ಆರ್‌ಸಿಬಿ Vs ಸಿಎಸ್‌ಕೆ ಹೈವೋಲ್ಟೇಜ್‌ ಪಂದ್ಯಕ್ಕೆ ಕೌಂಟ್‌ಡೌನ್‌ – ಚಿನ್ನ‌‌ಸ್ವಾಮಿ ಸ್ಟೇಡಿಯಂನಲ್ಲಿ ಫುಡ್ ಟೆಸ್ಟ್‌ಗೆ ಮುಂದಾಗಿದ್ಯಾಕೆ ಸರ್ಕಾರ?

ಆರ್‌ಸಿಬಿ Vs ಸಿಎಸ್‌ಕೆ ಹೈವೋಲ್ಟೇಜ್‌ ಪಂದ್ಯಕ್ಕೆ ಕೌಂಟ್‌ಡೌನ್‌ – ಚಿನ್ನ‌‌ಸ್ವಾಮಿ ಸ್ಟೇಡಿಯಂನಲ್ಲಿ ಫುಡ್ ಟೆಸ್ಟ್‌ಗೆ ಮುಂದಾಗಿದ್ಯಾಕೆ ಸರ್ಕಾರ?

ಆರ್​ಸಿಬಿ ವರ್ಸಸ್ ಸಿಎಸ್​ಕೆ ಪಂದ್ಯ ಶನಿವಾರ ನಡೆಯಲಿದೆ. ಮೇ 18ರಂದು ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದ ತಂಡ ಪ್ಲೇಆಫ್​ಗೆ ಪ್ರವೇಶ ಪಡೆಯಲಿದೆ. ಈ ಹೈವೋಲ್ಟೇಜ್‌ ಪಂದ್ಯವನ್ನು ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್‌ ಪ್ರೇಮಿಗಳು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ಸುರಕ್ಷತಾ ಇಲಾಖೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ  ಆಹಾರ ಪರೀಕ್ಷೆ ನಡೆಸಲು ಮುಂದಾಗಿದೆ.

ಇದನ್ನೂ ಓದಿ: SSLC ಪರೀಕ್ಷೆಯಲ್ಲಿ ನೀಡಿದ್ದ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ರದ್ದತಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ!

ಹೌದು ಕಳೆದ ಪಂದ್ಯದ ವೇಳೆ ಸ್ಟೇಡಿಯಂ ಕ್ಯಾಂಟೀನ್‌ನಲ್ಲಿರುವ ಆಹಾರ ಸೇವಿಸಿ ವ್ಯಕ್ತಿಯೊಬ್ಬರು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿತ್ತು. ಈ ಬೆನ್ನಲ್ಲೇ ಆಹಾರ ಮತ್ತು ಸುರಕ್ಷತಾ ಇಲಾಖೆ ಎಚ್ಚೆತ್ತುಕೊಂಡಿದೆ. ಆಹಾರ ಸುರಕ್ಷತಾ ಪರೀಕ್ಷೆ ನಡೆಸುವುದಾಗಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ಗೆ ಪತ್ರದ ಮೂಲಕ ತಿಳಿಸಿದೆ.

ಪಂದ್ಯದ ದಿನದಂದು ಕ್ಯಾಂಟೀನ್‌ನಲ್ಲಿ ಸಿದ್ಧವಾದ ಆಹಾರವನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ. ಪರೀಕ್ಷಾ ವರದಿಯಲ್ಲಿ ನೆಗೆಟಿವ್‌ ಬಂದರೆ ಆ ಆಹಾರವನ್ನು ವಿತರಣೆ ಮಾಡಲು ಅನುಮತಿ ನೀಡಲಾಗುತ್ತದೆ. ಒಂದು ವೇಳೆ ಪಾಸಿಟಿವ್‌ ಬಂದರೆ ಆಹಾರ ವಿತರಣೆ ಮಾಡುವ ಕ್ಯಾಂಟೀನ್‌ ಮುಚ್ಚಿ ಮಾಲೀಕನ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Shwetha M