಜೊತೆಗೆ ಡೈಎಥಿಲೀನ್ ಗ್ಲೈಕಾಲ್ ಕಂಟೇಟ್ ಕಾಫ್ ಸಿರಪ್ ತಡೆಗೂ ಸೂಚಿಸಲಾಗಿದೆ.

ಕೋಲ್ಡ್ರಿಫ್ ಕಾಫ್ ಸಿರಪ್​​ ಅನ್ನು ಕರ್ನಾಟಕದಲ್ಲಿ ಮಾತ್ರವಲ್ಲ ತಮಿಳನಾಡಿನಲ್ಲೂ ಬ್ಯಾನ್ ಮಾಡಲಾಗಿದೆ. ಎಲ್ಲಾ ಸ್ಟಾಕ್‌ಗಳನ್ನು ಕೂಡ ತಕ್ಷಣವೇ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಮುಂದಿನ ಸರ್ಕಾರದ ಆದೇಶದವರೆಗೆ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕಾಫ್ ಸಿರಫ್ ಮಾರಟ ಮಾಡದ್ದಂತೆ ತಿಳಿಸಲಾಗಿದ್ದು, ಕರ್ನಾಟಕದಲ್ಲಿ ಈಗಾಗಲೇ ಮಾರಾಟಗೊಂಡಿರುವ ಮತ್ತು ನಿಮ್ಮ ಬಳಿ ಇರುವ ಕೋಲ್ಡ್ರಿಫ್ ಸಿರಪ್‌ನ ಪ್ರಸ್ತುತ ಸ್ಟಾಕ್ ವಿವರಗಳನ್ನು ಡ್ರಗ್ಸ್ ಕಂಟ್ರೋಲ್ ಇಲಾಖೆ ಕಳುಹಿಸುವಂತೆ ಸೂಚನೆ ನೀಡಲಾಗಿದೆ.

Shwetha M