ಭಾರತ ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ – ಟೀಮ್ ಇಂಡಿಯಾಕ್ಕೆ ಶುಭಹಾರೈಸಿದ ಕ್ರಿಕೆಟ್ ಅಭಿಮಾನಿಗಳು

ಭಾರತ ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ –  ಟೀಮ್ ಇಂಡಿಯಾಕ್ಕೆ ಶುಭಹಾರೈಸಿದ ಕ್ರಿಕೆಟ್ ಅಭಿಮಾನಿಗಳು

ಏಷ್ಯಾಕಪ್ 2023 ಟೂರ್ನಿಯ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ, ಸೆಪ್ಟೆಂಬರ್ 2 ರಂದು ಕ್ಯಾಂಡಿಯ ಪಲ್ಲೆಕೆಲ್ಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬಾಬರ್ ಅಜಮ್ ನೇತೃತ್ವದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.

ಇದನ್ನೂ ಓದಿ: ಭಾರತ-ಪಾಕಿಸ್ತಾನ ಮ್ಯಾಚ್‌ ಕ್ಯಾನ್ಸಲ್‌? – ಕ್ರಿಕೆಟ್​ ಅಭಿಮಾನಿಗಳಿಗೆ ಬೇಸರ

ಟೀಮ್ ಇಂಡಿಯಾ ಆಟಗಾರರು ಸೆಪ್ಟೆಂಬರ್ 30ರ ಸಂಜೆ ದ್ವೀಪ ರಾಷ್ಟ್ರಕ್ಕೆ ತಲುಪಿದ್ದು, ಒಂದು ದಿನದ ವಿಶ್ರಾಂತಿ ಪಡೆದಿದ್ದರು. ವಿಶ್ರಾಂತಿ ಬಳಿಕ ಟೀಮ್ ಇಂಡಿಯಾ ಆಟಗಾರರು ಅಭ್ಯಾಸ ಶುರು ಮಾಡಿಕೊಂಡಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕಠಿಣ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದಾರೆ. ಜೊತೆಗೆ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಕೂಡ ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ. ಇನ್ನು ಭಾರತ-ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯ ಸೆಪ್ಟೆಂಬರ್ 2 ರಂದು ಮಧ್ಯಾಹ್ನ 3 ಗಂಟೆಯಿಂದ ಆರಂಭವಾಗಲಿದೆ. ಈಗಾಗಲೇ ಪಾಕಿಸ್ತಾನ ನೇಪಾಳ ವಿರುದ್ಧ ಮೊದಲ ಪಂದ್ಯವನ್ನು ಗೆದ್ದು ಉತ್ಸಾಹದಲ್ಲಿದೆ. ಭಾರತ ವಿರುದ್ಧ ಅದೇ ಪ್ರದರ್ಶನವನ್ನು ಮುಂದುವರೆಸುವ ತವಕದಲ್ಲಿದೆ. ಭಾರತ ತಂಡ ಕೂಡಾ ಸಾಂಪ್ರದಾಯಿಕ ಎದುರಾಳಿಗಳನ್ನು ಕಟ್ಟಿಹಾಕಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಹೀಗಾಗಿ ಈಗ ಕ್ರಿಕೆಟ್ ಅಭಿಮಾನಿಗಳ ಚಿತ್ತ ಶನಿವಾರ ನಡೆಯಲಿರುವ ಭಾರತ ಪಾಕಿಸ್ತಾನ ಪಂದ್ಯದ ಮೇಲೆ ನೆಟ್ಟಿದೆ.

ಈ ಬಾರಿಯ ಏಷ್ಯಾಕಪ್ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿರುವುದು ವಿಶೇಷ. ಅಂದರೆ ಏಷ್ಯಾಕಪ್ 2023 ರ ಆಯೋಜನೆಯ ಹಕ್ಕನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಹೊಂದಿದೆ. ಆದರೆ ಪಾಕ್‌ನಲ್ಲಿ ಟೂರ್ನಿ ಆಯೋಜಿಸಿದರೆ ಭಾರತ ಪಾಲ್ಗೊಳ್ಳದ ಕಾರಣ ಟೀಮ್ ಇಂಡಿಯಾದ ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸುತ್ತಿದೆ.

ಏಷ್ಯಾಕಪ್ನಲ್ಲಿ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೂಪರ್ ಫೋರ್ ಹಂತಕ್ಕೆ ತೇರ್ಗಡೆಯಾಗುತ್ತದೆ. ಅಂತಿಮವಾಗಿ, ಸೂಪರ್ ಫೋರ್‌ನ ಅಗ್ರ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿ ಆಗಲಿದೆ.

suddiyaana