ದೇಶದಲ್ಲಿಂದು 9,629 ಹೊಸ ಕೇಸ್ ಪತ್ತೆ, 29 ಮಂದಿ ಸಾವು
ನವದೆಹಲಿ: ಭಾರತದಲ್ಲಿ ಕೋರೊನಾ ಪಾಸಿಟಿವ್ ಕೇಸ್ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 9,629 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಒಂದೇ ದಿನ 9,629 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 62,293ಕ್ಕೆ ತಲುಪಿದೆ. ಕೇರಳದಲ್ಲಿ 9, ದೆಹಲಿಯಲ್ಲಿ 6, ಮಹಾರಾಷ್ಟ್ರದಲ್ಲಿ ಮತ್ತು ರಾಜಸ್ಥಾನದಲ್ಲಿ ತಲಾ 3, ಹರಿಯಾಣ ಮತ್ತು ತಲಾ 2 ಮಂದಿ ಸೇರಿದಂತೆ ಕೋವಿಡ್ ನಿಂದ ಒಂದೇ ದಿನ 29 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಕುಸ್ತಿಪಟುಗಳ ಹೋರಾಟಕ್ಕೆ ಸಿಕ್ಕಿತು ‘ಬಲ’ – ದೆಹಲಿ ಪೊಲೀಸರಿಗೆ ಸುಪ್ರೀಂಕೋರ್ಟ್ ನೋಟಿಸ್
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,49,16,736ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,398ಕ್ಕೆ ಏರಿಕೆಯಾಗಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,43,23,045ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 1,89,087 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 92,56,86,127 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.