ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ – ವೆಬ್​​ ಸೈಟ್​ನಲ್ಲೇ ನಿಮ್ಮ ರಿಸಲ್ಟ್ ನೋಡಿ!

ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ – ವೆಬ್​​ ಸೈಟ್​ನಲ್ಲೇ ನಿಮ್ಮ ರಿಸಲ್ಟ್ ನೋಡಿ!

ವರ್ಷದ ಶ್ರಮಕ್ಕೆ ಪ್ರತಿಫಲ ಸಿಗುವ ಸಮಯ. ತಿಂಗಳಿಂದ ಕಾಯುತ್ತಿದ್ದ ಕುತೂಹಲಕ್ಕೆ ತೆರೆ ಬೀಳುವ ಕ್ಷಣ. ಯಾಕಂದ್ರೆ ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ 10 ಗಂಟೆಗೆ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ.

ಏಪ್ರಿಲ್ 21ರಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಸುಮಾರು 10 ಗಂಟೆಗೆ ವೆಬ್ ಸೈಟ್ ನಲ್ಲಿ ಫಲಿತಾಂಶ ಬಿಡುಗಡೆ ಮಾಡಲಾಗುತ್ತದೆ. ಮಾರ್ಚ್ ತಿಂಗಳಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇದರ ಬಗ್ಗೆ ಅಧಿಕೃತವಾಗಿ ಈ ಬಗ್ಗೆ ಆದೇಶ ಹೊರಡಿಸಿದೆ. www.karresults.nic.in ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ : ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್ ಆ್ಯಪ್ ಅನಾವರಣ

ರಾಜ್ಯದ 5,716 ಪಿಯು ಕಾಲೇಜುಗಳಿಂದ ಒಟ್ಟು 7,26,195 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ನೋಂದಾಯಿಸಿದ್ದು, ಈ ಪೈಕಿ 3,63,698 ಬಾಲಕರು ಮತ್ತು 3,62.497 ಬಾಲಕಿಯರು ಪರೀಕ್ಷೆ ಬರೆದಿದ್ದರು. ಇದರಲ್ಲಿ 6.29 ಲಕ್ಷ ವಿದ್ಯಾರ್ಥಿಗಳು ಹೊಸಬರು (ಫ್ರೆಷರ್ಸ್​), 25,847 ಖಾಸಗಿ ಮತ್ತು 70,589 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಕಲಾ ವಿಭಾಗದಿಂದ 2,34,815, ವಾಣಿಜ್ಯ- 2,47,260 ಮತ್ತು ವಿಜ್ಞಾನದಿಂದ 2,44,120 ವಿದ್ಯಾರ್ಥಿಗಳಾಗಿದ್ದಾರೆ.

ಪರೀಕ್ಷಾ ಕಾರ್ಯಕ್ಕೆ 1,109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ, 525 ತಾಲೂಕು ಜಾಗೃತ ದಳ ಮತ್ತು 2,373 ವಿಶೇಷ ಜಾಗೃತ ದಳ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಈ ಹಿಂದೆ ಮೌಲ್ಯಮಾಪನದ ಸಮಯದಲ್ಲಿ KSEABಯ ಮೂಲಗಳ ಪ್ರಕಾರ, ಹಿಂದಿನ ಯೋಜನೆಯು ಮೌಲ್ಯಮಾಪನ ಕಾರ್ಯವನ್ನು 10 ರಿಂದ 12 ದಿನಗಳಲ್ಲಿ ಪೂರ್ಣಗೊಳಿಸಿ ಏಪ್ರಿಲ್ ಅಂತ್ಯದ ವೇಳೆಗೆ ಫಲಿತಾಂಶಗಳನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿತ್ತು.

 

suddiyaana