ಕೋವಿಶೀಲ್ಡ್​ ಪಡೆದವರು ತಂಪುಪಾನಿಯ, ಐಸ್​ ಕ್ರೀಮ್ ಸೇವಿಸಬಹುದಾ? – ಆರೋಗ್ಯ ಇಲಾಖೆ ಹೇಳಿದ್ದೇನು?

ಕೋವಿಶೀಲ್ಡ್​ ಪಡೆದವರು ತಂಪುಪಾನಿಯ, ಐಸ್​ ಕ್ರೀಮ್ ಸೇವಿಸಬಹುದಾ? – ಆರೋಗ್ಯ ಇಲಾಖೆ ಹೇಳಿದ್ದೇನು?

ಆಸ್ಟ್ರಾಜೆನಿಕಾ ಸಂಸ್ಥೆಯ ಭಾರತೀಯ ಅವೃತ್ತಿಯಾದ ಕೋವಿಶೀಲ್ಡ್‌ ಲಸಿಕೆಯಿಂದ ಅತಿ ವಿರಳ ಪ್ರಕರಣಗಳಲ್ಲಿ ಥ್ರೋಂಬೋಸಿಸ್ ವಿತ್ ಥ್ರೋಂಬೋಸೈಟೋಪೇನಿಯಾ ಸಿಂಡ್ರೋಮ್ (ಟಿಎಸ್‌ಎಸ್) ಉಂಟಾಗಬಹುದು ಎನ್ನಲಾಗಿದೆ. ರಕ್ತ ಹೆಪ್ಪುಗಟ್ಟುವಿಕೆ ಹಾಗೂ ರಕ್ತ ಕಣಗಳ ಕುಸಿತ ಆಗಬಹುದು ಎನ್ನಲಾಗಿದ್ದು, ಆಸ್ಟ್ರಾಜೆನಿಕಾ ಸಂಸ್ಥೆ ನ್ಯಾಯಾಲಯದಲ್ಲೇ ಈ ವಿಚಾರ ಒಪ್ಪಿಕೊಂಡಿದೆ. ಇದೀಗ ಈ ವಿಚಾರ ಭಾರತದಲ್ಲಿ ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದ್ದು ಭಾರತೀಯರಲ್ಲಿ ಆತಂಕ ಹೆಚ್ಚಾಗಿದೆ.

ಇದನ್ನೂ ಓದಿ: ದೇಶ ಬಿಟ್ಟು ಹೋಗಲು ಸಜ್ಜಾದ್ರಾ ಹೆಚ್‌.ಡಿ ರೇವಣ್ಣ? – ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ ಎಸ್‌ಐಟಿ!

ಕೋವಿಶೀಲ್ಡ್‌ ಲಸಿಕೆಯಿಂದ ಅಡ್ಡಪರಿಣಾಮಗಳಿವೆ ಎಂಬ ವಿಚಾರ ಗೊತ್ತಾಗುತ್ತಿದ್ದಂತೆ ಹಲವು ಸುಳ್ಳು ಸುದ್ದಿಗಳು ವರದಿಯಾಗುತ್ತಿದೆ.  ಕೋವಿಶೀಲ್ಡ್​ ಲಸಿಕೆ ಪಡೆದವರು ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಸೋಶಿಯಲ್‌ ಮೀಡಿಯಾದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದೀಗ ಈ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ರೀತಿಯ ಸುದ್ದಿ ಸುಳ್ಳಾಗಿದ್ದು, ಇಂತಹ ಯಾವುದೇ ಸುತ್ತೋಲೆ ಇಲಾಖೆ ಹೊರಡಿಸಿಲ್ಲ. ಗಾಬರಿ ಗೊಳ್ಳದಿರಿ, ತಪ್ಪು ಮಾಹಿತಿ ಬಗ್ಗೆ ಜಾಗೃತಿ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ರೀತಿ ಸೂಚನೆ ನೀಡಿರುವ ಕಾಲೇಜುಗಳಿಗೆ ಕಾರಣ ಕೇಳಿ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ.

ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ, ಎಲ್ಲ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು. ಏಕೆಂದರೆ ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್​​ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು ದಿಢೀರ್​ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುತ್ತಿದೆ. ಹೀಗಾಗಿ ಮೇಲೆ ತಿಳಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು ಎಂದು ಖಾಸಗಿ ಕಾಲೇಜು ಸುತ್ತೋಲೆ ಹೊರಡಿಸಿತ್ತು. ಖಾಸಗಿ ಕಾಲೇಜೊಂದು ಈ ರೀತಿಯಾಗಿ ನೋಟಿಸ್​ ಹೊರಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ಹರದಾಡಲು ಆರಂಭಿಸಿತು. ಇದರಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದೆ.

Shwetha M

Leave a Reply

Your email address will not be published. Required fields are marked *