‘ಪಾರ್ಟಿ’ಗೆ ಹಾಡು ಕದ್ದ ರಕ್ಷಿತ್ ಶೆಟ್ಟಿಗೆ ಹೈಕೋರ್ಟ್ ಶಾಕ್ – 25 ಲಕ್ಷ ದಂಡ, ಜೈಲು ಶಿಕ್ಷೆಯಿಂದ ಜಸ್ಟ್ ಮಿಸ್!

‘ಪಾರ್ಟಿ’ಗೆ ಹಾಡು ಕದ್ದ ರಕ್ಷಿತ್ ಶೆಟ್ಟಿಗೆ ಹೈಕೋರ್ಟ್ ಶಾಕ್ – 25 ಲಕ್ಷ ದಂಡ, ಜೈಲು ಶಿಕ್ಷೆಯಿಂದ ಜಸ್ಟ್ ಮಿಸ್!

ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಹಾಡುಗಳನ್ನು ಅನುಮತಿಯಿಲ್ಲದೆ ಬಳಸಿದ ಪ್ರಕರಣದಲ್ಲಿ ದಿಲ್ಲಿ ಹೈಕೋರ್ಟ್ ರಕ್ಷಿತ್ ಶೆಟ್ಟಿ ನೇತೃತ್ವದ ಪರಮ್ವಾಹ್ ಸ್ಟುಡಿಯೋಸ್‌ ಗೆ 25 ಲಕ್ಷ ರೂ. ಪಾವತಿಸಲು ಆದೇಶಿಸಿದೆ. MRT ಮ್ಯೂಸಿಕ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ತೇಜಸ್ ಕರಿಯಾ ಅವರು, ಇದು ಕೃತಿಸ್ವಾಮ್ಯ ಉಲ್ಲಂಘನೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಚಿತ್ರದಲ್ಲಿ “ಒಮ್ಮೆ ನಿನ್ನನು” ಹಾಡು 31 ಸೆಕೆಂಡುಗಳು ಹಾಗೂ “ನ್ಯಾಯ ಎಲ್ಲಿದೆ” ಹಾಡು 7 ಸೆಕೆಂಡುಗಳು ಬಳಸಲಾಗಿದೆ. ಸ್ವಲ್ಪ ಸಮಯ ಮಾತ್ರ ಬಳಸಿದ್ದೇವೆ ಎಂಬ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ. ಒಂದು ಸೆಕೆಂಡಿನ ದೃಶ್ಯವನ್ನೂ ಬಳಸಲು ಸಹ ಮಾಲೀಕರ ಅನುಮತಿ ಬೇಕು ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಗ್ರಾಹಕರಿಗೆ ಏಪ್ರಿಲ್‌ ಶಾಕ್‌! –  ಎಲ್‌ಪಿಜಿ ಸಿಲಿಂಡರ್ ಬೆಲೆ ಬರೋಬ್ಬರಿ 195.50 ರೂ. ಏರಿಕೆ

ವಿಚಾರಣೆ ವೇಳೆ ರಕ್ಷಿತ್ ಶೆಟ್ಟಿ ತಂಡ ತಮ್ಮ ವಾದ ಮಂಡಿಸಿದರೂ ಅದು ನ್ಯಾಯಾಲಯಕ್ಕೆ ಮನವರಿಕೆಯಾಗಿಲ್ಲ. ‘ನ್ಯಾಯ ಎಲ್ಲಿದೆ’ ಹಾಡನ್ನು ಕೇವಲ 7 ಸೆಕೆಂಡ್ ಮತ್ತು ‘ಒಮ್ಮೆ ನಿನ್ನನ್ನು’ ಹಾಡನ್ನು 31 ಸೆಕೆಂಡ್ ಮಾತ್ರ ಬಳಸಲಾಗಿದೆ. ಇದು ಅತೀ ಕಡಿಮೆ ಅವಧಿ ಆಗಿರುವುದರಿಂದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗುವುದಿಲ್ಲ ಎಂದು ವಾದಿಸಲಾಗಿತ್ತು.

ಈ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, ‘ಹಾಡುಗಳ ಬಳಕೆಯು ಕೇವಲ ಕಾಕತಾಳೀಯವಲ್ಲ. ಬದಲಾಗಿ ಸಿನಿಮಾದ ಕಥೆಯ ನಿರೂಪಣೆಗೆ ಪೂರಕವಾಗಿ ಮತ್ತು ವಾಣಿಜ್ಯ ಲಾಭಕ್ಕಾಗಿ ಉದ್ದೇಶಪೂರ್ವಕವಾಗಿ ಬಳಸಲಾಗಿದೆ’. ನಾಯಕ ಸಂಕಷ್ಟದಲ್ಲಿರುವಾಗ ‘ನ್ಯಾಯ ಎಲ್ಲಿದೆ’ ಹಾಡನ್ನು ಹಿನ್ನೆಲೆಯಲ್ಲಿ ಹಾಕಿರುವುದು ಒಂದು ಸೃಜನಾತ್ಮಕ ನಿರ್ಧಾರವಾಗಿದ್ದು, ಇದು ಹಕ್ಕುಸ್ವಾಮ್ಯದ ಅಡಿ ಬರುತ್ತದೆ ಎಂದು ಕೋರ್ಟ್ ಹೇಳಿದೆ.

ಜೈಲುಶಿಕ್ಷೆಯಿಂದ ಜಸ್ಟ್ ಮಿಸ್  

ನ್ಯಾಯಾಲಯವು ರಕ್ಷಿತ್ ಶೆಟ್ಟಿ ಅವರಿಗೆ ಜೈಲು ಶಿಕ್ಷೆ ವಿಧಿಸುವುದರಿಂದ ವಿನಾಯಿತಿ ನೀಡಿದೆಯಾದರೂ, ಹಕ್ಕುಸ್ವಾಮ್ಯ ಉಲ್ಲಂಘನೆಗಾಗಿ ಈಗಾಗಲೇ ಠೇವಣಿ ಇರಿಸಲಾಗಿರುವ 20 ಲಕ್ಷ ರೂಪಾಯಿಗಳನ್ನು ಎಮ್‌ಆರ್‌ಟಿ ಮ್ಯೂಸಿಕ್‌ಗೆ ನೀಡಲು ಸೂಚಿಸಿದೆ. ನ್ಯಾಯಾಲಯದ ಆದೇಶವನ್ನು ಸಮಯಕ್ಕೆ ಸರಿಯಾಗಿ ಪಾಲಿಸದ ಕಾರಣಕ್ಕೆ ಹೆಚ್ಚುವರಿಯಾಗಿ 5 ಲಕ್ಷ ರೂಪಾಯಿ ದಂಡ ಕಟ್ಟಬೇಕೆಂದು ಆದೇಶ ನೀಡಿದೆ.

Kishor KV