ಆಸ್ಕರ್ ಅವಾರ್ಡ್ ಕಾರ್ಯಕ್ರಮಕ್ಕೆ ಕೌಂಟ್‌ಡೌನ್ – ಭಾರತಕ್ಕೆ ಈ ಬಾರಿ ಪ್ರಶಸ್ತಿ ಸಿಗುವ ನಿರೀಕ್ಷೆ

ಆಸ್ಕರ್ ಅವಾರ್ಡ್ ಕಾರ್ಯಕ್ರಮಕ್ಕೆ ಕೌಂಟ್‌ಡೌನ್ – ಭಾರತಕ್ಕೆ ಈ ಬಾರಿ ಪ್ರಶಸ್ತಿ ಸಿಗುವ ನಿರೀಕ್ಷೆ

ಆಸ್ಕರ್ ಅವಾರ್ಡ್ ಕಾರ್ಯಕ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಈ ಬಾರಿ ಆಸ್ಕರ್ ಅವಾರ್ಡ್ ಭಾರತೀಯರಿಗೂ ವಿಶೇಷವಾಗಿದೆ. ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಬೆಸ್ಟ್​ ಒರಿಜಿನಲ್​ ಸಾಂಗ್​ ವಿಭಾಗದಲ್ಲಿ ನಾಮಿನೇಟ್​ ಆಗಿದೆ. ಭಾರತದ ‘ಆಲ್​ ದಟ್​ ಬ್ರೀಥ್ಸ್​’, ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಕಿರುಚಿತ್ರಗಳು ಕೂಡ ನಾಮಿನೇಟ್​ ಆಗಿದ್ದು, ಭಾರತಕ್ಕೆ ಈ ಬಾರಿ ಆಸ್ಕರ್​ ಗೆಲ್ಲುವ ಚಾನ್ಸ್​ ದಟ್ಟವಾಗಿದೆ. ಪ್ರತಿವರ್ಷದಂತೆ ಈ ವರ್ಷವೂ ಅಕಾಡೆಮಿ ಪ್ರಶಸ್ತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. 2023ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಮಾರ್ಚ್​ 12ರಂದು ಲಾಸ್ ಏಂಜಲೀಸ್​ನ ಡಾಲ್ಬಿ ಥಿಯೇಟರ್​ನಲ್ಲಿ ನಡೆಯಲಿದೆ. ಅಮೆರಿಕದ ಕಾಲಮಾನ ರಾತ್ರಿ 8 ಗಂಟೆಗೆ ಕಾರ್ಯಕ್ರಮ ಆರಂಭ ಆಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಮಾರ್ಚ್​ 13ರ ಮುಂಜಾನೆ 5.30ಕ್ಕೆ ಕಾರ್ಯಕ್ರಮ ಪ್ರಾರಂಭ ಆಗಲಿದೆ.

ಇದನ್ನೂ ಓದಿ:  ‘ಫಿಫಾ’ ಬಳಿಕ ‘ಆಸ್ಕರ್’ ಅಂಗಳಕ್ಕೆ ದೀಪಿಕಾ ಪಡುಕೋಣೆ – ಹಾಲಿವುಡ್ ಮಂದಿ ಜತೆ ಮಿಂಚಲಿದ್ದಾರೆ ಬಾಲಿವುಡ್ ಬೆಡಗಿ!

ಅನೇಕ ಸೆಲೆಬ್ರಿಟಿಗಳು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಆಸ್ಕರ್​ ಕಾರ್ಯಕ್ರಮವನ್ನು ವಿವಿಧ ಕಡೆಗಳಲ್ಲಿ ನೋಡಲು ಅವಕಾಶ ಇದೆ. ಹುಲು ಲೈವ್ ಟಿವಿನಲ್ಲಿ ಇದನ್ನು ವೀಕ್ಷಿಸಬಹುದು. ಯೂಟ್ಯೂಬ್ ಟಿವಿಯಲ್ಲೂ ನೀವು ಇದನ್ನು ಉಚಿತವಾಗಿ ವೀಕ್ಷಿಸಬಹುದು. ಎಟಿ ಆ್ಯಂಡ್ ಟಿ ಟಿವಿ ಹಾಗೂ ಫುಬೋ ಟಿವಿಯಲ್ಲಿ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಇದೆ. ಎಬಿಸಿ ವೆಬ್​ಸೈಟ್​ನಲ್ಲಿ ಆಸ್ಕರ್ ಕಾರ್ಯಕ್ರಮ ಉಚಿತವಾಗಿ ವೀಕ್ಷಿಸಬಹುದು. ಈ ವರ್ಷ ಜಿಮ್ಮಿ ಕಿಮ್ಮೆಲ್ ಅವರು ಕಾರ್ಯಕ್ರಮವನ್ನು ಹೋಸ್ಟ್ ಮಾಡಲಿದ್ದಾರೆ. 2018ರಿಂದ ಈಚೆಗೆ ಅವರು ಎರಡು ಬಾರಿ ಆಸ್ಕರ್ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ದೀಪಿಕಾ ಪಡುಕೋಣೆ ಅವರು ಪ್ರಶಸ್ತಿ ನೀಡಲಿದ್ದಾರೆ.

suddiyaana