ಕೋವಿಶೀಲ್ಡ್ ಪಡೆದವರು ತಂಪುಪಾನಿಯ, ಐಸ್ ಕ್ರೀಮ್ ಸೇವಿಸಬಹುದಾ? – ಆರೋಗ್ಯ ಇಲಾಖೆ ಹೇಳಿದ್ದೇನು?

ಆಸ್ಟ್ರಾಜೆನಿಕಾ ಸಂಸ್ಥೆಯ ಭಾರತೀಯ ಅವೃತ್ತಿಯಾದ ಕೋವಿಶೀಲ್ಡ್ ಲಸಿಕೆಯಿಂದ ಅತಿ ವಿರಳ ಪ್ರಕರಣಗಳಲ್ಲಿ ಥ್ರೋಂಬೋಸಿಸ್ ವಿತ್ ಥ್ರೋಂಬೋಸೈಟೋಪೇನಿಯಾ ಸಿಂಡ್ರೋಮ್ (ಟಿಎಸ್ಎಸ್) ಉಂಟಾಗಬಹುದು ಎನ್ನಲಾಗಿದೆ. ರಕ್ತ ಹೆಪ್ಪುಗಟ್ಟುವಿಕೆ ಹಾಗೂ ರಕ್ತ ಕಣಗಳ ಕುಸಿತ ಆಗಬಹುದು ಎನ್ನಲಾಗಿದ್ದು, ಆಸ್ಟ್ರಾಜೆನಿಕಾ ಸಂಸ್ಥೆ ನ್ಯಾಯಾಲಯದಲ್ಲೇ ಈ ವಿಚಾರ ಒಪ್ಪಿಕೊಂಡಿದೆ. ಇದೀಗ ಈ ವಿಚಾರ ಭಾರತದಲ್ಲಿ ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದ್ದು ಭಾರತೀಯರಲ್ಲಿ ಆತಂಕ ಹೆಚ್ಚಾಗಿದೆ.
ಇದನ್ನೂ ಓದಿ: ದೇಶ ಬಿಟ್ಟು ಹೋಗಲು ಸಜ್ಜಾದ್ರಾ ಹೆಚ್.ಡಿ ರೇವಣ್ಣ? – ಲುಕ್ಔಟ್ ನೋಟಿಸ್ ಜಾರಿ ಮಾಡಿದ ಎಸ್ಐಟಿ!
ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮಗಳಿವೆ ಎಂಬ ವಿಚಾರ ಗೊತ್ತಾಗುತ್ತಿದ್ದಂತೆ ಹಲವು ಸುಳ್ಳು ಸುದ್ದಿಗಳು ವರದಿಯಾಗುತ್ತಿದೆ. ಕೋವಿಶೀಲ್ಡ್ ಲಸಿಕೆ ಪಡೆದವರು ಫ್ರಿಜ್ ನೀರು, ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದೀಗ ಈ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ರೀತಿಯ ಸುದ್ದಿ ಸುಳ್ಳಾಗಿದ್ದು, ಇಂತಹ ಯಾವುದೇ ಸುತ್ತೋಲೆ ಇಲಾಖೆ ಹೊರಡಿಸಿಲ್ಲ. ಗಾಬರಿ ಗೊಳ್ಳದಿರಿ, ತಪ್ಪು ಮಾಹಿತಿ ಬಗ್ಗೆ ಜಾಗೃತಿ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ರೀತಿ ಸೂಚನೆ ನೀಡಿರುವ ಕಾಲೇಜುಗಳಿಗೆ ಕಾರಣ ಕೇಳಿ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ.
ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ, ಎಲ್ಲ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್ ನೀರು, ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು. ಏಕೆಂದರೆ ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು ದಿಢೀರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುತ್ತಿದೆ. ಹೀಗಾಗಿ ಮೇಲೆ ತಿಳಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು ಎಂದು ಖಾಸಗಿ ಕಾಲೇಜು ಸುತ್ತೋಲೆ ಹೊರಡಿಸಿತ್ತು. ಖಾಸಗಿ ಕಾಲೇಜೊಂದು ಈ ರೀತಿಯಾಗಿ ನೋಟಿಸ್ ಹೊರಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ಹರದಾಡಲು ಆರಂಭಿಸಿತು. ಇದರಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದೆ.