ವಿದೇಶದಿಂದ ಭಾರತಕ್ಕೆ ಬರುವ ಮುನ್ನವೇ ಸಂಸದ ಪ್ರಜ್ವಲ್​ ರೇವಣ್ಣ ಮಾಸ್ಟರ್​​ ಪ್ಲಾನ್!

ವಿದೇಶದಿಂದ ಭಾರತಕ್ಕೆ ಬರುವ ಮುನ್ನವೇ ಸಂಸದ ಪ್ರಜ್ವಲ್​ ರೇವಣ್ಣ ಮಾಸ್ಟರ್​​ ಪ್ಲಾನ್!

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು ಮೇ.31 ರಂದು ಭಾರತಕ್ಕೆ ಬರೋದಾಗಿ ವಿಡಿಯೋವೊಂದನ್ನು ರಿಲೀಸ್‌ ಮಾಡಿದ್ದಾರೆ. ಅದರಂತೆ ಪ್ರಜ್ವಲ್ ವಿಮಾನವನ್ನು ಬುಕ್ ಮಾಡಿದ್ದಾರೆನ್ನುವ ಮಾಹಿತಿ ಕೂಡ ಲಭ್ಯವಾಗಿದೆ. ಈ ಮಧ್ಯೆ ವಿದೇಶದಿಂದ ಬರುವ ಮುನ್ನವೇ ಪ್ರಜ್ವಲ್ ರೇವಣ್ಣ ಕೋರ್ಟ್​ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ಸುಧಾಕರ್‌ಗೆ ಒಂದು ವೋಟ್‌ ಜಾಸ್ತಿ ಬಂದ್ರೂ ಶಾಸಕ ಸ್ಥಾನಕ್ಕೆ ರಾಜೀನಾಮೆ -ಪ್ರದೀಪ್ ಈಶ್ವರ್

ಹೌದು, ಹಾಸನ ಪೆನ್‌ಡ್ರೈವ್‌ ಕೇಸ್‌ಗೆ ಸಂಬಂಧಪಟ್ಟಂತೆ ಪ್ರಜ್ವಲ್‌ ರೇವಣ್ಣ  ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಬುಧವಾರ ನಿರೀಕ್ಷಣಾ ಜಾಮೀನಿಗೆ ಅರ್ಜಿ  ಸಲ್ಲಿಸಿದ್ದಾರೆ. ಪ್ರಜ್ವಲ್ ಪರ ವಕೀಲ ಅರುಣ್ ಅವರುಬುಧವಾರ ಮಧ್ಯಾಹ್ನ ಜನಪ್ರತಿನಿಧಿಗಳ ಕೋರ್ಟ್‍ಗೆ ಅರ್ಜಿ ಸಲ್ಲಿಕೆ ಮಾಡಿದರು. ಈ ಮೂಲಕ ಎಫ್‍ಐಆರ್ ದಾಖಲಾದ ತಿಂಗಳ ಬಳಿಕ ಪ್ರಜ್ವಲ್ ರೇವಣ್ಣ ಸಿಐಡಿ ಕ್ರೈಂ ನಂ 20ರಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಮೂರು ಅತ್ಯಾಚಾರ ಪ್ರಕರಣಕ್ಕೂ ಅರ್ಜಿ ಸಲ್ಲಿಕೆ ಮಾಡಿದ್ದು, ಸಂಜೆ ಪ್ರಜ್ವಲ್ ಪರ ವಕೀಲರು ಮಧ್ಯಂತರ ನಿರೀಕ್ಷಣಾ ಜಾಮೀನಿಗೆ ಕೋರ್ಟ್ ಮುಂದೆ ಮನವಿ ಮಾಡಿದರು. ಈ ಮನವಿ ತಿರಸ್ಕರಿಸಿದ ಕೋರ್ಟ್, ಮೇ 31 ವಿಚಾರಣೆ  ನಿಗದಿ ಮಾಡಿದೆ.

Shwetha M