ಎಕ್ಸ್‌ಪ್ರೆಸ್ ವೇ ನಿರ್ಮಾಣದ ವೇಳೆ ಕ್ರೇನ್ ಕುಸಿತ – ಸಾವಿನ ಸಂಖ್ಯೆ 20ಕ್ಕೆ ಏರಿಕೆ

ಎಕ್ಸ್‌ಪ್ರೆಸ್ ವೇ ನಿರ್ಮಾಣದ ವೇಳೆ ಕ್ರೇನ್ ಕುಸಿತ – ಸಾವಿನ ಸಂಖ್ಯೆ 20ಕ್ಕೆ ಏರಿಕೆ

ಸಮೃದ್ಧಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೂರನೇ ಹಂತದ ಹೆದ್ದಾರಿ ಕಾಮಗಾರಿ ವೇಳೆ ಸೇತುವೆ ಚಪ್ಪಡಿ ಮೇಲೆ ಬೃಹತ್‌ ಗಾತ್ರದ ಕ್ರೇನ್‌ ಒಂದು ಕುಸಿದು ಬಿದ್ದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಸಾವಿನ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಸೋಮವಾರ ತಡರಾತ್ರಿ ವೇಳೆ ಈ ದುರ್ಘಟನೆ ನಡೆದಿದೆ. ದುರ್ಘಟನೆಯಲ್ಲಿ 17 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಸಾವಿನ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಥಾಣೆ ಜಿಲ್ಲೆಯ ಮುಂಬೈ-ನಾಗ್ಪುರ್ ಸಮೃದ್ಧಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೂರನೇ ಹಂತದ ಕಾಮಗಾರಿಯಲ್ಲಿ ಈ ಯಂತ್ರವನ್ನು ಬಳಸಲಾಗುತ್ತಿತ್ತು.

ಇದನ್ನೂ ಓದಿ: ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ – 50 ದಿನಗಳಲ್ಲಿ 30 ಕೋ. ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ.. 700 ಕೋ. ಟಿಕೆಟ್‌ ಮೊತ್ತ!

ಅಧಿಕಾರಿಗಳ ಪ್ರಕಾರ ಈ ಘಟನೆ ಸೋಮವಾರ ಮಧ್ಯರಾತ್ರಿ 12 ಗಂಟೆ ವೇಳೆಗೆ ನಡೆದಿದೆ. ಗರ್ಡರ್ ಲಾಂಚಿಂಕ್ ಮೆಷಿನ್ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ-ಎನ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದವು.

ಈ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ , ಶಹಾಪುರ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು. ಕಾರ್ಮಿಕರ ಸಾವು ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕವಾಗಿದೆ. ಅವರಿಗೆ ನನ್ನ ಮನಃಪೂರ್ವಕವಾಗಿ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಮತ್ತು ಅವರ ಕುಟುಂಬದವರ ದುಃಖದಲ್ಲಿ ನಾವು ಭಾಗಿಯಾಗುತ್ತೇವೆ. ಅಪಘಾತದಲ್ಲಿ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಫಡ್ನವೀಸ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೂಡ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಟ್ವಿಟರ್​ ಮೂಲಕ ಸಾಂತ್ವನ ಹೇಳಿದ್ದಾರೆ. ಮಹಾರಾಷ್ಟ್ರದ ಶಹಾಪುರದಲ್ಲಿ ಸಂಭವಿಸಿದ ದುರಂತದಿಂದ ನೋವಾಗಿದೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪ ಸೂಚಿಸುತ್ತೇನೆ. ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪಿಎಂಎನ್‌ಆರ್‌ಎಫ್‌ನಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

suddiyaana