ಉಪ ಚುನಾವಣೆಗೆ ಕೌಂಟ್‌ಡೌನ್‌ – ಚನ್ನಪಟ್ಟಣಕ್ಕೆ ಡಿಕೆಸು, ಸಂಡೂರಿಗೆ ಅನ್ನಪೂರ್ಣ?

ಉಪ ಚುನಾವಣೆಗೆ ಕೌಂಟ್‌ಡೌನ್‌ – ಚನ್ನಪಟ್ಟಣಕ್ಕೆ ಡಿಕೆಸು, ಸಂಡೂರಿಗೆ ಅನ್ನಪೂರ್ಣ?

ಚನ್ನಪಟ್ಟಣ ಬೈ ಎಲೆಕ್ಷನ್‌ ಕಾವು ಜೋರಾಗಿದೆ. ಕಾಂಗ್ರೆಸ್‌ ಹಾಗೂ ಮೈತ್ರಿ ಪಕ್ಷದಿಂದ ಯಾರು ಕಣಕ್ಕೆ ಇಳಿಯುತ್ತಾರೆ ಅನ್ನೊ ಕುತೂ ಲ ಹೆಚ್ಚಾಗಿದೆ. ಇದೀಗ  ಚನ್ನಪಟ್ಟಣದಲ್ಲಿ ಡಿಕೆ ಸುರೇಶ್ ಸ್ಪರ್ಧೆ ಮಾಡುವುದು ಬಹುತೇಕ ಖಚಿತ. ಒಂದು ವೇಳೆ ಆಗದೇ ಇದ್ದರೆ ಮಾತ್ರ ಬೇರೆಯವರು ಸ್ಪರ್ಧೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಬಾಲಿವುಡ್‌ನ ಟಾಪ್ ನಟಿಯಾದ ಶ್ರದ್ಧಾ ಕಪೂರ್- ಕೋಟಿ ಕೋಟಿ ಅಭಿಮಾನಿಗಳ ಮನಸ್ಸು ಗೆದ್ದ ಶ್ರದ್ಧಾ

ಉಪಚುನಾವಣೆ ಅಭ್ಯರ್ಥಿ ಆಯ್ಕೆಯ ಭಾನುವಾರ ರಾತ್ರಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವರ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮೂರು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಚನ್ನಪಟ್ಟಣಕ್ಕೆ  ಡಿಕೆ ಸುರೇಶ್ 99% ಸ್ಪರ್ಧೆ ಮಾಡುತ್ತಾರೆ. ಒಂದು ವೇಳೆ ಕಣದಿಂದ ಹಿಂದಕ್ಕೆ ಸರಿದರೆ ಮಾತ್ರ ಬೇರೆಯವರು ಸ್ಪರ್ಧೆ ಮಾಡುತ್ತಾರೆ ಎಂದು ಸಭೆಯಲ್ಲಿ ಸಿಎಂ, ಡಿಸಿಎಂ ತಿಳಿಸಿದ್ದಾರೆ.

ಸಂಡೂರು ಕ್ಷೇತ್ರಕ್ಕೆ ಬಳ್ಳಾರಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್‌ ಫೈನಲ್‌ ಎಂಬ ಮಾಹಿತಿ ನೀಡಲಾಗಿದೆ. ಮೂರು ಕ್ಷೇತ್ರಗಳಲ್ಲಿ ನಮಗೆ ಗೆಲ್ಲುವ ಅವಕಾಶ ಹೆಚ್ಚಿದೆ. ಎರಡು ದಿನದಲ್ಲಿ ಅಭ್ಯರ್ಥಿಗಳ ಘೋಷಣೆ ಆಗಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆಯ ದಾಳಿಯ ಬಗ್ಗೆಯೂ ಮುನ್ನೆಚ್ಚರಿಕೆ ವಹಿಸಬೇಕು. ಜಾತಿ ಸಮೀಕ್ಷೆ, ಒಳ ಮೀಸಲಾತಿ, ಪಂಚಮಸಾಲಿ ಸಮುದಾಯದ ಬೇಡಿಕೆ ಕುರಿತಂತೆ ಸಮುದಾಯ ನಾಯಕರ ಜೊತೆ ಪ್ರತ್ಯೇಕ ಸಭೆ ನಡೆಸುತ್ತೇನೆ. ಮೂರೂ ಕ್ಷೇತ್ರಗಳ ಉಪಚುನಾವಣೆ ಬಹಳ ಮಹತ್ವದ್ದಾಗಿದ್ದು ನಾವು ಮೂರನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬರೂ ತಾವು ವಹಿಸಿಕೊಂಡ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಎಲ್ಲರಿಗೂ ಜವಾಬ್ದಾರಿ ಹಂಚಿಕೆ ಮಾಡಿ ಪಟ್ಟಿ ಬಿಡುಗಡೆ ಮಾಡುತ್ತೇವೆ.ಅದರಂತೆ ಎಲ್ಲರೂ ವಹಿಸಿದ ಜಬಾಬ್ದಾರಿ ನಿಭಾಯಿಸಬೇಕು ಎಂದು ಸೂಚಿಸಿದ್ದಾರೆ.

Shwetha M