ಜಿ 20 ಶೃಂಗಸಭೆಗೆ ಕ್ಷಣಗಣನೆ ಆರಂಭ – ದೆಹಲಿಗೆ ಬಂದಿಳಿದ ವಿದೇಶಿ ಗಣ್ಯರು

ಜಿ 20 ಶೃಂಗಸಭೆಗೆ ಕ್ಷಣಗಣನೆ ಆರಂಭ – ದೆಹಲಿಗೆ ಬಂದಿಳಿದ ವಿದೇಶಿ ಗಣ್ಯರು

ಜಿ 20 ಶೃಂಗಸಭೆಗೆ ಭಾರತ ಸರ್ವಸನ್ನದ್ಧವಾಗಿದೆ. ರಾಷ್ಟ್ರರಾಜಧಾನಿ ಸುತ್ತ ಏಳುಸುತ್ತಿನ ಕೋಟೆ ನಿರ್ಮಿಸಲಾಗಿದ್ದು, ಗಣ್ಯಾತಿಗಣ್ಯರಿಗೆ ವಾಸ್ತವ್ಯದೊಂದಿಗೆ ಹಲವು ಹಂತಗಳಲ್ಲಿ ಭದ್ರತೆ ನಿಯೋಜನೆ ಮಾಡಲಾಗಿದೆ. ದೆಹಲಿಯ ಸುತ್ತಮುತ್ತಲಿನ ವಾಯುನೆಲೆಗಳಲ್ಲೂ ಯುದ್ಧ ವಿಮಾನಗಳ ನಿಯೋಜಿಸಲಾಗಿದೆ. ಈಗಾಗಲೇ ಅಮೆರಿಕ, ಬ್ರಿಟನ್, ಇಟಲಿ ಸೇರಿದಂತೆ ಹಲವು ರಾಷ್ಟ್ರಗಳ ನಾಯಕರು ದೆಹಲಿಗೆ ಬಂದಿಳಿದಿದ್ದಾರೆ.

ಇದನ್ನೂ ಓದಿ: ಅಮೆರಿಕಾ ಪ್ರವಾಸದಲ್ಲಿದ್ದ ಧೋನಿಗೆ ಟ್ರಂಪ್ ಆಹ್ವಾನ – ಯುಎಸ್ಎ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ಗಾಲ್ಫ್ ಆಟ ಆಡಿದ ಮಾಹಿ

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಯವರನ್ನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬರಮಾಡಿಕೊಂಡಿದ್ದಾರೆ. ಎರಡು ದಿನಗಳ ಸಭೆಯಲ್ಲಿ 15ಕ್ಕೂ ಹೆಚ್ಚು ದೇಶದ ನಾಯಕರ ಜೊತೆ ನರೇಂದ್ರ ಮೋದಿ ಒನ್ ಟು ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ವ್ಯಾಪಾರ ವೃದ್ಧಿ, ದ್ವಿಪಕ್ಷೀಯ ಸ್ನೇಹ-ಸಂಬಂಧ ಸೇರಿದಂತೆ ಅನೇಕ ವಿಚಾರಗಳ ಕುರಿತು ಪ್ರಧಾನಿ ಮೋದಿ 15 ರಾಷ್ಟ್ರಗಳ ನಾಯಕರ ಜೊತೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ.

ಇನ್ನು ನಾಳಿನ ರಾಷ್ಟ್ರಪತಿ ಔತಣಕೂಟಕ್ಕೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಆದರೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜಿ20 ಔತಣಕೂಟಕ್ಕೆ ಆಹ್ವಾನಿಸಿಲ್ಲ ಎಂದು ಅವರ ಕಚೇರಿ ಖಚಿತಪಡಿಸಿದೆ.

suddiyaana