ದಿ. ಜಯಲಲಿತಾ ಆಸ್ತಿ ಹರಾಜಿಗೆ ಕೋರ್ಟ್ ಅನುಮತಿ – ಕರ್ನಾಟಕಕ್ಕೆ ಎಷ್ಟು ಹಣ ಸಿಗುತ್ತೆ ಗೊತ್ತಾ..!?
ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾ ಅವರಿಗೆ ಸಂಬಂಧಿಸಿದ ಕೆಲ ಆಸ್ತಿಯನ್ನು ಹರಾಜು ಹಾಕಲು ಕೋರ್ಟ್ ಅನುಮತಿ ನೀಡಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಸೀರೆಗಳು, ವಾಚ್ಗಳು ಹಾಗೂ ಚಿನ್ನಾಭರಣಗಳನ್ನ ವಶಪಡಿಸಿಕೊಳ್ಳಲಾಗಿತ್ತು. ವಶಪಡಿಸಿಕೊಂಡಿದ್ದ ವಸ್ತುಗಳನ್ನೆಲ್ಲಾ ಕರ್ನಾಟಕ ವಿಧಾನಸೌಧದ ಖಜಾನೆಯಲ್ಲಿ ಇರಿಸಲಾಗಿತ್ತು. ಆದರೆ ಜಯಲಲಿತಾ ಅವರು ನಿಧನರಾದ ಹಿನ್ನೆಲೆಯಲ್ಲಿ ಆ ಆಸ್ತಿಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಡುವಂತೆ ಆರ್‌ಟಿಐ ಕಾರ್ಯಕರ್ತರೊಬ್ಬರು ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಿಗೆ ಮನವಿ ಸಲ್ಲಿಸಿದ್ದರು.
ಇದನ್ನೂ ಓದಿ : ಹಾಸನದಲ್ಲಿ ಭವಾನಿ ರೇವಣ್ಣಗೆ ಟಿಕೆಟ್ ಕೊಡಲ್ಲ – ಹೆಚ್. ಡಿ ಕುಮಾರಸ್ವಾಮಿ ಸ್ಪಷ್ಟನೆ!
ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ ವಶಪಡಿಸಿಕೊಂಡ ವಸ್ತುಗಳನ್ನು ಮಾರಾಟ ಮಾಡಲು ಸೂಕ್ತವಾದ ಅಧಿಕಾರಿಯನ್ನು ನೇಮಿಸುವಂತೆ ಸೂಚಿದೆ. ಹಾಗೇ ಹರಾಜಿನಲ್ಲಿ ಬಂದ ಹಣದಲ್ಲಿ ಕರ್ನಾಟಕ ಸರ್ಕಾರ ಖರ್ಚು ಮಾಡಿದ್ದ 5 ಕೋಟಿಯನ್ನು ತನ್ನಲ್ಲೇ ಇಟ್ಟುಕೊಂಡು ಉಳಿದ ಹಣವನ್ನು ತಮಿಳುನಾಡಿನ ಸರ್ಕಾರಕ್ಕೆ ನೀಡುವಂತೆ ಸೂಚನೆ ನೀಡಿದೆ.