2028ರ ಒಲಿಂಪಿಕ್ಸ್ ಗೆ ಟಿ-20 ಕ್ರಿಕೆಟ್ ಸೇರ್ಪಡೆ – ಇದೇ ವಾರದಲ್ಲೇ ಅಧಿಕೃತ ಘೋಷಣೆ
ಒಲಿಂಪಿಕ್ ಅಂದ್ರೆನೆ ಅದು ಕ್ರೀಡಾ ಜಗತ್ತಿನ ಬಹುದೊಡ್ಡ ಹಬ್ಬ. ಒಲಿಂಪಿಕ್ ಕ್ರೀಡಾಕೂಟಗಳಲ್ಲಿ ಜಯ ಸಾಧಿಸುವುದು ಒಂದು ಭಾರೀ ಪ್ರತಿಷ್ಠೆಯ ಸಂಗತಿ. ಹೀಗಾಗಿ ನಾನಾ ದೇಶಗಳ ಹಲವಷ್ಟು ಕ್ರೀಡಾಳುಗಳು ಒಲಿಂಪಿಕ್ ಕ್ರೀಡಾಕೂಟದಲ್ಲಿ ಗೆಲ್ಲುವ ಕನಸು ಹೊಂದಿರುತ್ತಾರೆ. ಇದೀಗ ಒಲಿಂಪಿಕ್ ಗೆ ಕ್ರಿಕೆಟ್ ಕೂಡ ಸೇರ್ಪಡೆಯಾಗುವ ಬಹುದೊಡ್ಡ ಕನಸು ನನಸಾಗುವ ಸಮಯ ಬಂದಿದೆ.
2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಕೂಡ ಸೇರ್ಪಡೆ ಗೊಂಡಿದೆ. ವರದಿಯ ಪ್ರಕಾರ, ಈವೆಂಟ್‌ನಲ್ಲಿ ಕ್ರಿಕೆಟ್ ಜೊತೆಗೆ ಫ್ಲ್ಯಾಗ್ ಫುಟ್‌ಬಾಲ್, ಬೇಸ್‌ಬಾಲ್ ಮತ್ತು ಸಾಫ್ಟ್‌ಬಾಲ್ ಕೂಡ ಸೇರಿಸಲಾಗಿದೆ. ಇದರ ಅಧಿಕೃತ ಘೋಷಣೆಯನ್ನು ಲಾಸ್ ಏಂಜಲೀಸ್ ಒಲಿಂಪಿಕ್ ಸಮಿತಿಯು ಇದೇ ವಾರ ಮಾಡುವ ನಿರೀಕ್ಷೆಯಿದೆ. ಲಾಸ್ ಏಂಜಲಿಸ್ ಒಲಿಂಪಿಕ್ಸ್ (Los Angeles Olympics Games) ಸಂಘಟನಾ ಸಮಿತಿ, ಈಗಾಗಲೆ ಕ್ರಿಕೆಟ್ ಜೊತೆಗೆ ಫ್ಲ್ಯಾಗ್ ಫುಟ್‌ಬಾಲ್, ಬೇಸ್‌ಬಾಲ್ ಮತ್ತು ಸಾಫ್ಟ್‌ಬಾಲ್ ಕ್ರೀಡೆಗಳನ್ನು ಹೊಸದಾಗಿ ಒಲಿಂಪಿಕ್ಸ್ಗೆ ಸೇರ್ಪಡೆಗೊಳಿಸಲು ಈಗಾಗಲೇ ನಿರ್ಧರಿಸಿದ್ದು, ಇದೇ ತಿಂಗಳಲ್ಲೇ ಅಧಿಕೃತ ಘೋಷಣೆ ಹೊರಡಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : ವಿಶ್ವದ ಅತೀ ದೊಡ್ಡ ಹಿಂದೂ ದೇಗುಲ ಅಮೆರಿಕದಲ್ಲಿ ಉದ್ಘಾಟನೆ – ಅ. 18 ರಿಂದ ಭಕ್ತರ ದರ್ಶನಕ್ಕೆ ಮುಕ್ತ
