ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ಉತ್ಪಾದನೆ, ಮಾರಾಟಕ್ಕೆ ಮತ್ತೆ ಸಿಕ್ತು ಗ್ರೀನ್ ಸಿಗ್ನಲ್
ಮುಂಬೈ: ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ಉತ್ಪಾದನೆ ಹಾಗೂ ಮಾರಾಟಕ್ಕೆ ಮಹಾರಾಷ್ಟ್ರ ಸರ್ಕಾರ ಹೇರಿದ್ದ ನಿಷೇಧವನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿದ್ದು, ಬೇಬಿ ಪೌಡರ್ ಉತ್ಪಾದನೆ ಮತ್ತು ಮಾರಾಟಕ್ಕೆ ಅನುಮತಿ ನೀಡಿದೆ.
ಜಾನ್ಸನ್ಸ್ ಬೇಬಿ ಪೌಡರ್ನಲ್ಲಿ ಹಾನಿಕಾರಕ ಅಂಶಗಳಿವೆ. ಕೂಡಲೇ ಉತ್ಪಾದನೆ ಹಾಗೂ ಮಾರಾಟ ನಿಲ್ಲಿಸಬೇಕು ಎಂದು 2022ರ ಸೆಪ್ಟೆಂಬರ್ 15ರಂದು ಸೂಚನೆ ನೀಡಿ ಕಂಪನಿಯ ಪರವಾನಗಿಯನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕಂಪನಿಯು ಹೈಕೋರ್ಟ್ ಮೊರೆ ಹೋಗಿತ್ತು. ಕಂಪನಿಯ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ.
ಇದನ್ನೂ ಓದಿ: ಕೋರ್ಟ್ಗೆ ಕಾಲಿಡಲಿರುವ ರೋಬೋಟ್ ವಕೀಲ – ಜಗತ್ತಿನಲ್ಲೇ ಪ್ರಥಮ ಬಾರಿಗೆ ರೋಬೋಟ್ ಲಾಯರ್ ಪ್ರಯೋಗ..!
“ಸೌಂದರ್ಯವರ್ಧಕ ಉತ್ಪನ್ನಗಳಿಗೆ ಗುಣಮಟ್ಟ ಮತ್ತು ಸುರಕ್ಷತೆಯ ಮಾನದಂಡ ಕಾಪಾಡಿಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ. ಉತ್ಪನ್ನಗಳಲ್ಲಿ ಸ್ವಲ್ಪ ವ್ಯತ್ಯಯ ಉಂಟಾದರೆ ಇಡೀ ಉತ್ಪಾದನಾ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವುದು ಸಮಂಜಸವಾಗಿ ತೋರುತ್ತಿಲ್ಲ” ಎಂದು ಪೀಠವು ಅರ್ಜಿ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಎಸ್.ಜಿ.ಡಿಗೆ ಅವರ ವಿಭಾಗೀಯ ಪೀಠವು, ಪೌಡರ್ ಉತ್ಪಾದನೆ ಮತ್ತು ಮಾರಾಟಕ್ಕೆ ಕಂಪನಿಗೆ ಅನುಮತಿ ನೀಡಿದೆ.