ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ! – ತಲಕಾವೇರಿಯಲ್ಲಿ ವಿಸ್ಮಯ ಕ್ಷಣ ಕಣ್ತುತುಂಬಿಕೊಳ್ಳಲು ಜನ ಕಾತುರ!

ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ! – ತಲಕಾವೇರಿಯಲ್ಲಿ ವಿಸ್ಮಯ ಕ್ಷಣ ಕಣ್ತುತುಂಬಿಕೊಳ್ಳಲು ಜನ ಕಾತುರ!

ಮಡಿಕೇರಿ: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ರಾತ್ರಿ 1 ಗಂಟೆ 27 ನಿಮಿಷಕ್ಕೆ ಕರ್ಕಾಟಕ ಲಗ್ನ ತುಲಾ ಸಂಕ್ರಮಣ ಪುಣ್ಯ ಕಾಲದಲ್ಲಿ ಕಾವೇರಿ, ತೀರ್ಥರೂಪಿಣಿಯಾಗಿ ಆವಿರ್ಭವಿಸಲಿದ್ದಾಳೆ.

ತೀರ್ಥರೂಪಿಣಿ ಕಾವೇರಿ ತಾಯಿಯನ್ನು ಕಣ್ಣು ತುಂಬಿಕೊಳ್ಳಲು ಸಹಸ್ತಾರು ಮಂದಿ ಭಕ್ತಾಧಿಗಳು ಬರುತ್ತಾರೆ. ಕೇವಲ ಕೊಡಗು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದ ಹಾಗೂ ತಮಿಳುನಾಡಿನಿಂದಲೂ ಸಾಕಷ್ಟು ಭಕ್ತರು ಆಗಮಿಸಿ ಇಲ್ಲಿಂದ ತೀರ್ಥ ಕೊಂಡೊಯ್ಯುತ್ತಾರೆ.  ‘ಬ್ರಹ್ಮಕುಂಡಿಕೆ’ಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇದ್ದು, ದೇವಾಲಯದ ಆಡಳಿತ ಮಂಡಳಿಯಿಂದ ಜಾತ್ರೆಗೆ ಭರದ ಸಿದ್ಧತೆ ಮಾಡಿಕೊಳ್ಳುತ್ತಿದೆ. ಭಾಗಮಂಡಲ ಮತ್ತು ತಲಕಾವೇರಿ ಸುಣ್ಣ ಬಣ್ಣದಿಂದ ಸಿಂಗಾರಗೊಂಡಿದ್ದು, ಪವಿತ್ರ ಜಾತ್ರೆಗೆ ಕಾವೇರಿ ತವರು ಸಜ್ಜಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.

ಇದನ್ನೂ ಓದಿ: ನವರಾತ್ರಿ ಮೂರನೇ ದಿನ ಚಂದ್ರಘಂಟೆಯ ಆರಾಧನೆ – ಈ ದೇವಿಯನ್ನು ಪೂಜಿಸಿದರೆ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳು ದೂರ ಆಗುತ್ತವೆ..!

ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ತುಲಾ ಲಘ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಪ್ರಧಾನ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಮಧ್ಯರಾತ್ರಿ ತೀರ್ಥೋದ್ಭವವಾಗುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹಾಗಾಗಿ ಬೆಳಗ್ಗೆಯಿಂದಲೇ ನಿತ್ಯ ಪೂಜಾಕರ್ಮಗಳು ನಡೆಯುತ್ತಿದೆ. ಸಂಜೆ 4 ಗಂಟೆಯ ಬಳಿಕ ಬ್ರಹ್ಮಕುಂಡಿಕೆ ಬಳಿಗೆ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿದೆ. ಕಲ್ಯಾಣಿಯ ಮೇಲ್ಭಾಗದಲ್ಲಿ ಭಕ್ತರಿಗೆ ಪವಿತ್ರ ತೀರ್ಥ ಹಂಚಲು ವ್ಯವಸ್ಥೆ ಮಾಡಲಾಗಿದೆ.

ಇಂದು ಸಂಜೆ 4 ಗಂಟೆಯ ಬಳಿಕ ಭಾಗಮಂಡಲದಿಂದ ತಲಕಾವೇರಿಗೆ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಆದರೆ ಭಕ್ತರ ಪ್ರಯಾಣಕ್ಕೆ ಉಚಿತ ಕೆಎಸ್‍ಆರ್ ಟಿಸಿ ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರ ಸ್ವಾಗತಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ನಿಯಂತ್ರಣಕ್ಕೆ ಬ್ಯಾರಿಕೇಡ್‍ಗಳನ್ನ ಹಾಕಲಾಗಿದೆ. ಅಲ್ಲಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಕಟ್ಟೆಚ್ಚರವಹಿಸಲಾಗುತ್ತದೆ. ಭದ್ರತೆಗಾಗಿ ಕೆಎಸ್‍ಆರ್‍ಪಿ ಮತ್ತು ಡಿಎಆರ್ ಪೊಲೀಸರನ್ನ ನಿಯೋಜಿಸಲಾಗಿದೆ. ತಲಕಾವೇರಿಗೆ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸಲಾದೆ. ಭಕ್ತರಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ. ಅಲ್ಲದೆ ಈ ಬಾರಿ ತೀರ್ಥ ಕೊಂಡೊಯ್ಯಲು ಪ್ಲಾಸ್ಟಿಕ್ ಬಿಂದಿಗೆ ಬಾಟಲಿ ಡಬ್ಬಗಳನ್ನು ತರುವುದನ್ನು ನಿಷೇಧಿಸಲಾಗಿದೆ.

Shwetha M