ಲಾಸ್ ಏಂಜಲಿಸ್ ಮತ್ತು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಂಸ್ಥೆಯ ಆಯೋಗವು ಮುಂದಿನ ಭಾನುವಾರದಿಂದ ಮುಂಬೈನಲ್ಲಿ ನಡೆಯಲಿರುವ 141ನೇ IOC (ಭಾರತೀಯ ಒಲಿಂಪಿಕ್ಸ್ ಸಮಿತಿ) ಸಭೆಯಲ್ಲೂ ಈ ವಿಷಯವನ್ನು ತಿಳಿಸಲಿದೆ ಎನ್ನಲಾಗಿದೆ. ಕ್ರಿಕೆಟ್ ಈ ಮುನ್ನ 1990ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಸ್ಪರ್ಧೆಯಾಗಿತ್ತು. ಆಗ ಇಂಗ್ಲೆಂಡ್-ಫ್ರಾನ್ಸ್ ಪುರುಷರ ತಂಡಗಳ ನಡುವೆ ಏಕೈಕ ಪಂದ್ಯ ನಡೆದಿತ್ತು. ಕಳೆದ ವರ್ಷ ಹರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲೂ ಮಹುಳಾ ಕ್ರಿಕೆಟ್ ಒಂದು ಭಾಗವಾಗಿತ್ತು. ಆದರೆ 2028ರ ಲಾಸ್ ಏಂಜಲಿಸ್ ಒಲಿಂಪಿಕ್ಸ್‌ನಲ್ಲಿ ಪುರುಷರು ಮತ್ತು ಮಹಿಳೆಯರ ಟಿ20 ಕ್ರಿಕೆಟ್ ವಿಭಾಗದಲ್ಲಿ ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ತಂಡಗಳು ಭಾಗವಹಿಸಲಿವೆ.
ಕ್ರಿಕೆಟ್ (Cricket) ಹೆಚ್ಚಿನ ಜನಪ್ರಿಯತೆ ಹೊಂದಿರುವ ಭಾರತ ಉಪಖಂಡದ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಲಾಸ್ ಏಂಜಲಿಸ್ ಒಲಿಂಪಿಕ್ಸ್ ಆಯೋಜಕರು, ಇದರಿಂದಾಗಿ ನೇರಪ್ರಸಾರ ಹಕ್ಕಿನಿಂದ 1,526 ಕೋಟಿ ರೂ. ಹೆಚ್ಚುವರಿ ಆದಾಯ ಬರುವ ಲೆಕ್ಕಾಚಾರ ಹೊಂದಿದ್ದಾರೆ. ಅದಕ್ಕಾಗಿ ಅಮೆರಿಕ, ವೆಸ್ಟ್ ಇಂಡೀಸ್ ಜೊತೆಗೆ ವಿಶ್ವಕಪ್ ಜಂಟಿ ಆತಿಥ್ಯ ವಹಿಸಿದೆ. ಮಾಹಿತಿ ಪ್ರಕಾರ, 2024ರ T20 ವಿಶ್ವಕಪ್ ಟೂರ್ನಿಯು ಮುಂದಿನ ಜೂನ್ 4 ರಿಂದ ಜೂನ್ 30ರ ವರೆಗೆ ನಡೆಯಲಿದೆ. ಈಗಾಗಲೇ ಐಸಿಸಿ ಅಧಿಕಾರಿಗಳು ಅಮೆರಿಕದಲ್ಲಿ ಆತಿಥ್ಯ ವಹಿಸುವ ಸಂಭಾವ್ಯ ಸ್ಥಳಗಳ ಪರಿಶೀಲನೆ ನಡೆಸಿದ್ದಾರೆ. ಒಟ್ಟಾರೆ ಕೆರೆಬಿಯನ್ ಮತ್ತು ಯುಎಸ್‌ನ 10 ಸ್ಥಳಗಳಲ್ಲಿ ವಿಶ್ವಕಪ್ ಟೂರ್ನಿ ಜರುಗಲಿದ್ದು, ಯುನೈಟೆಡ್ ಸ್ಟೇಟ್ಸ್‌ನ ಲಾಡರ್ ಹಿಲ್, ಮೋರಿಸ್ವಿಲ್ಲೆ, ಡಲ್ಲಾಸ್, ನ್ಯೂಯಾರ್ಕ್ ಜೊತೆಗೆ ಫ್ಲೋರಿಡಾದಲ್ಲಿಯೂ ಪಂದ್ಯಗಳನ್ನ ಆಯೋಜಿಸಲಾಗುತ್ತಿದೆ ಎಂದು ತಿಳಿಬಂದಿದೆ.