ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕೌಂಟ್‌ಡೌನ್ – ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕೌಂಟ್‌ಡೌನ್ – ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಚುನಾವಣಾ ಫಲಿತಾಂಶಕ್ಕೆ ಬೆಂಗಳೂರಿನಲ್ಲಿಯೇ ಭದ್ರತೆಗಾಗಿ 1,500 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಬೆಂಗಳೂರು ನಗರದ ನಾಲ್ಕು ಮತ ಎಣಿಕೆ ಕೇಂದ್ರಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

 ಇದನ್ನೂ ಓದಿ: ಷರತ್ತುಗಳಿಗೆ ಒಪ್ಪಿದ್ರೆ ಮೈತ್ರಿಗೆ ಸಿದ್ಧ – ಸಮ್ಮಿಶ್ರ ಸರ್ಕಾರದ ನಿರೀಕ್ಷೆಯಲ್ಲಿ ಹೆಚ್ ಡಿಕೆ

ವಿಠ್ಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಕಾಲೇಜು, ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ಬಸವನಗುಡಿಯ ಬಿಎಂಎಸ್ ಕಾಲೇಜು ಹಾಗೂ ತಿಲಕ್ ನಗರದ ಎಸ್ಎಸ್ಎಂಆರ್ ವಿ ಕಾಲೇಜುಗಳಿಗೆ ಟೈಟ್ ಸೆಕ್ಯೂರಿಟಿ ಕೈಗೊಳ್ಳಲಾಗಿದೆ. ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜಿಗೆ 2 ಡಿಸಿಪಿ, 4 ಎಸಿಪಿ, 20 ಇನ್ಸ್ ಪೆಕ್ಟರ್, 72 ಪಿಎಸ್ಐ ಸೇರಿ 506 ಸಿಬ್ಬಂದಿ ಬಂದೋಬಸ್ತ್ ಗೆ ನಿಯೋಜಿಸಲಾಗಿದೆ. ಬಸವನಗುಡಿಯ ಬಿಎಂಎಸ್ ಕಾಲೇಜಿಗೆ ಇಬ್ಬರು ಡಿಸಿಪಿ, 4 ಎಸಿಪಿ, 18 ಇನ್ಸ್ ಪೆಕ್ಟರ್, 40 ಪಿಎಸ್ಐ ಸೇರಿ 275 ಸಿಬ್ಬಂದಿ, ತಿಲಕ್ ನಗರದ ಎಸ್ಎಸ್ಎಂಆರ್ ವಿ ಕಾಲೇಜಿಗೆ ಇಬ್ಬರು ಡಿಸಿಪಿ, 5 ಎಸಿಪಿ, 10 ಇನ್ಸ್ ಪೆಕ್ಟರ್, 14 ಪಿಎಸ್ಐ ಸೇರಿ 399 ಪೊಲೀಸ್ ಸಿಬ್ಬಂದಿ ಹಾಗೂ ವಿಠ್ಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಕಾಲೇಜಿಗೆ ಇಬ್ಬರು ಡಿಸಿಪಿ, 3 ಎಸಿಪಿ, 6 ಇನ್ಸ್ ಪೆಕ್ಟರ್, 15 ಪಿಎಸ್ಐ ಸೇರಿ 214 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಶನಿವಾರ ಬೆಳಗ್ಗೆ 5 ಗಂಟೆಗೆ ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮತ ಎಣಿಕೆ ಕೇಂದ್ರದ ಬಳಿ ಹಾಜರಿರಲು ಸೂಚನೆ ನೀಡಲಾಗಿದೆ. ಅಲ್ಲದೆ ಸಂಬಂಧಪಟ್ಟ ಡಿಸಿಪಿಗಳ ಬಳಿ ರಿಪೋರ್ಟ್ ಮಾಡಿಕೊಳ್ಳಲು ಕೂಡ ಸೂಚಿಸಲಾಗಿದೆ. ಸ್ಥಳೀಯ ಪೊಲೀಸರಲ್ಲದೆ ಕೇಂದ್ರದ ತುಕಡಿಗಳು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರಗಳ ಬಳಿ ಕೆಎಸ್‌ಆರ್‌ಪಿ, ಸಿಎಆರ್, ಡಿಸ್ವ್ಯಾಟ್, ವಾಟರ್ ಜೆಟ್, ಖಾಲಿ ವಾಹನಗಳನ್ನು ನಿಯೋಜಿಸಲಾಗಿದೆ. ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೂಕ್ತ ಬಂದೋಬಸ್ತ್ ಉಸ್ತುವಾರಿವಹಿಸಿಕೊಂಡಿದ್ದಾರೆ.

suddiyaana