ಕ್ರಿಕೆಟ್ ದೇವರಿಗೆ ವಿಶ್ವಕಪ್‌ನ ಗೋಲ್ಡನ್ ಟಿಕೆಟ್ – ಸಚಿನ್ ತೆಂಡೂಲ್ಕರ್‌ನ್ನ ವಿಶ್ವಕಪ್‌ಗೆ ಆಹ್ವಾನಿಸಿದ ಬಿಸಿಸಿಐ

ಕ್ರಿಕೆಟ್ ದೇವರಿಗೆ ವಿಶ್ವಕಪ್‌ನ ಗೋಲ್ಡನ್ ಟಿಕೆಟ್ – ಸಚಿನ್ ತೆಂಡೂಲ್ಕರ್‌ನ್ನ ವಿಶ್ವಕಪ್‌ಗೆ ಆಹ್ವಾನಿಸಿದ ಬಿಸಿಸಿಐ

ಭಾರತದಲ್ಲಿ ವಿಶ್ವಕಪ್ ಹಬ್ಬಕ್ಕೆ ಇನ್ನು ಕೆಲವೇ ದಿನಗಳಷ್ಟೇ ಬಾಕಿಯಿದೆ. ಅಕ್ಟೋಬರ್ 5 ರಿಂದ ಭಾರತದಲ್ಲಿ ಏಕದಿನ ವಿಶ್ವಕಪ್ ಆರಂಭವಾಗುತ್ತಿದೆ. ಗೋಲ್ಡನ್ ಟಿಕೆಟ್ ಫಾರ್ ಇಂಡಿಯಾ ಐಕಾನ್ಸ್ ಯೋಜನೆಯಡಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಬಿಸಿಸಿಐ ಗೋಲ್ಡನ್ ಟಿಕೆಟ್ ನೀಡಿ ವಿಶ್ವಕಪ್‌ಗೆ ಆಹ್ವಾನ ನೀಡಿದೆ.

ಇದನ್ನೂ ಓದಿ:  ‘800’ ಸಿನಿಮಾ ಟ್ರೇಲರ್ ರಿಲೀಸ್ ಮಾಡಿದ ಸಚಿನ್ ತೆಂಡೂಲ್ಕರ್ – ಗೆಳೆಯ ಮುತ್ತಯ್ಯ ಮುರುಳಿಧರನ್ ಪಟ್ಟ ಕಷ್ಟ ಎಲ್ಲರಿಗೂ ಗೊತ್ತಾಗಬೇಕು ಎಂದ ಕ್ರಿಕೆಟ್ ದೇವರು

ಕೆಲವು ದಿನಗಳ ಹಿಂದೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ಬಿಸಿಸಿಐ ಗೋಲ್ಡನ್ ಟಿಕೆಟ್ ನೀಡಿ ವಿಶ್ವಕಪ್‌ಗೆ ಆಹ್ವಾನ ನೀಡಿತ್ತು. ಇದೀಗ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಗೆ ಗೋಲ್ಡನ್ ಟಿಕೆಟ್ ನೀಡಿ ವಿಶ್ವಕಪ್‌ಗೆ ಆಹ್ವಾನ ನೀಡಿದೆ. ಭಾರತದ 10 ಸ್ಥಳಗಳಲ್ಲಿ ವಿಶ್ವಕಪ್ ಪಂದ್ಯಾವಳಿಗಳು ನಡೆಯಲಿದೆ. 10 ದೇಶದ ತಂಡಗಳು ಮುಖಾಮುಖಿಯಾಗುತ್ತಿವೆ. ವಿಶ್ವಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತ ಏಕಾಂಗಿಯಾಗಿ ಈ ವಿಶ್ವಕಪ್‌ಗೆ ಆತಿಥ್ಯವಹಿಸುತ್ತಿದೆ. ಹೀಗಾಗಿ ಈ ಪಂದ್ಯಾವಳಿಯನ್ನು ಸ್ಮರಣೀಯಗೊಳಿಸುವ ಸಲುವಾಗಿ ಬಿಸಿಸಿಐ ಹಲವು ಯೋಜನೆಗಳನ್ನು ಹಾಕಿಕೊಂಡಿದೆ. ಅದರಲ್ಲಿ ಗೋಲ್ಡನ್ ಟಿಕೆಟ್ ಫಾರ್ ಇಂಡಿಯಾ ಐಕಾನ್ಸ್ ಯೋಜನೆಯೂ ಒಂದಾಗಿದ್ದು, ಈ ಯೋಜನೆಯಡಿಯಲ್ಲಿ ಭಾರತದ ಹಲವು ಸಾಧಕರಿಗೆ ಈ ವಿಶೇಷ ಆಹ್ವಾನವನ್ನು ನೀಡಲಾಗುತ್ತಿದೆ. ಹೀಗಾಗಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಗೆ ಗೋಲ್ಡನ್ ಟಿಕೆಟ್ ನೀಡಿ ವಿಶ್ವಕಪ್‌ಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಸಚಿನ್ ತೆಂಡೂಲ್ಕರ್ ಅವರಿಗೆ ವಿಶ್ವಕಪ್ ಗೋಲ್ಡನ್ ಟಿಕೆಟ್ ನೀಡಿರುವ ಫೋಟೋವನ್ನು ಬಿಸಿಸಿಐ ಹಂಚಿಕೊಂಡಿದೆ.

suddiyaana